ಕರ್ನಾಟಕದಲ್ಲಿ ‘ಕೆಜಿಎಫ್ ಚಾಪ್ಟರ್ 2′ ಅಬ್ಬರ​; ಅಬ್ಬಬ್ಬಾ ಮೊದಲ ದಿನ ಇಷ್ಟೊಂದು ಶೋ?

ರಾಜ್ಯದಲ್ಲಿ ‘ಕೆಜಿಎಫ್​ ಚಾಪ್ಟರ್ 2’ಗೆ ಎಷ್ಟು ಸ್ಕ್ರೀನ್​ಗಳು ಸಿಕ್ಕಿವೆ ಎಂಬ ಪ್ರಶ್ನೆ ಮೂಡಿತ್ತು. ಇದಕ್ಕೆ ಈಗ ಉತ್ತರ ಸಿಕ್ಕಿದೆ. ಮೊದಲ ದಿನ ಕರ್ನಾಟಕದಲ್ಲಿ 500ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಕಾಣಲಿದೆ.

ಕರ್ನಾಟಕದಲ್ಲಿ ‘ಕೆಜಿಎಫ್ ಚಾಪ್ಟರ್ 2' ಅಬ್ಬರ​; ಅಬ್ಬಬ್ಬಾ ಮೊದಲ ದಿನ ಇಷ್ಟೊಂದು ಶೋ?
ಕೆಜಿಎಫ್ 2
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Apr 12, 2022 | 2:51 PM

‘ಕೆಜಿಎಫ್​ ಚಾಪ್ಟರ್​ 2’ ಸಿನಿಮಾ (KGF Chapter 2) ತೆರೆಗೆ ಬರೋಕೆ ರೆಡಿ ಆಗಿದೆ. ಏಪ್ರಿಲ್ 14ರಂದು ಬಿಡುಗಡೆ ಆಗುತ್ತಿರುವ ಈ ಸಿನಿಮಾವನ್ನು ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ. ಸಿನಿಮಾ ಹೇಗಿದೆ ಎಂಬ ಝಲಕ್ ಟ್ರೇಲರ್​ನಲ್ಲಿ ಸಿಕ್ಕಿದೆ. ಸಂಜಯ್ ದತ್​ (Sanjay Dutt) ಅವರು ಪ್ರಮುಖ ವಿಲನ್ ಆಗಿ ಕಾಣಿಸಿಕೊಳ್ಳುತ್ತಿರುವುದರಿಂದ ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಇನ್ನು, ಅಭಿಮಾನಿಗಳ ಬೇಡಿಕೆಗೆ ತಕ್ಕಂತೆ ಶೋಗಳನ್ನು ಇಡಲಾಗಿದೆ. ಬೆಂಗಳೂರಿನಲ್ಲಿ ಮಧ್ಯರಾತ್ರಿಯಿಂದಲೇ ‘ಕೆಜಿಎಫ್​ ಚಾಪ್ಟರ್​ 2’ ಪ್ರದರ್ಶನ ಕಾಣುತ್ತಿದೆ. ಹೀಗಾಗಿ, ಮೊದಲ ದಿನ ಈ ಸಿನಿಮಾ ದೊಡ್ಡ ಮಟ್ಟದ ಕಲೆಕ್ಷನ್ ಮಾಡಲಿದೆ ಎನ್ನಲಾಗುತ್ತಿದೆ.

ರಾಜ್ಯದಲ್ಲಿ ‘ಕೆಜಿಎಫ್​ ಚಾಪ್ಟರ್ 2’ಗೆ ಎಷ್ಟು ಸ್ಕ್ರೀನ್​ಗಳು ಸಿಕ್ಕಿವೆ ಎಂಬ ಪ್ರಶ್ನೆ ಮೂಡಿತ್ತು. ಇದಕ್ಕೆ ಈಗ ಉತ್ತರ ಸಿಕ್ಕಿದೆ. ಮೊದಲ ದಿನ ಕರ್ನಾಟಕದಲ್ಲಿ 500ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಕಾಣಲಿದೆ. ಅಂದರೆ, ಮೊದಲ ದಿನ ಕರ್ನಾಟಕದಲ್ಲಿ 2,500 ರಿಂದ 3,000 ಶೋಗಳು ಪ್ರದರ್ಶನ ಕಾಣಲಿವೆ. ‘ಬುಕ್​ ಮೈ ಶೋ’ದಲ್ಲಿ ಈಗಾಗಲೇ ಬುಕಿಂಗ್ ಆರಂಭಗೊಂಡಿದ್ದು, ಹಲವು ಶೋಗಳು ಸೋಲ್ಡ್ ಔಟ್ ಆಗಿದೆ.

ಬೆಂಗಳೂರಿನಲ್ಲಿ ‘ಕೆಜಿಎಫ್​ 2’ ಚಿತ್ರಕ್ಕೆ ಹಾಲಿ 500ಕ್ಕೂ ಅಧಿಕ ಶೋಗಳು ಸಿಕ್ಕಿವೆ. ಹಲವು ಮಲ್ಟಿಪ್ಲೆಕ್ಸ್​ಗಳಲ್ಲಿ ಇನ್ನೂ ಶೋ ಓಪನ್​ ಆಗಿಲ್ಲ. ಅದೂ ಸೇರ್ಪಡೆ ಆದರೆ, ಮೊದಲ ದಿನ ಈ ಸಿನಿಮಾ 1000ಕ್ಕೂ ಅಧಿಕ ಶೋ ಪ್ರದರ್ಶನ ಕಾಣಲಿದೆ. ಉತ್ತರ ಭಾರದಲ್ಲಿ ಈ ಚಿತ್ರಕ್ಕೆ ದೊಡ್ಡ ಹೈಪ್ ಸಿಕ್ಕಿದೆ. ಚಿತ್ರತಂಡ ಕೂಡ ದೊಡ್ಡಮಟ್ಟದಲ್ಲಿ ಪ್ರಚಾರ ಮಾಡಿದೆ. ಶಾಹಿದ್ ಕಪೂರ್ ನಟನೆಯ ‘ಜೆರ್ಸಿ’ ಸಿನಿಮಾ ರೇಸ್​ನಿಂದ ಹಿಂದೆ ಸರಿದಿರುವುದರಿಂದ ಯಶ್ ಚಿತ್ರಕ್ಕೆ ಮತ್ತಷ್ಟು ಸ್ಕ್ರೀನ್​ಗಳು ಸಿಗುವ ಸಾಧ್ಯತೆ ಇದೆ.

ವಿದೇಶದಲ್ಲೂ ಈ ಚಿತ್ರ ಅಬ್ಬರಿಸಲಿದೆ. ಅಮೆರಿಕ ಸೇರಿ ಹಲವು ರಾಷ್ಟ್ರಗಳಲ್ಲಿ ‘ಕೆಜಿಎಫ್ ಚಾಪ್ಟರ್​ 2’ ಸಿನಿಮಾ ನೂರಾರು ಸ್ಕ್ರೀನ್​ಗಳಲ್ಲಿ ಪ್ರದರ್ಶನ ಕಾಣುತ್ತಿದೆ. ತಮಿಳುನಾಡು, ಆಂಧ್ರ ಮೊದಲಾದ ಕಡೆಗಳಲ್ಲೂ ಚಿತ್ರಕ್ಕೆ ದೊಡ್ಡಮಟ್ಟದ ಬೇಡಿಕೆ ಇದೆ.

ಸಾಲುಸಾಲು ರಜೆ ಇರುವುದರಿಂದ ಚಿತ್ರಕ್ಕೆ ಪ್ಲಸ್ ಆಗಲಿದೆ. ಏಪ್ರಿಲ್ 14 ಅಂಬೇಡ್ಕರ್ ಜಯಂತಿ, ಏ.15 ಗುಡ್​ಫ್ರೈಡೇ, ಶನಿವಾರ, ಭಾನುವಾರ ರೆಗ್ಯುಲರ್ ರಜೆ. ಸತತ ನಾಲ್ಕು ದಿನ ರಜೆ ಇರುವುದರಿಂದ ಸಿನಿಮಾದ ಕಲೆಕ್ಷನ್ ಹೆಚ್ಚಬಹುದು. ಬಾಕ್ಸ್ ಆಫೀಸ್​ನಲ್ಲಿ ಈ ಸಿನಿಮಾ ಹೊಸ ದಾಖಲೆ ಬರೆದರೂ ಅಚ್ಚರಿ ಏನಿಲ್ಲ ಎನ್ನುತ್ತಿದ್ದಾರೆ ಬಾಕ್ಸ್​ ಆಫೀಸ್ ಪಂಡಿತರು.

ಇದನ್ನೂ ಓದಿ: ಹೊರಬಿತ್ತು ‘ಕೆಜಿಎಫ್​ ಚಾಪ್ಟರ್​ 2’ ಸಿನಿಮಾದ ಮೊದಲ ವಿಮರ್ಶೆ; ಐದಕ್ಕೆ ಐದು ಸ್ಟಾರ್​

ಪ್ರಿ-ಬುಕ್ಕಿಂಗ್​ನಲ್ಲಿ ದಾಖಲೆ ಬರೆಯುತ್ತಿರುವ ‘ಕೆಜಿಎಫ್ 2’; ಇದುವರೆಗೆ ಆದ ಕಲೆಕ್ಷನ್ ಎಷ್ಟು? ಮೊದಲ ದಿನ ಎಷ್ಟು ಗಳಿಸಬಹುದು?

Published On - 2:25 pm, Tue, 12 April 22

ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ