ನಟಿ ಖುಷ್ಬುಗೆ ಅನಾರೋಗ್ಯ, ಚೇತರಿಸಿಕೊಳ್ಳುತ್ತಿದ್ದೇನೆ ಎಂದ ನಟಿ: ಏನಾಗಿದೆ?

Khushbu Sundar: ಬಹುಭಾಷಾ ನಟಿ ಖುಷ್ಬು ಆರೋಗ್ಯದಲ್ಲಿ ಏರುಪೇರಾಗಿದ್ದು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆ ಬೆಡ್ ಮೇಲೆ ಮಲಗಿರುವ ತಮ್ಮ ಚಿತ್ರವನ್ನು ನಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನಟಿ ಖುಷ್ಬುಗೆ ಅನಾರೋಗ್ಯ, ಚೇತರಿಸಿಕೊಳ್ಳುತ್ತಿದ್ದೇನೆ ಎಂದ ನಟಿ: ಏನಾಗಿದೆ?
ಖುಷ್ಬು ಸುಂದರ್
Follow us
ಮಂಜುನಾಥ ಸಿ.
|

Updated on: Jun 23, 2023 | 11:27 PM

ಇತ್ತೀಚೆಗೆ ತಮಿಳುನಾಡು (Tamil Nadu) ರಾಜಕೀಯದಲ್ಲಿ ಜೋರು ಸುದ್ದಿಯಲ್ಲಿದ್ದ ನಟಿ ಖುಷ್ಬು (Khushboo)  ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಆಸ್ಪತ್ರೆಗೆ (Hospital) ದಾಖಲಾಗಿರುವ ನಟಿ, ಆಸ್ಪತ್ರೆ ಬೆಡ್​ ಮೇಲೆ ಮಲಗಿರುವ ತಮ್ಮ ಚಿತ್ರವನ್ನು ಹಂಚಿಕೊಂಡಿದ್ದು ಚೇತರಿಸಿಕೊಳ್ಳುತ್ತಿದ್ದೇನೆ ಎಂದಿದ್ದಾರೆ. ಖುಷ್ಬು ಆಸ್ಪತ್ರೆ ಬೆಡ್​ ಮೇಲೆ ಮಲಗಿರುವ ಚಿತ್ರ ನೋಡಿ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದು, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.

ಕಾಕ್ಸಿಬೋನ್ ಸಮಸ್ಯೆಯಿಂದ ಬಳಲುತ್ತಿದ್ದ ನಟಿ ಖುಷ್ಬು ಶಸ್ತ್ರಚಿಕಿತ್ಸೆಗೆ ಗುರಿಯಾಗಿದ್ದಾರೆ. ಬೆನ್ನು ಮೂಳೆಯ ಅಡಿಯ ಮೂಳೆಗಳ ಗುಚ್ಛದ ಕೊನೆಯ ಮೂಳೆಯ ಮಾಂಸಕಂಡಗಳಿಗೆ ತಿವಿಯಲು ಪ್ರಾರಂಭಿಸುವ ಕಾರಣ ಅಸಾಧ್ಯ ನೋವು ಕೆಳಬೆನ್ನಿನಲ್ಲಿ ಉತ್ಪತ್ತಿಯಾಗುತ್ತದೆ. ಈ ಸಮಸ್ಯೆಯನ್ನು ಶಸ್ತ್ರಚಿಕಿತ್ಸೆಯ ಮೂಲಕ ನಿವಾರಿಸಲಾಗುತ್ತದೆ. ಇದೇ ಶಸ್ತ್ರಚಿಕಿತ್ಸೆಗೆ ಈಗ ಖುಷ್ಬು ಒಳಗಾಗಿದ್ದಾರೆ. ಈ ಶಸ್ತ್ರಚಿಕಿತ್ಸೆಯ ಬಳಿಕ ಚೇತರಿಕೆ ತುಸು ಹೆಚ್ಚು ಸಮಯ ಹಿಡಿಯುತ್ತದೆ ಎನ್ನಲಾಗುತ್ತದೆ. ಕೆಳಬೆನ್ನಿನ ಬಳಿ ಛೇದ ಮಾಡಿ ಮಾಡಲಾಗುವ ಈ ಶಸ್ತ್ರಚಿಕಿತ್ಸೆಯಿಯಿಂದ ರೋಗಿಯ ಮಲಗುವ ವಿಧಾನ ಇನ್ನಿತರೆಗಳಲ್ಲಿ ಬದಲಾವಣೆ ಆಗಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇದೀಗ ಖುಷ್ಬು ಸಹ ಇದೇ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:ನಟಿ ಖುಷ್ಬು ವಿರುದ್ಧ ವಿವಾದಾತ್ಮಕ ಹೇಳಿಕೆ: ಹಿರಿಯ ಶಾಸಕನ ಬಂಧನ

ರಾಜಕಾರಣಿಯೂ ಆಗಿರುವ ಖುಷ್ಬು, ತಮಿಳುನಾಡು ಬಿಜೆಪಿ ಪಕ್ಷದ ಪ್ರಮುಖ ಮುಖಂಡರದಲ್ಲಿ ಒಬ್ಬರಾಗಿದ್ದಾರೆ. ಇತ್ತೀಚೆಗಷ್ಟೆ ತಮಿಳುನಾಡು ಆಡಳಿತೆರೂಢ ಡಿಎಂಕೆ ಪಕ್ಷದ ಹಿರಿಯ ಶಾಸಕ ಶಿವಾಜಿ ಕೃಷ್ಣಮೂರ್ತಿ ಖುಷ್ಬು ವಿರುದ್ಧ ಕೀಳು ಅಭಿರುಚಿಯ ಹೇಳಿಕೆ ನೀಡಿದ್ದು ಬಹುವಾಗಿ ಸುದ್ದಿಯಾಗಿತ್ತು, ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ್ದ ಶಿವಾಜಿ ಕೃಷ್ಣಮೂರ್ತಿ ನಾನೇನು ನಟನಲ್ಲ, ಅದರಲ್ಲಿಯೂ ಖುಷ್ಬು ಅಂಥಹಾ ನಟನಲ್ಲ. ನಟರಾಗಿರುವುದು ಓಕೆ, ಆದರೆ ಖುಷ್ಬು ರೀತಿ ನಟರಾಗಿರುವುದು ಸರಿಯಲ್ಲ. ಖುಷ್ಬು ಹಳೆಯ ಹಂಡೆ ಇದ್ದಂತೆ. ಆದರೆ ಎಲ್ಲ ಖುಷ್ಬು ಬೇಕು, ಖುಷ್ಬು ಬೇಕು ಎನ್ನುತ್ತಾರೆ. ಅಯ್ಯೋ ಅವಳು ಹಳೆ ಹಂಡೆ ಅವಳನ್ನ ಯಾಕೆ ಕೇಳ್ತೀರಿ ಸುಮ್ಮನಿರಿ” ಎಂದು ನಾಲಗೆ ಹರಿಬಿಟ್ಟಿದ್ದರು.

ಹೇಳಿಕೆಯ ಬಳಿಕ ಡಿಎಂಕೆ ವಿರುದ್ಧ ಹಾಗೂ ಶಿವಾಜಿ ಕೃಷ್ಣಮೂರ್ತಿ ವಿರುದ್ಧ ನಟಿ ಖುಷ್ಬು ಹರಿಹಾಯ್ದಿದ್ದರು, ಮಾತ್ರವಲ್ಲದೆ ಶಿವಾಜಿ ವಿರುದ್ಧ ದೂರು ಸಹ ದಾಖಲಿಸಿದ್ದರು. ಬಳಿಕ ಡಿಎಂಕೆ ಪಕ್ಷವು ಶಿವಾಜಿ ಕೃಷ್ಣಮೂರ್ತಿಯನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದು ಮಾತ್ರವಲ್ಲದೆ ಶಿವಾಜಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಿತ್ತು ಸಹ.

ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಖುಷ್ಬು ರಾಜಕೀಯದಲ್ಲಿಯೂ ಸಕ್ರಿಯರಾಗಿದ್ದಾರೆ. ಮೊದಲಿಗೆ ಡಿಎಂಕೆ ಪಕ್ಷದಿಂದ ರಾಜಕೀಯ ಪಯಣ ಆರಂಭಿಸಿದ ನಟಿ ಖುಷ್ಬು ಆ ಬಳಿಕ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು, ಕಳೆದ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದಾಗ ಬಿಜೆಪಿ ಪಕ್ಷ ಸೇರ್ಪಡೆಗೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ