AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದ ವರ್ಷ ಒಗ್ಗಟ್ಟಿನ ಮಂತ್ರ ಪಠಿಸಿದ್ದ ಸುದೀಪ್ ಈ ಬಾರಿ ಏಕಾಏಕಿ ಸಿಟ್ಟಿಗೆದ್ದಿದ್ದು ಏಕೆ?

ಕಿಚ್ಚ ಸುದೀಪ್ ಇತ್ತೀಚೆಗೆ 'ಮಾರ್ಕ್' ಚಿತ್ರದ ಕಾರ್ಯಕ್ರಮದಲ್ಲಿ ಆಡಿದ 'ಯುದ್ಧ'ದ ಮಾತು ಚರ್ಚೆಗೆ ಗ್ರಾಸವಾಗಿದೆ. ಕಳೆದ ವರ್ಷ ಒಗ್ಗಟ್ಟಿನ ಮಂತ್ರ ಪಠಿಸಿದ್ದ ಸುದೀಪ್, ಈ ಬಾರಿ ಏಕಾಏಕಿ ಸಿಟ್ಟಿಗೆದ್ದಿದ್ದು ಏಕೆ ಎಂಬ ಪ್ರಶ್ನೆ ಮೂಡಿದೆ. 'ಪೈಲ್ವಾನ್' ಚಿತ್ರಕ್ಕೆ ಎದುರಾದ ಪೈರಸಿ ಸಮಸ್ಯೆಯಂತೆ 'ಮಾರ್ಕ್' ಚಿತ್ರಕ್ಕೂ ತೊಂದರೆಯಾಗುವ ಭೀತಿಯೇ ಇದಕ್ಕೆ ಕಾರಣವಿರಬಹುದೆಂದು ಅಂದಾಜಿಸಲಾಗಿದೆ.

ಕಳೆದ ವರ್ಷ ಒಗ್ಗಟ್ಟಿನ ಮಂತ್ರ ಪಠಿಸಿದ್ದ ಸುದೀಪ್ ಈ ಬಾರಿ ಏಕಾಏಕಿ ಸಿಟ್ಟಿಗೆದ್ದಿದ್ದು ಏಕೆ?
ದರ್ಶನ್-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Dec 22, 2025 | 11:53 AM

Share

ಕಿಚ್ಚ ಸುದೀಪ್ ಅವರು ಇತ್ತೀಚೆಗೆ ‘ಮಾರ್ಕ್’ ಸಿನಿಮಾ ಈವೆಂಟ್​​​ನಲ್ಲಿ ಭಾಗಿಯಾದರು. ಹುಬ್ಬಳಿಯ ಬೃಹತ್ ವೇದಿಕೆ ಮೇಲೆ ನಡೆದ ಕಾರ್ಯಕ್ರಮದಲ್ಲಿ ಕಿಚ್ಚನ ಮಾತಿಗಾಗಿ ಎಲ್ಲರೂ ಕಾದಿದ್ದರು. ಸಿನಿಮಾ ಬಗ್ಗೆ ಮಾತನಾವುದುರ ಜೊತೆ ಕಿಚ್ಚ ಅವರು ಆಡಿದ ಒಂದು ಮಾತು ಸಾಕಷ್ಟು ಚರ್ಚೆಗೆ ಕಾರಣವಾಯಿತು. ಈಗಾಗಲೇ ಚಿತ್ರರಂಗದಲ್ಲಿ ಫ್ಯಾನ್ ವಾರ್ ಜೋರಾಗಿದೆ. ಇದು ದರ್ಶನ್ ಅಭಿಮಾನಿಗಳಿಗೆ ಹೇಳಿದ್ದು ಎಂದು ಹೇಳಲಾಗುತ್ತಾ ಇದೆ. ವಿಜಯಲಕ್ಷ್ಮೀ ಕೂಡ ಕೌಂಟರ್ ಕೊಟ್ಟಿದ್ದಾರೆ. ಹೇಳಿಕೆ ಹಾಗೂ ಪ್ರತಿ ಹೇಳಿಕೆಗಳು ಚರ್ಚೆಯನ್ನು ಹುಟ್ಟುಹಾಕಿವೆ.

ಒಗ್ಗಟ್ಟಿನ ಮಂತ್ರ ಪಟಿಸಿದ್ದ ಸುದೀಪ್

ಕಳೆದ ವರ್ಷ ‘ಮ್ಯಾಕ್ಸ್’ ರಿಲೀಸ್ ಆಗುವ ಸಂದರ್ಭದಲ್ಲಿ ದರ್ಶನ್​ ಬಗ್ಗೆ ಸುದೀಪ್​ಗೆ ಪ್ರಶ್ನೆ ಮಾಡಲಾಯಿತು. ದರ್ಶನ್ ಬಗ್ಗೆ ಕೇಳಿದ ಪ್ರಶ್ನೆಗೆ ಕೂಲ್ ಆಗೇ ಉತ್ತರಿಸಿದ್ದರು. ‘ನನ್ನ ಮತ್ತು ದರ್ಶನ್​ ನಡುವೆ ಯಾವುದೇ ಸಮಸ್ಯೆ ಇಲ್ಲ. ದರ್ಶನ್​ ಕಷ್ಟಪಟ್ಟು ಮೇಲೆ ಬಂದಿದ್ದಾರೆ’ ಎಂದಿದ್ದರು ಕಿಚ್ಚ. ಅಲ್ಲದೆ, ‘ಯಶ್, ದರ್ಶನ್, ಉಪ್ಪಿ ಸರ್, ಶಿವಣ್ಣ ಎಲ್ಲಾ ಸೇರಿದ್ರೆನೆ ಕನ್ನಡ ಚಿತ್ರರಂಗ’ ಎಂದು ಒಗ್ಗಟ್ಟಿನ ಮಾತು ಆಡಿದ್ದರು.

ಈ ಬಾರಿ ಹೇಳಿದ್ದು ಏನು?

ಹುಬ್ಬಳ್ಳಿಯಲ್ಲಿ ನಡೆದ ‘ಮಾರ್ಕ್’ ಪ್ರೀ ರಿಲೀಸ್​ ಈವೆಂಟ್​​ ಅಲ್ಲಿ ಸಾವಿರಾರು ಜನರು ಸೇರಿದ್ದರು. ಈ ವೇಳೆ ಕಿಚ್ಚ ಅವರು ರೊಚ್ಚಿಗೆದ್ದು ಮಾತನಾಡಿದರು. ‘ಜುಲೈ 5ರಂದು ಒಂದು ಪ್ರಾಮಿಸ್ ಮಾಡಿದ್ದೆ. ಅಂತೆಯೇ ಡಿಸೆಂಬರ್ 25ನೇ ತಾರೀಕಿಗೆ ಸಿನಿಮಾ ರಿಲೀಸ್ ಮಾಡುತ್ತಿದ್ದೇವೆ. ಆದರೆ ಹೊರಗಡೆ ಒಂದು ಪಡೆ ಯುದ್ಧಕ್ಕೆ ರೆಡಿ ಆಗುತ್ತಾ ಇದೆ. ಈ ವೇದಿಕೆ ಮೇಲಿಂದ ಹೇಳ್ತಾ ಇದ್ದೇನೆ. ಯುದ್ಧಕ್ಕೆ ಸಿದ್ಧ, ಏಕೆಂದರೆ ನಾವು ನಮ್ಮ ಮಾತಿಗೆ ಬದ್ಧ’ ಎಂದಿದ್ದರು ಸುದೀಪ್.

ಇದನ್ನೂ ಓದಿ: ನಾನು ಬಾಯಿ ಮುಚ್ಕೊಂಡು ಇದ್ದೆ, ಯಾಕಂದ್ರೆ; ಹುಬ್ಬಳಿಯಿಂದ ಇಡೀ ರಾಜ್ಯಕ್ಕೆ ಸುದೀಪ್ ಖಡಕ್ ಸಂದೇಶ

ಕಾರಣ ಏನಿರಬಹುದು?

ಸುದೀಪ್ ಈ ರೀತಿ ಮಾತನಾಡಲು ಕಾರಣ ಏನಿರಬಹುದು ಎಂಬ ಚರ್ಚೆ ಶುರುವಾಗಿದೆ. 2019ರಲ್ಲಿ ‘ಪೈಲ್ವಾನ್’ ಸಿನಿಮಾ ರಿಲೀಸ್ ಆದ ಬಳಿಕ ಕೆಲವರು ಇದನ್ನು ಪೈರಸಿ ಮಾಡಿದ್ದರು. ಈ ಪೈರಸಿಯಿಂದ ಸಿನಿಮಾಗೆ ಸಾಕಷ್ಟು ತೊಂದರೆ ಆಯಿತು. ದೂರು ನೀಡಿ ಕೆಲವರನ್ನು ಅರೆಸ್ಟ್ ಕೂಡ ಮಾಡಿಸಲಾಯಿತು. ಈ ಬಾರಿಯೂ ಸುದೀಪ್​​ಗೆ ಈ ರೀತಿಯ ಸೂಚನೆ ಏನಾದರೂ ಸಿಕ್ಕಿದೆಯೇ ಎಂಬ ಪ್ರಶ್ನೆ ಮೂಡಿದೆ. ಇದಕ್ಕಾಗಿ ಸುದೀಪ್ ಆ ರೀತಿ ಹೇಳಿರಬಹದು ಎಂದು ಅರ್ಥೈಸಲಾಗುತ್ತಿದೆ. ಇದಕ್ಕೆ ಸುದೀಪ್ ಅವರೇ ಸ್ಪಷ್ಟನೆ ಕೊಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ