Kichcha Sudeep: ಬಿಜೆಪಿ ಜೊತೆ ಕೈ ಜೋಡಿಸಲು ಸಜ್ಜಾದ ಸುದೀಪ್​? ಕಿಚ್ಚನ ರಾಜಕೀಯ ಎಂಟ್ರಿ ಬಗ್ಗೆ ದೊಡ್ಡ ಸುದ್ದಿ

Sudeep | Karnataka BJP: ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್​. ಯಡಿಯೂರಪ್ಪ ಜೊತೆ ಕಿಚ್ಚ ಸುದೀಪ್​ ಅವರ ಮಾತುಕತೆ ನಡೆದಿದೆ ಎನ್ನುತ್ತಿವೆ ಮೂಲಗಳು. ಈ ಹಿನ್ನೆಲೆಯಲ್ಲಿ ಕೌತುಕ ಗರಿಗೆದರಿದೆ.

Kichcha Sudeep: ಬಿಜೆಪಿ ಜೊತೆ ಕೈ ಜೋಡಿಸಲು ಸಜ್ಜಾದ ಸುದೀಪ್​? ಕಿಚ್ಚನ ರಾಜಕೀಯ ಎಂಟ್ರಿ ಬಗ್ಗೆ ದೊಡ್ಡ ಸುದ್ದಿ
ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ, ಕಿಚ್ಚ ಸುದೀಪ್
Follow us
ಮದನ್​ ಕುಮಾರ್​
|

Updated on:Apr 03, 2023 | 2:59 PM

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ (Karnataka Assembly Elections 2023) ಕಾವು ಜೋರಾಗಿದೆ. ಅನೇಕ ಸಿನಿಮಾ ಕಲಾವಿದರಿಗೆ ರಾಜಕೀಯ ಪಕ್ಷಗಳು ಮಣೆ ಹಾಕುತ್ತಿವೆ. ಚಂದನವನದ ಸ್ಟಾರ್​ ನಟರ ಒಲವು ಯಾವ ಪಕ್ಷದ ಕಡೆಗೆ ಇದೆ ಎಂಬುದನ್ನು ತಿಳಿಯುವ ಸಮಯ ಹತ್ತಿರವಾಗಿದೆ. ನಟ ಕಿಚ್ಚ ಸುದೀಪ್​ (Kichcha Sudeep) ಅವರಿಗೆ ಹಲವು ಪ್ರಮುಖ ಮುಖಂಡರ ಜೊತೆ ಒಡನಾಟ ಇದೆ. ಅವರನ್ನು ರಾಜಕೀಯಕ್ಕೆ ಕರೆತರಲು ಒಂದಷ್ಟು ಪ್ರಯತ್ನಗಳು ಕೂಡ ನಡೆದಿವೆ. ಮೂಲಗಳ ಪ್ರಕಾರ ಅವರು ಬಿಜೆಪಿ (BJP) ಜೊತೆ ಕೈ ಜೋಡಿಸುವ ಸಾಧ್ಯತೆ ದಟ್ಟವಾಗಿದೆ. ಈ ಕುರಿತು ಶೀಘ್ರದಲ್ಲೇ ಸ್ಪಷ್ಟ ಚಿತ್ರಣ ಸಿಗಲಿದೆ. ಸುದೀಪ್​ ಅವರು ನೇರವಾಗಿ ರಾಜಕೀಯಕ್ಕೆ ಧುಮುಕುತ್ತಾರೋ ಅಥವಾ ಕೇವಲ ಬಿಜೆಪಿ ಪರವಾಗಿ ಪ್ರಚಾರ ರಾಯಭಾರಿ ಆಗುತ್ತಾರೋ ಎಂಬುದು ಏಪ್ರಿಲ್​ 5ರಂದು ಬಹಿರಂಗ ಆಗಲಿದೆ ಎನ್ನುತ್ತಿವೆ ಮೂಲಗಳು.

ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್​. ಯಡಿಯೂರಪ್ಪ ಜೊತೆ ಕಿಚ್ಚ ಸುದೀಪ್​ ಅವರ ಮಾತುಕತೆ ನಡೆದಿದೆ ಎಂಬುದು ಮೂಲಗಳ ಮಾಹಿತಿ. ಈ ಹಿನ್ನೆಲೆಯಲ್ಲಿ ಕೌತುಕ ಗರಿದೆದರಿದೆ. ಸುದೀಪ್​ ಅವರಿಂದ ಬೆಂಬಲ ಪಡೆಯಬೇಕು ಎಂಬುದು ಕಾಂಗ್ರೆಸ್​ ಮತ್ತು ಬಿಜೆಪಿಯ ಉದ್ದೇಶ ಆಗಿತ್ತು. ಪಕ್ಷಕ್ಕೆ ಸೇರ್ಪಡೆ ಆಗುವಂತೆ ಎರಡೂ ಕಡೆಯಿಂದ ಅವರಿಗೆ ಆಹ್ವಾನ ನೀಡಲಾಗಿತ್ತು. ಅಂತಿಮವಾಗಿ ಸುದೀಪ್​ ಅವರು ಬಿಜೆಪಿ ಪರ ಆಸಕ್ತಿ ತೋರಿಸುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: K. Manju: ರಾಜಕೀಯ ಪ್ರವೇಶಕ್ಕೆ ಸಜ್ಜಾದ ನಿರ್ಮಾಪಕ ಕೆ. ಮಂಜು; ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ?

ಇದನ್ನೂ ಓದಿ
Image
ಮುಖ ತೋರಿಸದೇ ಫೇಮಸ್​ ಆದ ಭಾಸ್ಕರ್​; ಕಿಚ್ಚ ಸುದೀಪ್​ ಬದುಕಿನಲ್ಲೂ ಇದ್ದಾನೆ ಅಂಥ ಒಬ್ಬ ವ್ಯಕ್ತಿ
Image
Kichcha Sudeep: ‘ಕನ್ನಡ್​’ ಎಂದರೆ ಸಹಿಸಲ್ಲ ಸುದೀಪ್​; ಹಿಂದಿ ಮಂದಿಗೆ ಕಿಚ್ಚ ಖಡಕ್​ ತಿರುಗೇಟು ನೀಡಿದ ವಿಡಿಯೋ ವೈರಲ್​
Image
Bigg Boss OTT: ಬಿಗ್​​ ಬಾಸ್​ ಶೋ ಹಿಂದೆ ಸುದೀಪ್​ಗೆ ಹಲವು ಚಾಲೆಂಜ್​; ವೇದಿಕೆಯಲ್ಲಿ ಎಲ್ಲವನ್ನೂ ವಿವರಿಸಿದ ಕಿಚ್ಚ
Image
Kichcha Sudeep: ಕಿಚ್ಚನ ಹೃದಯವಂತಿಕೆ; ಹಾರ್ಟ್​ ಸಮಸ್ಯೆ ಹೊಂದಿರುವ ಪುಟ್ಟ ಬಾಲಕನನ್ನು ಭೇಟಿಯಾದ ಸುದೀಪ್​

ಒಂದೆರಡು ತಿಂಗಳ ಹಿಂದೆ ಕೂಡ ರಾಜಕೀಯ ಮುಖಂಡರು ಸುದೀಪ್​ ಅವರನ್ನು ಭೇಟಿ ಮಾಡಿದ್ದರು. ಆಗಲೇ ಅವರ ರಾಜಕೀಯದ ಎಂಟ್ರಿ ಬಗ್ಗೆ ಸುದ್ದಿ ಹಬ್ಬಿತ್ತು. ಆಗ ಟಿವಿ9 ಜೊತೆ ಮಾತನಾಡಿದ್ದ ಸುದೀಪ್​ ಅವರು ತಮ್ಮ ನಿಲುವು ಏನೆಂಬುದನ್ನು ತಿಳಿಸಿದ್ದರು. ‘ನಾನೊಬ್ಬ ಕಲಾವಿದ. ಹಂಡ್ರೆಡ್​ ಪರ್ಸೆಂಟ್ ಮಾತುಕತೆಗೆ ಬಂದಿದ್ದರು. ಇಲ್ಲ ಅಂತ ತೇಲಿಸೋಕೆ ಹೋಗಲ್ಲ. ಇತ್ತೀಚೆಗೆ ಪೊಲಿಟಿಕಲ್ ನಾಯಕರಿಗೆ ನಂಬಿಕೆ ಬಂದಿದೆ. ಡಿಕೆ ಶಿವಕುಮಾರ್​, ಸುಧಾಕರ್, ಬಸವರಾಜ ಬೊಮ್ಮಾಯಿ, ರಮ್ಯಾ ಅವರು ನನ್ನ ಸ್ನೇಹಿತರು. ನಾನು ಇನ್ನೂ ನಿರ್ಧಾರ ತಗೊಂಡಿಲ್ಲ. ಎರಡೂ ಕಡೆ ಆಪ್ತರು ಇರುವಾಗ ನಿರ್ಧಾರ ತೆಗೆದುಕೊಳ್ಳುವುದು ಕಷ್ಟ ಆಗುತ್ತದೆ’ ಎಂದು ಕಿಚ್ಚ ಸುದೀಪ್​ ಹೇಳಿದ್ದರು.

ಇದನ್ನೂ ಓದಿ: Kichcha Sudeep: ನರೇಂದ್ರ ಮೋದಿ ಭೇಟಿಗೆ ಸುದೀಪ್​ ಯಾಕೆ ಬರಲಿಲ್ಲ? ಅಸಲಿ ಕಾರಣ ವಿವರಿಸಿದ ಕಿಚ್ಚ

‘ಎಮೋಶನ್ಸ್ ಇದೆ. ಅದರ ಜೊತೆ ನಮ್ಮ ನಿರ್ಧಾರವನ್ನು ಸೇರಿಸೋಕೆ ಹೋಗಲ್ಲ. ಸುದೀಪ್​ ಅವರು ರಾಜಕೀಯಕ್ಕೆ ಬರೋದು ಬೇಡ ಅಂತ ನಮ್ಮ ಜನರ ತಲೆಯಲ್ಲಿ ಇರಬಹುದು. ಒಳ್ಳೆಯದನ್ನು ಮಾಡೋಕೆ ಪವರ್​ ಬೇಕಂತಲೇ ಇಲ್ಲ. ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುತ್ತೇನೆ’ ಎಂದಿದ್ದರು ಸುದೀಪ್.​

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:42 pm, Mon, 3 April 23

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ