ಬಿಗ್​ ಬಾಸ್​ ಮನೆಗೆ ಮತ್ತೊಂದಷ್ಟು ವೈಲ್ಡ್​ ಕಾರ್ಡ್​ ಎಂಟ್ರಿ; ಸುದೀಪ್​ ಕೊಟ್ರು ಸೂಚನೆ

ವಿಶ್ವ ಮತ್ತು ಮಂಜು ವೈಲ್ಡ್​ ಕಾರ್ಡ್​ ಎಂಟ್ರಿ ಬಗ್ಗೆ ಮಾತನಾಡಿದ್ದರು. ನಾವು ಹಾಯಾಗಿದ್ದೆವು. ಈಗ ವೈಲ್ಡ್​ ಕಾರ್ಡ್​ ಎಂಟ್ರಿ ಬೇಡವಾಗಿತ್ತು ಎಂದಿದ್ದರು.

ಬಿಗ್​ ಬಾಸ್​ ಮನೆಗೆ ಮತ್ತೊಂದಷ್ಟು ವೈಲ್ಡ್​ ಕಾರ್ಡ್​ ಎಂಟ್ರಿ; ಸುದೀಪ್​ ಕೊಟ್ರು ಸೂಚನೆ
ಕಿಚ್ಚ ಸುದೀಪ್​
Follow us
ರಾಜೇಶ್ ದುಗ್ಗುಮನೆ
| Updated By: Skanda

Updated on: Apr 04, 2021 | 7:07 AM

ಬಿಗ್​ ಬಾಸ್ ಮನೆಯಲ್ಲಿ ಚಕ್ರವರ್ತಿ ಚಂದ್ರಚೂಡ್​ ಅವರ ಎಂಟ್ರಿ ಆಗಿದೆ. ಅವರು ಮನೆಗೆ ಬಂದಿದ್ದನ್ನು ನೋಡಿದ ಅನೇಕರು ಅಸಮಾಧಾನ ಹೊರ ಹಾಕಿದ್ದಾರೆ. ಅವರು ಬರಲೇಬಾರದಿತ್ತು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಈ ವಿಚಾರದ ಬಗ್ಗೆ ಸುದೀಪ್​ ಚರ್ಚೆ ಮಾಡಿದ್ದಾರೆ. ಅಷ್ಟೇ ಅಲ್ಲ, ವೈಲ್ಡ್​ ಕಾರ್ಡ್​ ಎಂಟ್ರಿ ಇದು ಆರಂಭವಷ್ಟೇ ಎನ್ನುವ ಸೂಚನೆ ನೀಡಿದ್ದಾರೆ. ಹಾಯಾಗಿದ್ದ 13 ಸ್ಪರ್ಧಿಗಳ ನಡುವೆ ಮತ್ತೋರ್ವನ ಎಂಟ್ರಿ ಆಗಿರುವುದು ಬಿಗ್​ ಬಾಸ್​ ಸ್ಪರ್ಧಿಗಳಿಗೆ ಬೇಸರ ಇದೆ. ಚಕ್ರವರ್ತಿ ಚಂದ್ರಚೂಡ ಬಿಗ್​ ಬಾಸ್​ ಮನೆ ಪ್ರವೇಶಿಸಿದ ಕೂಡಲೇ ಎಲ್ಲರ ಗಮನವನ್ನೂ ತಮ್ಮತ್ತ ಸೆಳೆಯುವ ಪ್ರಯತ್ನ ಮಾಡಿದ್ದರು. ಅಷ್ಟೇ ಅಲ್ಲ, ಎಲ್ಲರ ಹಿಡಿತ ತೆಗೆದುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದು ಅನೇಕರಿಗೆ ಇಷ್ಟವಾಗಿಲ್ಲ. ಹೀಗಾಗಿ, ವೈಲ್ಡ್​ ಕಾರ್ಡ್​ ಎಂಟ್ರಿಯೇ ಬೇಡವಾಗಿತ್ತು ಎನ್ನುವ ಚರ್ಚೆ ನಡೆತ್ತು.

ವಿಶ್ವ ಮತ್ತು ಮಂಜು ವೈಲ್ಡ್​ ಕಾರ್ಡ್​ ಎಂಟ್ರಿ ಬಗ್ಗೆ ಮಾತನಾಡಿದ್ದರು. ನಾವು ಹಾಯಾಗಿದ್ದೆವು. ಈಗ ವೈಲ್ಡ್​ ಕಾರ್ಡ್​ ಎಂಟ್ರಿ ಬೇಡವಾಗಿತ್ತು. ಚಕ್ರವರ್ತಿ ಎಂದಲ್ಲ, ಯಾರೂ ಮನೆಗೆ ಬರಬಾರದಿತ್ತು. ಇಷ್ಟು ದಿನ ನಾವು ಹಾಯಾಗಿದ್ದೆವು ಎಂದು ಹೇಳಿದ್ದರು.

ಈ ಬಗ್ಗೆ ಸುದೀಪ್​ ಮಾತನಾಡಿದ್ದು, ಏಕೆ ವೈಲ್ಡ್​ ಕಾರ್ಡ್​ ಎಂಟ್ರಿ ಇಷ್ಟವಾಗಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಸ್ಪರ್ಧಿಗಳು ಆಯಾ ಕಾರಣ ನೀಡಿದ್ದಾರೆ. ಆಗ ಸುದೀಪ್​, ಬಿಗ್​ ಬಾಸ್​ ಇದು ಆರಂಭ ಮಾತ್ರ ಎಂದಿದ್ದಾರೆ. ಈ ಮೂಲಕ ಅನೇಕರು ಬಿಗ್​ ಬಾಸ್​ ಮನೆಗೆ ಪ್ರವೇಶಿಸುತ್ತಾರೆ ಎನ್ನುವ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಐದನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ

ರಘುಗೆ ನೋವನ್ನೇ ಮಾರ್ಕೆಟಿಂಗ್ ತಂತ್ರ ಮಾಡ್ಕೊಂಡಿದ್ದಾನೆ; ನೊಂದ ಮನಸ್ಸಿಗೆ ಮತ್ತೊಂದಷ್ಟು ಘಾಸಿ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್