Yash: ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಯಶ್ ಫ್ಯಾಮಿಲಿ; ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗಳು
Yash Family: ಪತ್ನಿ ಮತ್ತು ಮಕ್ಕಳ ಜೊತೆ ‘ರಾಕಿಂಗ್ ಸ್ಟಾರ್’ ಯಶ್ ಅವರು ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅವರನ್ನು ನೋಡಲು ಫ್ಯಾನ್ಸ್ ಮುಗಿಬಿದ್ದಿದ್ದಾರೆ.
ಪ್ಯಾನ್ ಇಂಡಿಯಾ ಹೀರೋ ಯಶ್ (Yash) ಹಾಗೂ ಅವರ ಪತ್ನಿ ರಾಧಿಕಾ ಪಂಡಿತ್ ಇಂದು (ಜೂನ್ 21) ಮೈಸೂರಿನ ನಂಜನಗೂಡಿಗೆ ಭೇಟಿ ನೀಡಿದ್ದಾರೆ. ಮಕ್ಕಳಾದ ಯಥರ್ವ್ ಯಶ್ ಮತ್ತು ಆಯ್ರಾ ಯಶ್ ಜೊತೆ ಬಂದ ಯಶ್-ರಾಧಿಕಾ ಪಂಡಿತ್ (Radhika Pandit) ದಂಪತಿಯು ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದಿದ್ದಾರೆ. ದೇವಸ್ಥಾನಕ್ಕೆ ಎಂಟ್ರಿ ನೀಡುವಾಗ ಅವರನ್ನು ನೋಡಲು ಅಭಿಮಾನಿಗಳು (Yash Fans) ಮುಗಿಬಿದ್ದರು. ಯಶ್ ಮತ್ತು ರಾಧಿಕಾ ಪಂಡಿತ್ ಜೊತೆ ಫೋಟೋ ತೆಗೆದುಕೊಳ್ಳಲು ಜನರು ಕಷ್ಟಪಟ್ಟರು. ‘ಕೆಜಿಎಫ್: ಚಾಪ್ಟರ್ 2’ ಸೂಪರ್ ಹಿಟ್ ಆದ ಬಳಿಕ ಯಶ್ ಅವರ ಖ್ಯಾತಿ ಹೆಚ್ಚಿದೆ. ಅವರ ಮುಂದಿನ ಸಿನಿಮಾಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Jun 21, 2023 03:07 PM
Latest Videos