ಎಂಗೇಜ್​ಮೆಂಟ್ ಮುರಿದುಕೊಂಡಿದ್ದ ತ್ರಿಶಾ ಕೊನೆಗೂ ಮದುವೆ ಆಗುತ್ತಿದ್ದಾರೆ; ಉದ್ಯಮಿ ಜೊತೆ ವಿವಾಹ?

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ನಟಿ ತ್ರಿಶಾ ಯಾವಾಗಲೋ ಮದುವೆ ಆಗಿರಬೇಕಿತ್ತು. 2015ರ ಜನವರಿ 23ರಂದು ತ್ರಿಶಾ ಅವರು ಚೆನ್ನೈ ಮೂಲದ ಉದ್ಯಮಿ ವರುಣ್ ಮಣಿಯನ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅಂತೂ ಅವರು ಮದುವೆ ಆಗುತ್ತಿದ್ದಾರೆ ಎಂದು ಅಭಿಮಾನಿಗಳು ಖುಷಿಪಟ್ಟಿದ್ದರು. ಆದರೆ, ಅಲ್ಲಿ ಆಗಿದ್ದೇ ಬೇರೆ.

ಎಂಗೇಜ್​ಮೆಂಟ್ ಮುರಿದುಕೊಂಡಿದ್ದ ತ್ರಿಶಾ ಕೊನೆಗೂ ಮದುವೆ ಆಗುತ್ತಿದ್ದಾರೆ; ಉದ್ಯಮಿ ಜೊತೆ ವಿವಾಹ?
ನಟಿ ತ್ರಿಶಾ
Follow us
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.

Updated on:Sep 20, 2023 | 6:47 PM

ನಟಿ ತ್ರಿಶಾ (Trisha Krishnan) ಅವರು ಇತ್ತೀಚೆಗೆ ಸಾಲು ಸಾಲು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್ 1’ ಹಾಗೂ ‘ಪೊನ್ನಿಯಿನ್ ಸೆಲ್ವನ್ 2’ ಚಿತ್ರದ ಮೂಲಕ ತ್ರಿಶಾ ಫೇಮಸ್ ಆದರು. ಈಗ ತ್ರಿಶಾ ದಳಪತಿ ವಿಜಯ್ (Thalapathy Vijay) ನಟನೆಯ ಸಿನಿಮಾದಲ್ಲಿ ನಾಯಕಿಯಾಗಿ ಮಿಂಚಲು ರೆಡಿ ಆಗಿದ್ದಾರೆ. ಈ ಮಧ್ಯೆ ತ್ರಿಶಾ ಅವರ ಮದುವೆ (Trisha Krishnan Marriage) ವಿಚಾರ ಚರ್ಚೆ ಆಗುತ್ತಿದೆ. ಶೀಘ್ರವೇ ಅವರು ಹಸೆಮಣೆ ಏರಲಿದ್ದಾರೆ ಎನ್ನುವ ಸುದ್ದಿ ಜೋರಾಗಿದೆ.

ಮಲಯಾಳಂ ನಿರ್ಮಾಪಕನ ಜೊತೆ ಮದುವೆ?

ತ್ರಿಶಾ ಅವರ ವಯಸ್ಸು ಈಗ 40 ವರ್ಷ. ಈವರೆಗೆ ಅವರು ಮದುವೆ ಆಗಿಲ್ಲ. ಅವರು ಆದಷ್ಟು ಬೇಗ ಮದುವೆ ಆಗಲಿ ಅನ್ನೋದು ಅನೇಕರ ಆಸೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ಈಗ ತ್ರಿಶಾ ಅವರ ವಿವಾಹಕ್ಕೆ ಮುಹೂರ್ತ ಕೂಡಿ ಬಂದಿದೆ ಎನ್ನಲಾಗುತ್ತಿದೆ. ಅವರು ಮಲಯಾಳಂ ನಿರ್ಮಾಪಕನ ಜೊತೆ ಮದುವೆ ಆಗಲಿದ್ದಾರೆ ಎಂದು ವರದಿ ಆಗಿದೆ. ಆ ವ್ಯಕ್ತಿ ಯಾರು? ಮದುವೆ ಯಾವಾಗ ಎಂಬಿತ್ಯಾದಿ ವಿಚಾರಗಳ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ.

ಇದನ್ನೂ ಓದಿ: ಸೀರೆಯುಟ್ಟು ಮಿಂಚಿದ ‘ಪವರ್​ ಸ್ಟಾರ್​’ ಸಿನಿಮಾದ ಬೆಡಗಿ ತ್ರಿಶಾ ಕೃಷ್ಣನ್​​

ಮುರಿದು ಬಿದ್ದಿತ್ತು ಎಂಗೇಜ್​ಮೆಂಟ್​

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ತ್ರಿಶಾ ಯಾವಾಗಲೋ ಮದುವೆ ಆಗಿರಬೇಕಿತ್ತು. 2015ರ ಜನವರಿ 23ರಂದು ತ್ರಿಶಾ ಅವರು ಚೆನ್ನೈ ಮೂಲದ ಉದ್ಯಮಿ ವರುಣ್ ಮಣಿಯನ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡರು. ಅಂತೂ ತ್ರಿಶಾ ಮದುವೆ ಆಗುತ್ತಿದ್ದಾರೆ ಎಂದು ಅಭಿಮಾನಿಗಳು ಖುಷಿಪಟ್ಟರು. ಆದರೆ, ಅಲ್ಲಾಗಿದ್ದೇ ಬೇರೆ. ತ್ರಿಶಾ ಅವರು ಎಂಗೇಜ್​ಮೆಂಟ್​ ಮುರಿದುಕೊಂಡರು. ಮೇ 2015ರಲ್ಲಿ ಇಬ್ಬರೂ ಬೇರೆ ಆದರು. ಇದಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ.

ಇದನ್ನೂ ಓದಿ: ಮತ್ತೊಂದು ಬಿಗ್ ಬಜೆಟ್ ಚಿತ್ರಕ್ಕೆ ಸಹಿ ಹಾಕಿದ ನಟಿ ತ್ರಿಶಾ; ಹೀರೋ ಯಾರು?

ಲಿಂಕ್​ಅಪ್ಸ್: ಖಾಸಗಿ ಫೋಟೋಗಳು ಲೀಕ್​ ಆಗಿ ತ್ರಿಶಾ ಈ ಮೊದಲು ತೊಂದರೆ ಅನುಭವಿಸಿದ್ದರು. ಟಾಲಿವುಡ್ ನಟ ರಾಣಾ ದಗ್ಗುಬಾಟಿ ಜೊತೆ ಅವರು ಪ್ರೀತಿಯಲ್ಲಿದ್ದರು. ಇಬ್ಬರೂ ಆಪ್ತವಾಗಿರುವ ಫೋಟೋಗಳು ವೈರಲ್ ಆಗಿತ್ತು. ಅಷ್ಟೇ ಅಲ್ಲದೆ, ಧನುಷ್ ಜೊತೆಗಿನ ಫೋಟೋ ಕೂಡ ಲೀಕ್ ಆಗಿತ್ತು. ಇದು ತ್ರಿಶಾ ವೃತ್ತಿ ಜೀವನದಲ್ಲಿ ಕಪ್ಪು ಚುಕ್ಕೆ ಆಗಿಯೇ ಉಳಿದಿದೆ. ಇದನ್ನು ಮರೆತು ಮುಂದೆ ಸಾಗಲು ಅವರು ಪ್ರಯತ್ನಿಸುತ್ತಿದ್ದಾರೆ.

ಸಿನಿಮಾ ಬಗ್ಗೆ: ತ್ರಿಶಾ ಚಿತ್ರರಂಗಕ್ಕೆ ಕಾಲಿಟ್ಟಿದ್ದು 2002ರಲ್ಲಿ. ‘ಮೌನಂ ಪೇಸಿಯದೆ’ ಅವರ ನಟನೆಯ ಮೊದಲ ಸಿನಿಮಾ. ಆ ಬಳಿಕ ಅವರು ಹಲವು ತಮಿಳು ಸಿನಿಮಾಗಳಲ್ಲಿ ನಟಿಸಿದರು. 2014ರಲ್ಲಿ ಪುನೀತ್ ರಾಜ್​ಕುಮಾರ್ ನಟನೆಯ ‘ಪವರ್’ ಸಿನಿಮಾದಲ್ಲಿ ಅವರು ನಟಿಸಿದ್ದರು. ಅವರು ಪುನೀತ್ ಅಭಿನಯದ ‘ದ್ವಿತ್ವ’ ಸಿನಿಮಾದಲ್ಲಿ ನಟಿಸಬೇಕಿತ್ತು. ಆದರೆ, ಪುನೀತ್ ನಿಧನದ ಬಳಿಕ ಸಿನಿಮಾ ನಿಂತಿದೆ. ಸದ್ಯ ‘ಲಿಯೋ’ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ದಳಪತಿ ವಿಜಯ್ ನಟನೆಯ ಈ ಚಿತ್ರ ಮುಂದಿನ ತಿಂಗಳು ರಿಲೀಸ್ ಆಗಲಿದೆ ಎನ್ನಲಾಗಿದೆ. ಲೋಕೇಶ್ ಕನಗರಾಜ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:40 pm, Wed, 20 September 23

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು