Ajith Kumar’s Father Death: ಅಜಿತ್ ಕುಮಾರ್ ತಂದೆ ಪಿ. ಸುಬ್ರಮಣಿಯಂ ನಿಧನ; ಸೆಲೆಬ್ರಿಟಿಗಳು, ಅಭಿಮಾನಿಗಳಿಂದ ಸಂತಾಪ
Ajith Kumar: ನಟ ಅಜಿತ್ ಕುಮಾರ್ ಅವರ ತಂದೆ ಪಿ. ಸುಬ್ರಮಣಿಯಂ ಅವರಿಗೆ 85 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚೆನ್ನೈನಲ್ಲಿ ನಿಧನರಾದರು.
ಖ್ಯಾತ ತಮಿಳು ನಟ ಅಜಿತ್ ಕುಮಾರ್ (Ajith Kumar) ಅವರ ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಅವರ ತಂದೆ ಪಿ. ಸುಬ್ರಮಣಿಯಂ (P Subramaniam) ಅವರು ಇಂದು (ಮಾರ್ಚ್ 24) ಮುಂಜಾನೆ ಕೊನೆಯುಸಿರು ಎಳೆದಿದ್ದಾರೆ. ತಂದೆಯನ್ನು ಕಳೆದುಕೊಂಡ ಅಜಿತ್ ಕುಮಾರ್ ಅವರಿಗೆ ಸೆಲೆಬ್ರಿಟಿಗಳು, ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಪಿ. ಸುಬ್ರಮಣಿಯಂ ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ಚೆನ್ನೈನ ಬೇಸಂತ್ ನಗರ್ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಪಿ. ಸುಬ್ರಮಣಿಯಂ ನಿಧನಕ್ಕೆ ತಮಿಳು ಚಿತ್ರರಂಗದ ಅನೇಕರು ಕಂಬನಿ ಮಿಡಿದಿದ್ದಾರೆ.
ಅಜಿತ್ ಕುಮಾರ್ ಅವರು ಪತ್ನಿ ಮತ್ತು ಮಕ್ಕಳ ಜೊತೆ ವಿದೇಶಕ್ಕೆ ತೆರಳಿದ್ದಾರೆ. ತಂದೆ ನಿಧನ ಆಗಿದ್ದರಿಂದ ಅವರು ಶೀಘ್ರದಲ್ಲೇ ಚೆನ್ನೈಗೆ ಮರಳಲಿದ್ದಾರೆ. ಪಿ. ಸುಬ್ರಮಣಿಯಂ ಮರಣ ವಾರ್ತೆಯನ್ನು ಕುಟುಂಬದವರು ಸೋಶಿಯಲ್ ಮೀಡಿಯಾ ಮೂಲಕ ಖಚಿತಪಡಿಸಿದ್ದಾರೆ.
ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 11:40 am, Fri, 24 March 23