‘ಕನ್ನಡತಿ’ ಹೀರೋ ಕಿರಣ್​ ರಾಜ್​ ದುಡಿಮೆಯ ಶೇ.40ರಷ್ಟು ಹಣ ಬಡವರಿಗೆ ಮೀಸಲು

ಕೊರೊನಾ ಸಂಕಷ್ಟ ಸಂದರ್ಭದಲ್ಲಿ ಕೆಲವರು ಹೊತ್ತಿನ ಊಟಕ್ಕೂ ಕಷ್ಟಪಡುತ್ತಿದ್ದಾರೆ. ಅಂಥವರನ್ನ ಗುರುತಿಸಿ ಕಿರಣ್ ರಾಜ್ ಊಟ ನೀಡುತ್ತಿದ್ದಾರೆ. ನಿತ್ಯ ಸುಮಾರು ಒಂದು ಸಾವಿರ ಜನಕ್ಕೆ ಅವರ ಕಡೆಯಿಂದ ಊಟ ನೀಡಲಾಗುತ್ತಿದೆ.

‘ಕನ್ನಡತಿ’ ಹೀರೋ ಕಿರಣ್​ ರಾಜ್​ ದುಡಿಮೆಯ ಶೇ.40ರಷ್ಟು ಹಣ ಬಡವರಿಗೆ ಮೀಸಲು
ಕಿರಣ್​ ರಾಜ್​
Follow us
ರಾಜೇಶ್ ದುಗ್ಗುಮನೆ
|

Updated on:May 14, 2021 | 5:41 PM

ಕೊರೊನಾ ವೈರಸ್​ ಮಿತಿಮೀರಿ ಹರಡುತ್ತಿದೆ. ಈ ಸಂದರ್ಭದಲ್ಲಿ ಅನೇಕ ಸೆಲೆಬ್ರಿಟಿಗಳು ಮುಂದೆಬಂದು ಸಹಾಯ ಹಸ್ತ ಚಾಚಿದ್ದಾರೆ. ಕನ್ನಡತಿ ಧಾರಾವಾಹಿ ನಟ ಕಿರಣ್​ ರಾಜ್​ ಕೂಡ ಕೊವಿಡ್​ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ್ದಾರೆ. ತೊಂದರೆ ಎಂದವರಿಗೆ ಅವರು ಸಹಾಯ ಮಾಡುತ್ತಿದ್ದಾರೆ. ಈ ಮಧ್ಯೆ ಅವರು ಅಚ್ಚರಿಯ ವಿಚಾರ ಒಂದನ್ನು ಹೇಳಿಕೊಂಡಿದ್ದಾರೆ.

ಕಿರಣ್​ ರಾಜ್​ ಕೊವಿಡ್​ ಸಂದರ್ಭದಲ್ಲಿ ಮಾತ್ರ ಸಹಾಯಕ್ಕೆ ನಿಂತವರಲ್ಲ. ಕೆಲ ವರ್ಷಗಳ ಹಿಂದೆಯೇ ‘ಕಿರಣ್​ ರಾಜ್​ ಫೌಂಡೇಷನ್’ ಸ್ಥಾಪಿಸಿ ಸಾಕಷ್ಟು ಜನರ ನೋವಿಗೆ ಸ್ಪಂದಿಸಿದ್ದಾರೆ. ಅನಾಥಾಶ್ರಮದ ಮಕ್ಕಳಿಗೆ ಊಟ, ಕಷ್ಟ ಎಂದು ಬಂದವರಿಗೆ ಸಹಾಯ ಮಾಡಿದ್ದಾರೆ. ಈಗ ಕೊರೊನಾ ಸಂದರ್ಭದಲ್ಲಿ ತಮ್ಮ ಸಹಾಯವನ್ನು ಅವರು ಹೆಚ್ಚಿಸಿದ್ದಾರೆ.

ಕಿರಣ್​ ರಾಜ್​ ಹಿಂದಿ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಇದಕ್ಕಾಗಿ ಅವರು ಮುಂಬೈಗೆ ತೆರಳಿದ್ದರು.  ಕಿರಣ್​ ರಾಜ್​ ಫೌಂಡೇಷನ್​ ಕನಸು ಆರಂಭವಾಗಿದ್ದು ಅಲ್ಲಿಯೇ. ‘ನಾನು ಆಗ ಮುಂಬೈನಲ್ಲಿದ್ದೆ. ಅಲ್ಲಿ ಒಂದು ಹೊತ್ತಿನ ಊಟಕ್ಕೆ ಕಷ್ಟಪಡುವವರನ್ನು ನೋಡಿದ್ದೇನೆ. ನಮ್ಮ ದೇಶದಲ್ಲಿ ಈ ರೀತಿ ಸಾಕಷ್ಟು ಮಂದಿ ಇದ್ದಾರೆ ಎಂಬುದು ಗೊತ್ತಿತ್ತು. ನಾನು ಜೀವನದಲ್ಲಿ ಒಂದು ಹಂತಕ್ಕೆ ತಲುಪಿದ ಮೇಲೆ ಕಷ್ಟದಲ್ಲಿರುವವರ ಸಹಾಯಕ್ಕೆ ನಿಲ್ಲಬೇಕು ಎಂದುಕೊಂಡಿದ್ದೆ’ ಎಂದಿದ್ದಾರೆ ಕಿರಣ್​ ರಾಜ್​. ಅಷ್ಟೇ ಅಲ್ಲ ಅವರು ಅಂದುಕೊಂಡಿದ್ದನ್ನು ಮಾಡಿ ತೋರಿಸಿದ್ದಾರೆ.

ಕಿರಣ್​ ರಾಜ್​ ತಮ್ಮ ಒಟ್ಟೂ ಆದಾಯದಲ್ಲಿ ಶೇ.40ರಷ್ಟು ಗಳಿಕೆಯನ್ನು ಕಷ್ಟದಲ್ಲಿರುವವರ ಸಹಾಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ವಿಶೇಷ ಎಂದರೆ, ತಮ್ಮ ಫೌಂಡೇಷನ್​ಗೆ ಬೇರೆಯವರಿಂದ ಹಣ ಪಡೆದಿಲ್ಲ. ತಮ್ಮ ದುಡಿಮೆಯ ಹಣವನ್ನೇ ಅವರು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಕೊರೊನಾ ಸಂಕಷ್ಟ ಹೆಚ್ಚಿದ ನಂತರದಲ್ಲಿ ಸಾಕಷ್ಟು ಜನರು ಧನಸಹಾಯ ಮಾಡೋಕೆ ಮುಂದೆ ಬಂದಿದ್ದರಂತೆ.

ಕೊರೊನಾ ಸಂಕಷ್ಟ ಸಂದರ್ಭದಲ್ಲಿ ಕೆಲವರು ಹೊತ್ತಿನ ಊಟಕ್ಕೂ ಕಷ್ಟಪಡುತ್ತಿದ್ದಾರೆ. ಅಂಥವರನ್ನ ಗುರುತಿಸಿ ಕಿರಣ್ ರಾಜ್ ಊಟ ನೀಡುತ್ತಿದ್ದಾರೆ. ನಿತ್ಯ ಸುಮಾರು ಒಂದು ಸಾವಿರ ಜನಕ್ಕೆ ಅವರ ಕಡೆಯಿಂದ ಊಟ ನೀಡಲಾಗುತ್ತಿದೆ. ಕಿರಣ್​ ರಾಜ್​ ಕೆಲಸಕ್ಕೆ ಎಲ್ಲಾ ಕಡೆಗಳಲ್ಲೂ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: Kiran Raj: ಕೊರೊನಾ ಸಂಕಷ್ಟದಲ್ಲಿ ಪ್ರತಿದಿನ ಸಾವಿರ ಜನರಿಗೆ ಊಟ ಹಾಕುತ್ತಿರುವ ‘ಕನ್ನಡತಿ’ ಕಿರಣ್ ರಾಜ್

ನಟ ಚಂದು ಗೌಡ ಮತ್ತು ಕಿರಣ್​ ರಾಜ್ ಮನೆಗೆ ಬಂತು ಐಷಾರಾಮಿ ಕಾರು!

Published On - 5:39 pm, Fri, 14 May 21

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ