‘ಹೊಂಬಾಳೆ ಫಿಲ್ಮ್ಸ್​’ ಹೊಸ ಚಿತ್ರ ಅನೌನ್ಸ್​; ಈ ಬಾರಿ ಚಾನ್ಸ್​ ಪಡೆದಿದ್ದು ಲೇಡಿ ಡೈರೆಕ್ಟರ್​ ಸುಧಾ ಕೊಂಗರ

Hombale Films | Sudha Kongara: ನಿರ್ದೇಶಕಿ ಸುಧಾ ಕೊಂಗರ ಅವರಿಗೆ ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ನಲ್ಲಿ ಸಿನಿಮಾ ಮಾಡುವ ಅವಕಾಶ ಸಿಕ್ಕಿದೆ. ಈ ಬಗ್ಗೆ ಬ್ರೇಕಿಂಗ್​ ನ್ಯೂಸ್​ ಹೊರಬಿದ್ದಿದೆ.

‘ಹೊಂಬಾಳೆ ಫಿಲ್ಮ್ಸ್​’ ಹೊಸ ಚಿತ್ರ ಅನೌನ್ಸ್​; ಈ ಬಾರಿ ಚಾನ್ಸ್​ ಪಡೆದಿದ್ದು ಲೇಡಿ ಡೈರೆಕ್ಟರ್​ ಸುಧಾ ಕೊಂಗರ
ಹೊಂಬಾಳೆ ಫಿಲ್ಮ್ಸ್​, ಸುಧಾ ಕೊಂಗರ
Follow us
TV9 Web
| Updated By: ಮದನ್​ ಕುಮಾರ್​

Updated on:Apr 21, 2022 | 12:19 PM

ದೇಶಾದ್ಯಂತ ಈಗ ‘ಹೊಂಬಾಳೆ ಫಿಲ್ಮ್ಸ್​’ (Hombale Films) ನಿರ್ಮಾಣ ಸಂಸ್ಥೆ ಬಗ್ಗೆ ಸಿನಿಪ್ರಿಯರು ಮಾತನಾಡುತ್ತಿದ್ದಾರೆ. ‘ಕೆಜಿಎಫ್​: ಚಾಪ್ಟರ್ 2’ ಸಿನಿಮಾ ಮೂಲಕ ಈ ಸಂಸ್ಥೆಯ ಕೀರ್ತಿ ಉತ್ತುಂಗಕ್ಕೆ ಏರಿದೆ. ನಿರ್ಮಾಪಕ ವಿಜಯ್​ ಕಿರಗಂದೂರು (Vijay Kiragandur) ಅವರ ಸಿನಿಮಾ ಸಾಹಸಕ್ಕೆ ಜನರು ಉಘೇ ಉಘೇ ಎಂದಿದ್ದಾರೆ. ಚಿತ್ರರಂಗದಲ್ಲಿ ಒಂದು ಮೈಲಿಗಲ್ಲು ನಿರ್ಮಾಣ ಮಾಡಿರುವ ಈ ಸಂಸ್ಥೆಯಿಂದ ಅನೇಕ ಸಿನಿಮಾಗಳು ನಿರ್ಮಾಣ ಆಗುತ್ತಿವೆ. ಈಗ ಹೊಸ ಚಿತ್ರ ಅನೌನ್ಸ್​ ಮಾಡಲಾಗಿದೆ. ವಿಶೇಷ ಏನೆಂದರೆ, ಈ ಬಾರಿ ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ನಲ್ಲಿ ಸಿನಿಮಾ ಮಾಡುವ ಅವಕಾಶ ಪಡೆದಿರುವುದು ಲೇಡಿ ಡೈರೆಕ್ಟರ್​ ಸುಧಾ ಕೊಂಗರ!  ಮೂಲತಃ ಆಂಧ್ರ ಪ್ರದೇಶದವರಾದ ಸುಧಾ ಕೊಂಗರ (Sudha Kongara) ಅವರು ತಮಿಳು ಚಿತ್ರರಂಗದಲ್ಲಿ ಸಾಧನೆ ಮಾಡಿದ್ದಾರೆ. ಒಂದಕ್ಕಿಂತ ಒಂದು ಡಿಫರೆಂಟ್​ ಸಿನಿಮಾ ಮಾಡಿ ಸೈ ಎನಿಸಿಕೊಂಡಿದ್ದಾರೆ. ಸೂರ್ಯ ನಟನೆಯ ‘ಸೂರರೈ ಪೋಟ್ರು’ ಚಿತ್ರಕ್ಕೆ ನಿರ್ದೇಶನ ಮಾಡಿದ್ದ ಅವರು ಎಲ್ಲರ ಗಮನ ಸೆಳೆದಿದ್ದರು. ಈಗ ಸುಧಾ ಕೊಂಗರ ಮತ್ತು ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಕೈ ಜೋಡಿಸಿರುವುದು ಸಿನಿಪ್ರಿಯರಲ್ಲಿ ನಿರೀಕ್ಷೆ ಮೂಡಿಸಿದೆ.

ಸದ್ದು ಗದ್ದಲ ಇಲ್ಲದೇ ಈ ಬ್ರೇಕಿಂಗ್​ ನ್ಯೂಸ್​ ಹೊರಬಿದ್ದಿದೆ. ಅಚ್ಚರಿ ಎಂದರೆ, ಈ ಬಾರಿ ಸತ್ಯ ಘಟನೆಗಳನ್ನು ಆಧರಿಸಿ ಸಿನಿಮಾ ಮಾಡಲು ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಮುಂದಾಗಿದೆ. ಆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ‘ಕೆಲವು ನೈಜ ಕಥೆಗಳನ್ನು ಹೇಳಲೇ ಬೇಕು. ಸುಧಾ ಕೊಂಗರ ಅವರ ಜೊತೆ ನಮ್ಮ ಹೊಸ ಸಿನಿಮಾ ಅನೌನ್ಸ್​ ಮಾಡಲು ಹೆಮ್ಮೆ ಆಗುತ್ತಿದೆ’ ಎಂದು ಪೋಸ್ಟ್​ ಮಾಡಲಾಗಿದೆ.

ಸುಧಾ ಕೊಂಗರ ಅವರು ನಿರ್ದೇಶನ ಮಾಡಿದ್ದ ‘ಸೂರರೈ ಪೋಟ್ರು’ ಚಿತ್ರ ಕೂಡ ಸತ್ಯ ಘಟನೆ ಆಧರಿಸಿತ್ತು. ಕಡಿಮೆ ದರದಲ್ಲಿ ವಿಮಾನಯಾನದ ಕನಸು ನನಸಾಗಿಸಿದ ಕನ್ನಡಿಗ ಕ್ಯಾಪ್ಟನ್​ ಗೋಪಿನಾಥನ್​ ಅವರ ಜೀವನದ ಕಥೆಯನ್ನು ಇಟ್ಟುಕೊಂಡು ಸುಧಾ ಅವರು ಸಿನಿಮಾ ಮಾಡಿದ್ದರು. ಆ ಸಿನಿಮಾದಲ್ಲಿ ಸೂರ್ಯ ಹೀರೋ ಆಗಿ ನಟಿಸಿದ್ದರು. ಅಮೇಜಾನ್​ ಪ್ರೈಂ ವಿಡಿಯೋ ಮೂಲಕ ಬಿಡುಗಡೆ ಆದ ಆ ಚಿತ್ರ ಕನ್ನಡಕ್ಕೂ ಡಬ್​ ಆಗಿ ಗಮನ ಸೆಳೆದಿತ್ತು. ಈಗ ಸುಧಾ ಕೊಂಗರ ಅವರು ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ನಲ್ಲಿ ಮಾಡಲಿರುವ ಸಿನಿಮಾದಲ್ಲಿ ಯಾವ ಕಥೆ ಇರಲಿದೆ ಎಂಬುದನ್ನು ತಿಳಿಯಲು ಕಾತರ ಹೆಚ್ಚಿದೆ.

‘ಹೊಂಬಾಳೆ ಫಿಲ್ಮ್ಸ್​’ ಮೂಲಕ ಪ್ರಸ್ತುತ ಅನೇಕ ಸಿನಿಮಾಗಳ ಸಿದ್ಧವಾಗುತ್ತಿವೆ. ಪ್ರಭಾಸ್​ ನಟನೆಯ ‘ಸಲಾರ್​’, ಶ್ರೀಮುರಳಿ ಅಭಿನಯದ ‘ಬಘೀರ’, ರಿಷಬ್​​ ಶೆಟ್ಟಿ ನಿರ್ದೇಶನದ ‘ಕಾಂತಾರಾ’, ಜಗ್ಗೇಶ್​ ನಟನೆಯ ‘ರಾಘವೇಂದ್ರ ಸ್ಟೋರ್ಸ್​’ ಮುಂತಾದ ಸಿನಿಮಾಗಳು ತಯಾರಾಗುತ್ತಿವೆ. ಅವುಗಳ ಸಾಲಿಗೆ ಸುಧಾ ಕೊಂಗರ ನಿರ್ದೇಶನದ ಸಿನಿಮಾ ಕೂಡ ಸೇರ್ಪಡೆ ಆಗುತ್ತಿದೆ. ಈ ಚಿತ್ರದಲ್ಲಿ ಯಾರು ನಟಿಸಲಿದ್ದಾರೆ? ಈ ಸಿನಿಮಾ ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತಯಾರಾಗಲಿದೆಯಾ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಇದನ್ನೂ ಓದಿ:

ಟೀಸರ್​ ಮೂಲಕ ಗಮನ ಸೆಳೆದ ‘ಕಾಂತಾರ’, ‘ರಾಘವೇಂದ್ರ ಸ್ಟೋರ್ಸ್​’; ಹೊಂಬಾಳೆ ಫಿಲ್ಮ್ಸ್​ ಪ್ರಯತ್ನಕ್ಕೆ ಸಿಕ್ತು ಮೆಚ್ಚುಗೆ

Hombale Films: ಬಿಗ್​ ಬ್ರೇಕಿಂಗ್​ ನ್ಯೂಸ್​ ನೀಡಿದ ‘ಹೊಂಬಾಳೆ ಫಿಲ್ಮ್ಸ್​’; ಆರ್​ಸಿಬಿ ಜೊತೆ ಹೊಸ ಸಾಹಸ

Published On - 11:41 am, Thu, 21 April 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ