ಮಲಯಾಳಂ ಸಿನಿಮಾ ಬಿಡುಗಡೆ ಹಕ್ಕು ಖರೀದಿಸಿದ ಕೆಆರ್​ಜಿ, ಶ್ವಾನದ ಕುರಿತ ಸಿನಿಮಾ ಕೈ ಹಿಡಿಯುವುದೇ?

KRG: ಮಲಯಾಳಂ ಸಿನಿಮಾ ವಾಲಟ್ಟಿಯ ಥಿಯೇಟ್ರಿಕಲ್ ಹಕ್ಕನ್ನು ಕನ್ನಡದ ಸಿನಿಮಾ ನಿರ್ಮಾಣ ಹಾಗೂ ವಿತರಣಾ ಸಂಸ್ಥೆ ಕೆಆರ್​ಜಿ ಖರೀದಿಸಿದೆ.

ಮಲಯಾಳಂ ಸಿನಿಮಾ ಬಿಡುಗಡೆ ಹಕ್ಕು ಖರೀದಿಸಿದ ಕೆಆರ್​ಜಿ, ಶ್ವಾನದ ಕುರಿತ ಸಿನಿಮಾ ಕೈ ಹಿಡಿಯುವುದೇ?
ವಾಲಟ್ಟಿ ಸಿನಿಮಾ
Follow us
ಮಂಜುನಾಥ ಸಿ.
|

Updated on: Jun 17, 2023 | 9:27 PM

ಶ್ವಾನ ಪ್ರೇಮದ ಕುರಿತಾದ ಕನ್ನಡ ಸಿನಿಮಾ 777 ಚಾರ್ಲಿ (777 Charlie) ಈಗಾಗಲೇ ದೊಡ್ಡ ಹಿಟ್ ಆಗಿದೆ. ರಕ್ಷಿತ್ ಶೆಟ್ಟಿ (Rakshit Shetty) ನಟನೆಯ 777 ಚಾರ್ಲಿ ಸಿನಿಮಾವನ್ನು ಕನ್ನಡಿಗರು ಮಾತ್ರವೇ ಅಲ್ಲದೆ ಹಲವು ಭಾಷೆಯ ಜನ ವೀಕ್ಷಿಸಿ ಬಹುವಾಗಿ ಮೆಚ್ಚಿಕೊಂಡಿದ್ದಾರೆ. ಇದೀಗ ಶ್ವಾನದ ಬಗೆಗಿನ ಕತೆಯನ್ನೇ ಹೊಂದಿರುವ ವಾಲಟ್ಟಿ ಹೆಸರಿನ ಮಲಯಾಳಂ ಸಿನಿಮಾ ಬಿಡುಗಡೆಗೆ ತಯಾರಾಗಿದ್ದು ಈ ಸಿನಿಮಾವನ್ನು ಕೇರಳ ಹೊರತುಪಡಿಸಿ ವಿಶ್ವದಾದ್ಯಂತ ಕನ್ನಡದ ನಿರ್ಮಾಣ ಹಾಗೂ ವಿತರಣಾ ಸಂಸ್ಥೆ ಕೆಆರ್​ಜಿ (KRG Studios) ಬಿಡುಗಡೆ ಮಾಡಲು ಮುಂದಾಗಿದೆ.

‘ವಾಲಟ್ಟಿ – ಎ ಟೇಲ್ ಆಫ್ ಟೇಲ್ಸ್’ ಚಿತ್ರವು ಸಾಕು ನಾಯಿಗಳ ಗ್ಯಾಂಗ್ ಬಗೆಗಿನ ಫೀಲ್ ಗುಡ್ ಮಾದರಿಯ ಸಿನಿಮಾ ಆಗಿದ್ದು, ಎಮೋಷನ್ ಜೊತೆಗೆ ಅಮೋಘ ಸಾಹಸಮಯ ದೃಶ್ಯಗಳನ್ನು ಸಹ ಒಳಗೊಂಡಿದೆ. ಮಲಯಾಳಂನ ಜನಪ್ರಿಯ ನಟರಾದ ರೋಷನ್ ಮ್ಯಾಥ್ಯೂ, ಸೌಬಿನ್ ಶಾಹಿರ್, ಇಂದ್ರನ್ಸ್, ಸನ್ನಿ ವೇಯ್ನ್, ಸೈಜು ಕುರುಪ್ ಮತ್ತು ಇತರರು ನಾಯಿ ಪಾತ್ರಗಳಿಗೆ ತಮ್ಮ ಧ್ವನಿಯನ್ನು ನೀಡಿದ್ದಾರೆ.

ಇಡೀ ಭಾರತೀಯ ಚಿತ್ರರಂಗದಲ್ಲಿ ಇದೇ ಮೊದಲ ಬಾರಿಗೆ ಕ್ಯಾನೈನ್ ಮತ್ತು ಇತರ ಸಾಕುಪ್ರಾಣಿಗಳನ್ನು ಆಧಾರವಾಗಿಟ್ಟುಕೊಂಡು ಮಾಡಿರೋ ಸಿನೆಮಾ ಇದಾಗಿದೆ. ನೋಡುಗರ ಮನಸೆಳೆಯುವ ತಾಜಾ ದೃಶ್ಯಗಳಲ್ಲದೇ, ಪ್ರೀತಿ, ಕಾಮಿಡಿ ಹಾಗೂ ಅಡ್ವೆಚರಸ್ ಎಲಿಮೆಂಟ್ಸ್ ಹೊಂದಿದೆ. ಕೆಆರ್‌ಜಿ ಸ್ಟುಡಿಯೋಸ್‌ನ ಸಂಸ್ಥಾಪಕ ಕಾರ್ತಿಕ್ ಗೌಡ, ಸಿನಿಮಾದ ಗ್ಲೋಬಲ್ ಥಿಯಾಟ್ರಿಕಲ್ ರೈಟ್ಸ್ ಅನ್ನು ಖರೀದಿಸಿದ್ದು ಸಿನಿಮಾದ ಮೇಲೆ ಅಪಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಭಿನ್ನವಾದ ಹಾಗೂ ಹೊಸ ಮಾದರಿಯ ಕಥೆಯ ಮೂಲಕ ಕಿರಿಯ ಮತ್ತು ಹಿರಿಯ ಪ್ರೇಕ್ಷಕರನ್ನು ಆಕರ್ಷಿಸುತ್ತದೆ ಎಂಬುದು ಕಾರ್ತಿಕ್ ನಂಬಿಕೆ.

ಇದನ್ನೂ ಓದಿ:Adipurush: ಕರುನಾಡಿನಲ್ಲಿ ‘ಕೆಆರ್​ಜಿ ಸ್ಟುಡಿಯೋಸ್​’ ಸಂಸ್ಥೆಯ ಪಾಲಾಯ್ತು ‘ಆದಿಪುರುಷ್​’ ಸಿನಿಮಾ ವಿತರಣೆ ಹಕ್ಕು

ದಿಲ್ ರಾಜು ಅವರು ತೆಲುಗಿನಲ್ಲಿ, ಅನಿಲ್ ತದಣಿ ಹಿಂದಿಯಲ್ಲಿ ಹಂಚಿಕೆಯ ಜವಾಬ್ದಾರಿಯನ್ನು ಹೊತ್ತಿದ್ದು, ಓವರ್ ಸೀಸ್ ಡಿಸ್ಟ್ರಿಬ್ಯುಶನ್ ಅನ್ನು ಹೋಮ್ ಸ್ಕ್ರೀನ್ ಎಂಟರ್ಟೇನ್ಮೆಂಟ್ ವಹಿಸಿಕೊಂಡಿದೆ. ವಾಲಟ್ಟಿಯನ್ನು ವಿಜಯ್ ಬಾಬು ಪ್ರಸ್ತುತಪಡಿಸಿದ್ದು ಫ್ರೈಡೇ ಫಿಲ್ಮ್ ಹೌಸ್ ನಿರ್ಮಿಸಿದ್ದಾರೆ. ನಿರ್ದೇಶಕ ದೇವನ್ ರವರು ಆಕ್ಷನ್ ಕಟ್ ಹೇಳಿರುವ ಚೊಚ್ಚಲ ಚಿತ್ರ ಇದಾಗಿದೆ. ಚಿತ್ರವು ಜುಲೈ 14 ರಂದು ಮಲಯಾಳಂನಲ್ಲಿ ಬಿಡುಗಡೆಯಾಗುತ್ತದೆ ಮತ್ತು ಒಂದು ವಾರದ ನಂತರ ಕನ್ನಡ, ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಪ್ರಪಂಚದಾದ್ಯಂತ ಬಿಡುಗಡೆಗೊಳ್ಳುತ್ತಿದೆ.

ಕೆಆರ್​ಜಿ ಸ್ಟುಡಿಯೋಸ್ ಹೊಂಬಾಳೆ ನಿರ್ಮಾಣ ಸಂಸ್ಥೆಯ ಸೋದರ ಸಂಸ್ಥೆಯೇ ಆಗಿದೆ. ಕೆಆರ್​ಜಿ ಸಹ ಸ್ವತಂತ್ರ್ಯವಾಗಿ ಸಿನಿಮಾ ನಿರ್ಮಾಣ ಹಾಗೂ ಸಿನಿಮಾ ವಿತರಣೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದೆ. ಇದೀಗ ಬಿಡುಗಡೆ ಆಗಿರುವ ಪ್ರಭಾಸ್​ರ ಬಹುನಿರೀಕ್ಷಿತ ಸಿನಿಮಾ ಆದಿಪುರುಷ್ ಅನ್ನು ಕರ್ನಾಟಕದಲ್ಲಿ ವಿತರಣೆ ಮಾಡಿರುವುದು ಕೆಆರ್​ಜಿ ಸ್ಟುಡಿಯೋದವರೇ ಆಗಿದ್ದಾರೆ.

ವಿತರಣೆ ಜೊತೆಗೆ ಸಿನಿಮಾ ನಿರ್ಮಾಣದಲ್ಲಿಯೂ ಕೆಆರ್​ಜಿ ಬ್ಯುಸಿಯಾಗಿದ್ದು ಡಾಲಿ ಧನಂಜಯ್, ರಮ್ಯಾ, ಅತಿಥಿ ಪಾತ್ರದಲ್ಲಿ ಶಿವಣ್ಣ ಇನ್ನೂ ಅನೇಕ ಪ್ರತಿಭಾವಂತರು ನಟಿಸಿರುವ ಉತ್ತರಕಾಂಡ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಕೆಆರ್​ಜಿ ನಿರ್ಮಾಣದ ಹೊಯ್ಸಳ ಸಿನಿಮಾ ಕೆಲ ತಿಂಗಳ ಹಿಂದೆ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ