Kichcha Sudeep: ಬಿಗ್​ ಬಾಸ್​ ನಿರೂಪಣೆ ಬಗ್ಗೆ ಹರಡಿದ ಅಂತೆಕಂತೆಗೆ ಸುದೀಪ್​ ಸ್ಪಷ್ಟನೆ

ಸಿನಿಮಾ ಕೆಲಸಗಳಿಗೆ ಸುದೀಪ್​ ಬೇರೆ ಬೇರೆ ಕಡೆಗಳಿಗೆ ತೆರಳುತ್ತಾರೆ. ಆದಾಗ್ಯೂ ಅವರು ವೀಕೆಂಡ್​ನಲ್ಲಿ ಬೆಂಗಳೂರಿಗೆ ವಾಪಾಸಾಗುತ್ತಿದ್ದರು. ಇದು 8 ವರ್ಷಗಳಿಂದಲೂ ನಡೆದುಕೊಂಡೇ ಬಂದಿದೆ.

Kichcha Sudeep: ಬಿಗ್​ ಬಾಸ್​ ನಿರೂಪಣೆ ಬಗ್ಗೆ ಹರಡಿದ ಅಂತೆಕಂತೆಗೆ ಸುದೀಪ್​ ಸ್ಪಷ್ಟನೆ
ಸುದೀಪ್​
Follow us
| Updated By: ಮದನ್​ ಕುಮಾರ್​

Updated on: Apr 16, 2021 | 4:00 PM

ಕನ್ನಡ ಬಿಗ್​ ಬಾಸ್​ನ 7 ಸೀಸನ್​ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಕಿಚ್ಚ ಸುದೀಪ್​ 8ನೇ ಸೀಸನ್​ಗೆ ಕಾಲಿಟ್ಟಿದ್ದಾರೆ. ಅದನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ ಕೂಡ. ಒಂದೇ ಒಂದು ವಾರ ಕೂಡ ಅವರು ಬಿಗ್​ ಬಾಸ್​ ತಪ್ಪಿಸಿಲ್ಲ. ಆದರೆ, ಇದೇ ಮೊದಲ ಬಾರಿಗೆ ಅವರು ಬಿಗ್​ ಬಾಸ್​ನಿಂದ ದೂರ ಉಳಿಯುತ್ತಿದ್ದಾರೆ. ಈ ಬಗ್ಗೆ ಸುದೀಪ್​ ಅಧಿಕೃತ ಘೋಷಣೆ ಮಾಡಿದ್ದಾರೆ. ಸಿನಿಮಾ ಕೆಲಸಗಳಿಗೆ ಸುದೀಪ್​ ಬೇರೆ ಬೇರೆ ಕಡೆಗಳಿಗೆ ತೆರಳುತ್ತಾರೆ. ಆದಾಗ್ಯೂ ಅವರು ವೀಕೆಂಡ್​ನಲ್ಲಿ ಬೆಂಗಳೂರಿಗೆ ವಾಪಾಸಾಗುತ್ತಿದ್ದರು. ಇದು 8 ವರ್ಷಗಳಿಂದಲೂ ನಡೆದುಕೊಂಡೇ ಬಂದಿದೆ. ಆದರೆ, ಈ ಬಾರಿ ಅನಾರೋಗ್ಯದ ಕಾರಣದಿಂದ ಅವರು ನಿರೂಪಣೆ ಮಾಡುತ್ತಿಲ್ಲ ಎಂಬ ಮಾತುಗಳು ಕೇಳಿಬಂದಿದ್ದವು. ಈಗ ಈ ವಿಚಾರವನ್ನು ಸುದೀಪ್​ ಅಧಿಕೃತಗೊಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸುದೀಪ್​, ನನಗೆ ಅನಾರೋಗ್ಯ ಕಾಡುತ್ತಿದೆ. ಈ ವಾರಾಂತ್ಯಕ್ಕೆ ನಾನು ಗುಣಮುಖನಾಗುವ ನಿರೀಕ್ಷೆ ಇದೆ. ಆದರೆ, ವೈದ್ಯರ ಸೂಚನೆಯಂತೆ ನಾನು ಕೆಲ ದಿನ ರೆಸ್ಟ್​ ಮಾಡುತ್ತಿದ್ದೇನೆ. ಹೀಗಾಗಿ, ಈ ವಾರದ ಬಿಗ್​ ಬಾಸ್​ ಮಿಸ್​ ಮಾಡಿಕೊಳ್ಳುತ್ತಿದ್ದೇನೆ. ಈ ವಾರದ ಎಲಿಮಿನೇಷನ್​ಗೆ ಯಾವ ಪ್ಲ್ಯಾನ್​ ಮೂಲಕ ತಂಡ ಬರುತ್ತದೆ ಎನ್ನುವ ಕುತೂಹಲ ನನ್ನದು ಎಂದಿದ್ದಾರೆ ಸುದೀಪ್​.

ಈ ವಾರ ಶೋ ಯಾರು ನಡೆಸಿಕೊಡುತ್ತಾರೆ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಏಳನೇ ವಾರದ ವೀಕೆಂಡ್​ ಎಪಿಸೋಡ್​ಗಳನ್ನು ಸಮರ್ಥವಾಗಿ ನಡೆಸಿಕೊಡಬಲ್ಲ ನಿರೂಪಕರಿಗಾಗಿ ವಾಹಿನಿ ಹುಡುಕಾಟ ನಡೆಸುತ್ತಿದೆ ಎನ್ನಲಾಗಿದೆ.

ಬೇರೆ ಭಾಷೆಯ ಬಿಗ್​ ಬಾಸ್​ ಕಾರ್ಯಕ್ರಮಗಳಲ್ಲಿ ಇಂಥ ಪರಿಸ್ಥಿತಿ ಈ ಹಿಂದೆ ಎದುರಾಗಿತ್ತು. ಅಕ್ಕಿನೇನಿ ನಾಗಾರ್ಜುನ ಅವರ ಅನುಪಸ್ಥಿತಿಯಲ್ಲಿ ಅವರ ಸೊಸೆ ಸಮಂತಾ ಅವರು ತೆಲುಗು ಬಿಗ್​ ಬಾಸ್​ ನಿರೂಪಣೆ ಮಾಡಿದ್ದರು. ಹಿರಿಯ ನಟಿ ರಮ್ಯಾ ಕೃಷ್ಣ ಅವರ ಹೆಗಲಿಗೂ ಒಮ್ಮೆ ಈ ಜವಾಬ್ದಾರಿ ಹೋಗಿತ್ತು. ಹಿಂದಿಯಲ್ಲಿ ಸಲ್ಮಾನ್​ ಖಾನ್​ ಬದಲಿಗೆ ಬಿಗ್​ ಬಾಸ್​ 13ನೇ ಸೀಸನ್​ ವಿನ್ನರ್​ ಸಿದ್ದಾರ್ಥ್​ ಶುಕ್ಲಾ ನಡೆಸಿಕೊಟ್ಟಿದ್ದರು. ಕನ್ನಡದಲ್ಲಿ ಯಾರಿಗೆ ಈ ಚಾನ್ಸ್​ ಸಿಗಲಿದೆ ಎಂಬ ಕೌತುಕ ಮನೆ ಮಾಡಿದೆ.

ಇದನ್ನೂ ಓದಿ: Kichcha Sudeep: ಇದೇ ಮೊದಲ ಬಾರಿಗೆ ಬಿಗ್​ ಬಾಸ್​ ನಿರೂಪಣೆ ತಪ್ಪಿಸಿಕೊಳ್ಳುತ್ತಿರುವ ಕಿಚ್ಚ ಸುದೀಪ್​?

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್