Vikrant Rona: ‘ವಿಕ್ರಾಂತ್ ರೋಣ’ ಚಿತ್ರದ ಟ್ರೈಲರ್ ಬಿಡುಗಡೆಗೆ ಡೇಟ್ ಫಿಕ್ಸ್

Kiccha Sudeep's Vikrant Rona: ರಂಗಿ ತರಂಗ ಖ್ಯಾತಿಯ ಅನೂಪ್ ಭಂಡಾರಿ ಆ್ಯಕ್ಷನ್ ಕಟ್ ಹೇಳಿರುವ ವಿಕ್ರಾಂತ್ ರೋಣ ಚಿತ್ರವು ಈಗಾಗಲೇ ಟೀಸರ್ ಮೂಲಕ ಭಾರೀ ನಿರೀಕ್ಷೆ ಹುಟ್ಟುಹಾಕಿದೆ.

Vikrant Rona: ವಿಕ್ರಾಂತ್ ರೋಣ ಚಿತ್ರದ ಟ್ರೈಲರ್ ಬಿಡುಗಡೆಗೆ ಡೇಟ್ ಫಿಕ್ಸ್
Vikrant Rona Movie
Edited By:

Updated on: Jun 17, 2022 | 5:11 PM

ಸ್ಯಾಂಡಲ್​ವುಡ್ ಬಾದ್​ಷಾ ಕಿಚ್ಚ ಸುದೀಪ್ (Kiccha Sudeep) ಅಭಿನಯದ ವಿಕ್ರಾಂತ್ ರೋಣ (Vikrant Rona) ಚಿತ್ರದ ಟ್ರೈಲರ್ ಬಿಡುಗಡೆಗೆ ಡೇಟ್ ಫಿಕ್ಸ್ ಆಗಿದೆ. ಕಳೆದ ಕೆಲ ದಿನಗಳಿಂದ ಅಭಿನಯ ಚಕ್ರವರ್ತಿಯ ಅಭಿಮಾನಿಗಳು ಚಿತ್ರದ ಟ್ರೈಲರ್ ಬಿಡುಗಡೆ ಬಗ್ಗೆ ಸೋಷಿಯಲ್ ಮೀಡಿಯಾ ಮೂಲಕ ಪ್ರಶ್ನಿಸಿದ್ದರು. ಇದೀಗ ವಿಡಿಯೋ ತುಣುಕಿನ ಬಿಡುಗಡೆ ಮೂಲಕ ಜೂನ್ 23 ರಂದು ವಿಕ್ರಾಂತ್ ರೋಣನ ಅಸಲಿ ಅವತಾರವನ್ನು ತೋರಿಸುವುದಾಗಿ ಕಿಚ್ಚ ಸುದೀಪ್ ತಿಳಿಸಿದ್ದಾರೆ. ಅದರಂತೆ ಮುಂದಿನ ಗುರುವಾರ ವಿಕ್ರಾಂತ್ ರೋಣ ಚಿತ್ರದ ಟ್ರೈಲರ್ ರಿಲೀಸ್ ಆಗಲಿದೆ. ಈ ಹಿಂದೆ ‘ರಾ ರಾ ರಕ್ಕಮ್ಮ’ (Ra Ra Rakkamma) ಹಾಡಿನ ಮೂಲಕ ಸ್ಯಾಂಡಲ್​ವುಡ್​ನಲ್ಲಿ ಹೊಸ ಸೆನ್ಸೇಷನ್​ ಸೃಷ್ಟಿಸಿರುವ ‘ವಿಕ್ರಾಂತ್ ರೋಣ’ (Vikrant Rona) ತಂಡವು ಈ ಬಾರಿ ಟ್ರೈಲರ್ ರಿಲೀಸ್ ಸುದ್ದಿ ನೀಡುವ ಮೂಲಕ ಅಭಿಮಾನಿಗಳ ಕಾತುರತೆಯನ್ನು ಹೆಚ್ಚಿಸಿದೆ.

 

ಇದನ್ನೂ ಓದಿ
Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?
Kabza: ಒಂದಲ್ಲ, ಎರಡಲ್ಲ, ಮೂರಲ್ಲ…ವಿದೇಶಿ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ ಕಬ್ಜ
Rashmika Mandanna: ಮಿಂಚಿಂಗೊ ಮಿಂಚಿಂಗ್…ಸದ್ಯಕ್ಕಂತು ಕನ್ನಡಕ್ಕಿಲ್ಲ ರಶ್ಮಿಕಾ ಮಂದಣ್ಣ..!
Rakshit Shetty: ನಂಗೆ ಲವ್ ಫೈಲ್ಯುರ್ ಆಗಿಲ್ಲ: ರವಿಚಂದ್ರನ್ ಮುಂದೆ ಮನಬಿಚ್ಚಿದ ರಕ್ಷಿತ್ ಶೆಟ್ಟಿ

 

ಈಗಾಗಲೇ ರಾ ರಾ ರಕ್ಕಮ್ಮ ಹಾಡು ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿ ಭಾಷೆಯ ಪ್ರೇಕ್ಷಕರನ್ನು ಸೆಳೆದಿದ್ದು, ಪರಭಾಷೆಯಲ್ಲೂ ಚಿತ್ರದ ಮೇಲಿನ ನಿರೀಕ್ಷೆ ದುಪ್ಪಟಾಗುತ್ತಿದೆ. ಇನ್ನು ವಿಕ್ರಾಂತ್ ರೋಣ ಚಿತ್ರವು ಮುಂದಿನ ತಿಂಗಳು 28 ರಂದು ವಿಶ್ವದಾದ್ಯಂತ ತೆರೆ ಕಾಣಲಿದ್ದು, ಅದಕ್ಕೂ ಮುನ್ನ ಟ್ರೈಲರ್ ಹಾಗೂ ಹಾಡಿನ ಮೂಲಕ ಮೋಡಿ ಮಾಡುವ ಇರಾದೆಯಲ್ಲಿದ್ದಾರೆ ನಿರ್ದೇಶಕ ಅನೂಪ್ ಭಂಡಾರಿ.

ಭಾರೀ ನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರದಲ್ಲಿ ಕಿಚ್ಚ ಸುದೀಪ್ ವಿಕ್ರಾಂತ್ ರೋಣರಾಗಿ ಕಾಣಿಸಿಕೊಳ್ಳಲಿದ್ದು, ಸಂಜೀವ್ ಗಂಭೀರ್ ಹೆಸರಿನ ಮತ್ತೊಂದು ಪಾತ್ರದಲ್ಲಿ ನಿರೂಪ್ ಭಂಡಾರಿ ಅಭಿನಯಿಸಿದ್ದಾರೆ. ಹಾಗೆಯೇ ನಾಯಕಿಯಾಗಿ ನಿತಾ ಅಶೋಕ್ ಇದ್ದರೆ, ಮತ್ತೊಂದು ವಿಭಿನ್ನ ಪಾತ್ರದೊಂದಿಗೆ ರವಿ ಶಂಕರ್ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫರ್ನಾಂಡೀಸ್ ರಗಡ್ ರಕ್ಕಮ್ಮಳಾಗಿ ಎಂಟ್ರಿ ಕೊಡಲಿದ್ದಾರೆ.

 

ಶಾಲಿನಿ ಆರ್ಟ್ಸ್​ ಬ್ಯಾನರ್​ ಮೂಲಕ ಜಾಕ್​ ಮಂಜು ನಿರ್ಮಾಣ ಮಾಡಿರುವ ಈ ಸಿನಿಮಾಗೆ ಅಲಂಕಾರ್​ ಪಾಂಡಿಯನ್​ ಸಹ-ನಿರ್ಮಾಪಕರಾಗಿದ್ದಾರೆ. ಇನ್ನು ರಂಗಿ ತರಂಗ ಖ್ಯಾತಿಯ ಅನೂಪ್ ಭಂಡಾರಿ ಆ್ಯಕ್ಷನ್ ಕಟ್ ಹೇಳಿರುವ ವಿಕ್ರಾಂತ್ ರೋಣ ಚಿತ್ರವು ಈಗಾಗಲೇ ಟೀಸರ್ ಮೂಲಕ ಭಾರೀ ನಿರೀಕ್ಷೆ ಹುಟ್ಟುಹಾಕಿದೆ. ಅಲ್ಲದೆ ಚಿತ್ರದ ಪ್ರಮುಖ ಭಾಗವನ್ನು ವೀಕ್ಷಿಸಿರುವ ಬಾಲಿವುಡ್ ನಟ ಸಲ್ಮಾನ್ ತಮ್ಮದೇ ಸಂಸ್ಥೆಯಲ್ಲಿ ವಿಕ್ರಾಂತ್ ರೋಣನನ್ನು ಹಿಂದಿಯಲ್ಲಿ ಬಿಡುಗಡೆ ಮಾಡಲು ಮುಂದಾಗಿದ್ದಾರೆ. ಹೀಗಾಗಿಯೇ ಸೌತ್ ಸಿನಿರಂಗದಂತೆ, ಬಾಲಿವುಡ್​ನಲ್ಲೂ ವಿಕ್ರಾಂತ್ ರೋಣನ ಎಂಟ್ರಿಗಾಗಿ ಸಿನಿಪ್ರಿಯರು ಕಾತುರದಿಂದ ಕಾಯುತ್ತಿದ್ದಾರೆ. ಈ ಕಾಯುವಿಕೆ ಕೊನೆಗೊಳ್ಳಬೇಕಿದ್ದರೆ ಜುಲೈ 28ರ ತನಕ ಕಾಯಲೇಬೇಕು.

 

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.