‘ಸಮಂತಾ ಮಾಡಿದಂತಹ ಪಾತ್ರಗಳನ್ನು ನಾನು ಮಾಡಲ್ಲ’; ಟಕ್ಕರ್​ ಕೊಟ್ಟ ಕೃತಿ ಶೆಟ್ಟಿ

ಸಮಂತಾ ಅವರ ಮಾಜಿ ಪತಿ ನಾಗ ಚೈತನ್ಯ ಅಭಿನಯದ ‘ಕಸ್ಟಡಿ’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿದೆ. ಆ ಚಿತ್ರಕ್ಕೆ ಕೃತಿ ಶೆಟ್ಟಿ ನಾಯಕಿ.

‘ಸಮಂತಾ ಮಾಡಿದಂತಹ ಪಾತ್ರಗಳನ್ನು ನಾನು ಮಾಡಲ್ಲ’; ಟಕ್ಕರ್​ ಕೊಟ್ಟ ಕೃತಿ ಶೆಟ್ಟಿ
ಸಮಂತಾ, ಕೃತಿ ಶೆಟ್ಟಿ
Follow us
ಮದನ್​ ಕುಮಾರ್​
|

Updated on: May 14, 2023 | 1:02 PM

ನಟಿ ಕೃತಿ ಶೆಟ್ಟಿ (Krithi Shetty) ಅವರು ಟಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ. ಹಲವು ಬಗೆಯ ಪಾತ್ರಗಳನ್ನು ಒಪ್ಪಿಕೊಂಡು ಅವರು ಶೈನ್​ ಆಗುತ್ತಿದ್ದಾರೆ. ಅವರು ನಟಿಸಿದ ‘ಕಸ್ಟಡಿ’ ಚಿತ್ರ ಇತ್ತೀಚೆಗೆ ಬಿಡುಗಡೆ ಆಯಿತು. ಈ ಚಿತ್ರದ ಪ್ರಚಾರದ ವೇಳೆ ಅನೇಕ ವಿಚಾರಗಳ ಬಗ್ಗೆ ಕೃತಿ ಶೆಟ್ಟಿ ಮಾತನಾಡಿದ್ದಾರೆ. ಅಚ್ಚರಿ ಎಂದರೆ ಸಮಂತಾ ರುತ್​ ಪ್ರಭು (Samantha Ruth Prabhu) ಬಗ್ಗೆ ಕೃತಿ ಶೆಟ್ಟಿ ಆಡಿದ ಮಾತುಗಳು ಚರ್ಚೆ ಹುಟ್ಟುಹಾಕಿವೆ. ಚಿತ್ರರಂಗದಲ್ಲಿ ಸಮಂತಾ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಅವರ ಎದುರಿನಲ್ಲಿ ಕೃತಿ ಶೆಟ್ಟಿಯ ಅನುಭವ ತುಂಬ ಚಿಕ್ಕದು. ಹಾಗಿದ್ದರೂ ಕೂಡ ಹಿರಿಯ ನಟಿಗೆ ಟಕ್ಕರ್​ ಕೊಡುವ ರೀತಿಯಲ್ಲಿ ಕೃತಿ ಶೆಟ್ಟಿ ಅವರು ಮಾತನಾಡಿದ್ದಾರೆ. ‘ಉ ಅಂಟಾವಾ ಮಾವ..’ ರೀತಿಯ ಹಾಡಿನಲ್ಲಿ ತಾವು ನಟಿಸಲ್ಲ ಎಂದು ಅವರು ಹೇಳಿದ್ದಾರೆ. ಈ ವಿಚಾರ ಟಾಲಿವುಡ್​ನಲ್ಲಿ ಚರ್ಚೆ ಆಗುತ್ತಿದೆ.

ಸಮಂತಾ ರುತ್​ ಪ್ರಭು ಅವರು ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿ ಬಹಳ ಸಮಯ ಕಳೆದಿದೆ. ನಾಗ ಚೈತನ್ಯ ಜೊತೆ ‘ಕಸ್ಟಡಿ’ ಚಿತ್ರದಲ್ಲಿ ಕೃತಿ ಶೆಟ್ಟಿ ನಟಿಸಿದ್ದಾರೆ. ತಮ್ಮದೇ ಸಿನಿಮಾದ ಹೀರೋನ ಮಾಜಿ ಪತ್ನಿ ಬಗ್ಗೆ ಕೇಳಿಬಂದ ಪ್ರಶ್ನೆಗೆ ಕೃತಿ ಶೆಟ್ಟಿ ಅವರು ಧೈರ್ಯವಾಗಿ ಉತ್ತರಿಸಿದ್ದಾರೆ.

ಇದನ್ನೂ ಓದಿ:  Kriti Shetty: ಸೀರೆಯುಟ್ಟು ಬಂದ ಮಂಗಳೂರು ಚೆಲುವೆ ಕೃತಿ ಶೆಟ್ಟಿ

‘ಕಸ್ಟಡಿ’ ಚಿತ್ರದ ಪ್ರಚಾರದ ಸಲುವಾಗಿ ಮಾಧ್ಯಮಗಳಿಗೆ ಅವರು ಸಂದರ್ಶನ ನೀಡಿದ್ದಾರೆ. ಈ ವೇಳೆ ಅವರಿಗೆ ಒಂದು ಪ್ರಶ್ನೆ ಎದುರಾಗಿದೆ. ‘ಉ ಅಂಟಾವಾ..’ ಹಾಡಿನ ಆಫರ್​ ನಿಮಗೆ ಸಿಕ್ಕಿದ್ದರೆ ಒಪ್ಪಿಕೊಳ್ಳುತ್ತಿದ್ರಾ ಎಂದು ಕೇಳಿದ್ದಕ್ಕೆ ಕೃತಿ ಶೆಟ್ಟಿ ಅವರು ‘ಇಲ್ಲ’ ಎಂದು ಹೇಳಿದ್ದಾರೆ. ‘ಸದ್ಯಕ್ಕೆ ನಾನು ಅಂಥ ಪಾತ್ರ ಒಪ್ಪಿಕೊಳ್ಳಲ್ಲ. ಆ ರೀತಿ ಪಾತ್ರದಲ್ಲಿ ನಟಿಸಲು ನನಗೆ ಕಷ್ಟ ಆಗುತ್ತದೆ’ ಎಂದು ಅವರು ಹೇಳಿದ್ದಾರೆ. ಆದರೂ ಕೂಡ ಅವರಿಗೆ ಆ ಹಾಡಿನಲ್ಲಿ ಸಮಂತಾ ಅವರ ಪರ್ಫಾರ್ಮೆನ್ಸ್​ ಇಷ್ಟ ಆಗಿದೆ.

ಇದನ್ನೂ ಓದಿ: Krithi Shetty: ಕರಾವಳಿಯ ಚೆಲುವೆ ಕೃತಿ ಶೆಟ್ಟಿ ಇತ್ತೀಚೆಗೆ ಹಂಚಿಕೊಂಡಿರುವ ಫೋಟೋಗಳು ಇಲ್ಲಿವೆ

ಐಟಂ ಡ್ಯಾನ್ಸ್​ ವಿಚಾರದಲ್ಲಿ ನಟಿಯರ ಅಭಿಪ್ರಾಯ ಬೇರೆ ಬೇರೆ ರೀತಿ ಇದೆ. ಒಂದು ಕಾಲದಲ್ಲಿ ಐಟಂ ಡ್ಯಾನ್ಸ್​ ಮಾಡಲು ಪ್ರತ್ಯೇಕ ನಟಿಯರು ಇರುತ್ತಿದ್ದರು. ನಂತರ ಕಾಲ ಬದಲಾಯಿತು. ಹೀರೋಯಿನ್​ಗಳೇ ಸ್ಪೆಷಲ್​ ಸಾಂಗ್​ನಲ್ಲಿ ಡ್ಯಾನ್ಸ್​ ಮಾಡಲು ಆರಂಭಿಸಿದರು. ಕರೀನಾ ಕಪೂರ್​, ಕತ್ರಿನಾ ಕೈಫ್​, ದೀಪಿಕಾ ಪಡುಕೋಣೆ ಮುಂತಾದವರು ಇಂಥ ಹಾಡುಗಳಲ್ಲಿ ಕಾಣಿಸಿಕೊಂಡು ಫೇಮಸ್​ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್