AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮವರು ಬೇರೆ ಭಾಷೆಗೆ ಹೋಗ್ತಾರೆ, ಆದ್ರೆ ಪರಭಾಷೆಯವರು ಬರಲ್ಲ; ಸುದೀಪ್ ಬೇಸರ

Kichcha Sudeep: ಸದ್ಯ ಸುದೀಪ್ ಹೇಳಿದ ಮಾತನ್ನು ಅನೇಕರು ಬೆಂಬಲಿಸಿದ್ದಾರೆ. ಸಂಜಯ್ ದತ್ ಸೇರಿದಂತೆ ಅನೇಕ ಕಲಾವಿದರು ದೊಡ್ಡ ದೊಡ್ಡ ಬಜೆಟ್ ಸಿನಿಮಾಗಳಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದನ್ನು ಹೊರತುಪಡಿಸಿದರೆ ಯಾರೊಬ್ಬರೂ ನಮ್ಮ ಸಿನಿಮಾಗಳಲ್ಲಿ ಅತಿಥಿ ಪಾತ್ರ ಮಾಡುತ್ತಿಲ್ಲ ಎಂಬುದು ಬೇಸರದ ವಿಷಯ.

ನಮ್ಮವರು ಬೇರೆ ಭಾಷೆಗೆ ಹೋಗ್ತಾರೆ, ಆದ್ರೆ ಪರಭಾಷೆಯವರು ಬರಲ್ಲ; ಸುದೀಪ್ ಬೇಸರ
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Dec 27, 2025 | 9:33 AM

Share

ಕನ್ನಡ ಕಲಾವಿದರಿಗೆ ಈಗ ಸಾಕಷ್ಟು ಬೇಡಿಕೆ ಬರುತ್ತಿದೆ. ಅನೇಕ ಸ್ಟಾರ್ ಕಲಾವಿದರು ಪರಭಾಷೆಗೆ ತೆರಳಿ ಅತಿಥಿ ಪಾತ್ರ ಮಾಡಿದ್ದು ಇದೆ. ಶಿವರಾಜ್​​ಕುಮಾರ್ ಅವರು ‘ಜೈಲರ್​’ ಅಲ್ಲಿ, ಉಪೇಂದ್ರ ಅವರು ‘ಕೂಲಿ’ ಚಿತ್ರದಲ್ಲಿಅತಿಥಿ ಪಾತ್ರ ಮಾಡಿದ್ದಾರೆ. ಅತಿಥಿ ಪಾತ್ರಗಳ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ನಮ್ಮ ಕಲಾವಿದರು ಅಲ್ಲಿಗೆ ತೆರಳಿ ಅತಿಥಿ ಪಾತ್ರ ಮಾಡುವ ಬಗ್ಗೆ ಅವರಿಗೆ ಯಾವುದೇ ತಕರಾರು ಇಲ್ಲ. ಆದರೆ, ಅಲ್ಲಿಯವರು ಇಲ್ಲಿಗೆ ಬರೋದಿಲ್ಲ ಎಂಬ ಬೇಸರ ಅವರನ್ನು ಕಾಡುತ್ತಿದೆ.

ಈ ಬಗ್ಗೆ ಸಂದರ್ಶನ ಒಂದರಲ್ಲಿ ಸುದೀಪ್ ಮಾತನಾಡಿದ್ದಾರೆ. ‘ನಾವು ಕನ್ನಡ ಕಲಾವಿದರು ಬೇರೆ ಭಾಷೆಗಳಲ್ಲಿ ಸಾಕಷ್ಟು ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತೇವೆ. ಆದರೆ, ಬೇರೆ ಭಾಷೆಯವರು ನಮ್ಮ ಸಿನಿಮಾಗಳಲ್ಲಿ ನಟಿಸಲು ಸಿದ್ಧರಿರುವುದಿಲ್ಲ’ ಎಂದಿದ್ದಾರೆ ಸುದೀಪ್.

‘ನಮ್ಮ ಸಿನಿಮಾಗಳಲ್ಲಿ ನಟಿಸುವಂತೆ ನಾನು ವೈಯಕ್ತಿಕವಾಗಿ ಕೆಲವು ನಟರನ್ನು ಕೇಳಿಕೊಂಡೆ. ಆದರೆ, ಅದು ಸಾಧ್ಯವಾಗಿಲ್ಲ. ಇದು ಎರಡೂ ಕಡೆಗಳಿಂದ ಹಾಕಬೇಕಾದ ಶ್ರಮ. ಆದರೆ, ಈಗ ನನಗೆ ಅದು ಕಾಣಿಸುತ್ತಿಲ್ಲ’ ಎಂದು ಸುದೀಪ್ ಅವರು ಬೇಸರ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಯುದ್ಧಕ್ಕೆ ಸಿದ್ಧ ಎಂದ ಸುದೀಪ್ ಮಾತಿಗೆ ಅರ್ಜುನ್ ಜನ್ಯ ಮೊದಲ ರಿಯಾಕ್ಷನ್

ಕನ್ನಡದ ಕಲಾವಿದರು ಪರಭಾಷೆಯಲ್ಲಿ ನಟಿಸೋದನ್ನು ಸಾಕಷ್ಟು ಕಾಣಬಹುದು. ಆದರೆ, ಅವರು ಇಲ್ಲಿ ಬಂದು ನಟಿಸಿದ್ದು ಕಡಿಮೆ. ಸುದೀಪ್ ಅವರು ಕೂಡ ಈ ಮೊದಲು ಅತಿಥಿ ಪಾತ್ರ ಮಾಡಿದ್ದರು. ‘ಬಾಹುಬಲಿ’ ಸಿನಿಮಾದಲ್ಲಿ ಅವರು ಅತಿಥಿ ಕಲಾವಿದರಾಗಿ ನಟಿಸಿದ್ದರು.

ಸದ್ಯ ಸುದೀಪ್ ಹೇಳಿದ ಮಾತನ್ನು ಅನೇಕರು ಬೆಂಬಲಿಸಿದ್ದಾರೆ. ಸಂಜಯ್ ದತ್ ಸೇರಿದಂತೆ ಅನೇಕ ಕಲಾವಿದರು ದೊಡ್ಡ ದೊಡ್ಡ ಬಜೆಟ್ ಸಿನಿಮಾಗಳಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದನ್ನು ಹೊರತುಪಡಿಸಿದರೆ ಯಾರೊಬ್ಬರೂ ಸಿನಿಮಾಗಳಲ್ಲಿ ಅತಿಥಿ ಪಾತ್ರ ಮಾಡುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:30 am, Sat, 27 December 25

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!