
ಕನ್ನಡದ ಪ್ರಶಾಂತ್ ನೀಲ್ (Prashanth Neel) ಅವರು ಸದ್ಯ ತೆಲುಗಿನಲ್ಲಿ ಬ್ಯುಸಿ ಇದ್ದಾರೆ. ಅಲ್ಲಿ ಅವರಿಗೆ ಸಾಕಷ್ಟು ಆಫರ್ಗಳು ಬರುತ್ತಿವೆ. ‘ಕೆಜಿಫ್ 2’ ಬಳಿಕ ಅವರು ತೆಲುಗಿನಲ್ಲಿ ‘ಸಲಾರ್’ ಮಾಡಿದರು. ಈಗ ಜೂನಿಯರ್ ಎನ್‌ಟಿಆರ್ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಇದಾದ ಬಳಿಕ ಅವರು ‘ಸಲಾರ್ 2’ ಕೂಡ ಮಾಡಬೇಕಿದೆ. ‘ಪುಷ್ಪ 3’ ಚಿತ್ರದ ಅಪ್ಡೇಟ್ ಸದ್ಯಕ್ಕಂತೂ ಸಿಗೋ ಸೂಚನೆ ಇಲ್ಲ. ಹೀಗಿರುವಾಗಲೇ ಅವರಿಗೆ ಅಲ್ಲು ಅರ್ಜುನ್ ಜೊತೆ ಸಿನಿಮಾ ಮಾಡೋ ಆಫರ್ ಸಿಕ್ಕಿದೆ ಎಂದು ವರದಿ ಆಗಿದೆ. ಈ ಚಿತ್ರಕ್ಕೆ ಖಡಕ್ ಟೈಟಲ್ ಕೂಡ ಇಡಲಾಗಿದೆ ಎಂದು ಹೇಳಲಾಗುತ್ತಿದೆ.
ಅಲ್ಲು ಅರ್ಜುನ್ ಅವರು ಸದ್ಯ ಅಟ್ಲಿ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಸದ್ಯ ‘AA22xA6’ ಎನ್ನುವ ಶೀರ್ಷಿಕೆ ಇಡಲಾಗಿದೆ. ಅಂದರೆ ಅಲ್ಲು ಅರ್ಜುನ್ ಅವರ 22ನೇ ಸಿನಿಮಾ ಹಾಗೂ ಅಟ್ಲಿ ಅವರ ಆರನೇ ಸಿನಿಮಾ ಇದು ಎಂಬುದನ್ನು ಸೂಚಿಸುತ್ತದೆ. ಇನ್ನು ಪ್ರಶಾಂತ್ ನೀಲ್ ಅವರು ಜೂನಿಯರ್ ಎನ್‌ಟಿಆರ್ ಸಿನಿಮಾ ಶೂಟ್ಗಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟದಲ್ಲಿದ್ದಾರೆ. ಈಗ ಪ್ರಶಾಂತ್ ನೀಲ್ ಅವರು ಅಲ್ಲು ಜೊತೆ ಕೈ ಜೋಡಿಸುತ್ತಿದ್ದಾರೆ ಎನ್ನಲಾಗಿದೆ.
ಪ್ರಶಾಂತ್ ನೀಲ್ ಸಿನಿಮಾ ಟೈಟಲ್ ಭಿನ್ನವಾಗಿರುತ್ತದೆ. ಪ್ಯಾನ್ ಇಂಡಿಯಾಗೆ ಹೊಂದಿಕೆ ಆಗುವ ಶೀರ್ಷಿಕೆಯನ್ನು ಅವರು ಆಯ್ಕೆ ಮಾಡುತ್ತಾರೆ. ಈಗ ಅವರು ತಮ್ಮ ಹೊಸ ಚಿತ್ರಕ್ಕೆ ‘ರಾವಣಂ’ ಎಂದು ಟೈಟಲ್ ಇಟ್ಟಿದ್ದಾರೆ ಎನ್ನಲಾಗಿದೆ. ಈ ಸಿನಿಮಾನ ದಿಲ್ ರಾಜು ಅವರು ನಿರ್ಮಾಣ ಮಾಡೋ ಸಾಧ್ಯತೆ ಇದೆ.
ಇದನ್ನೂ ಓದಿ: ಪ್ರಶಾಂತ್ ನೀಲ್ ಸಿನಿಮಾಗಳ ಬಗ್ಗೆ ಸಂದೀಪ್ ರೆಡ್ಡಿ ವಂಗಾ ಹೇಳಿದ್ದೇನು? ನೀವು ಇದನ್ನು ಒಪ್ಪುತ್ತೀರ?
ಆದರೆ, ಈ ಬಗ್ಗೆ ಪ್ರಶಾಂತ್ ನೀಲ್ ಆಗಲಿ, ಅಲ್ಲು ಅರ್ಜುನ್ ಅಥವಾ ದಿಲ್ ರಾಜು ಆಗಲಿ ಸ್ಪಷ್ಟನೆ ನೀಡಿಲ್ಲ. ಈ ಸಿನಿಮಾ ‘ಕೆಜಿಎಫ್’ ಹಾಗೂ ‘ಸಲಾರ್’ ಫ್ರಾಂಚೈಸ್ಗಿಂತ ದೊಡ್ಡದಾಗಿರುತ್ತದೆ ಎಂದು ಹೇಳಲಾಗಿದೆ. ಜೂನಿಯರ್ ಎನ್‌ಟಿಆರ್ ಹಾಗೂ ಪ್ರಶಾಂತ್ ನೀಲ್ ಸಿನಿಮಾಗೆ ‘ಡ್ರ್ಯಾಗನ’ ಟೈಟಲ್ ಇಡಲಾಗಿದೆ ಎನ್ನಲಾಗಿದೆ. ಈ ಸಿನಿಮಾ 2026ರ ಜೂನ್ 25ರಂದು ತೆರೆಗೆ ಬರಲಿದೆ. ಅಂದರೆ ಇಂದಿಗೆ ಸರಿಯಾಗಿ ಒಂದು ವರ್ಷಕ್ಕೆ ಈ ಚಿತ್ರ ಬಿಡುಗಡೆ ಕಾಣಲಿದೆ. ಈ ಚಿತ್ರಕ್ಕೆ ಕನ್ನಡದ ರುಕ್ಮಿಣಿ ವಸಂತ್ ನಾಯಕಿ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.