AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಿಕ್ಷುಕನ ವೇಷ ಧರಿಸಲು ಕೋಟಿ ಕೋಟಿ ಸಂಭಾವನೆ ಪಡೆದ ಧನುಶ್

Dhanush remuneration for Kubera: ಧನುಶ್ ನಟನೆಯ ‘ಕುಬೇರ’ ಸಿನಿಮಾ ಇಂದು ಬಿಡುಗಡೆ ಆಗಿದ್ದು, ಸಿನಿಮಾನಲ್ಲಿ ಭಿಕ್ಷುಕನ ಪಾತ್ರದಲ್ಲಿ ಧನುಶ್ ನಟಿಸಿದ್ದಾರೆ. ಸಿನಿಮಾ ನೋಡಿದವರೆಲ್ಲ ಧನುಶ್ ಅವರ ನಟನೆಯನ್ನು ಕೊಂಡಾಡಿದ್ದಾರೆ. ಅಷ್ಟಕ್ಕೂ ಧನುಶ್, ಭಿಕ್ಷುಕನ ವೇಷ ಧರಿಸಲು ಪಡೆದುಕೊಂಡಿರುವ ಸಂಭಾವನೆ ಎಷ್ಟು? ಇದೇ ಸಿನಿಮಾನಲ್ಲಿ ನಟಿಸಿರುವ ನಾಗಾರ್ಜುನ, ರಶ್ಮಿಕಾ ಅವರಿಗೆ ಸಿಕ್ಕ ಸಂಭಾವನೆ ಎಷ್ಟು?

ಭಿಕ್ಷುಕನ ವೇಷ ಧರಿಸಲು ಕೋಟಿ ಕೋಟಿ ಸಂಭಾವನೆ ಪಡೆದ ಧನುಶ್
Dhanush
ಮಂಜುನಾಥ ಸಿ.
|

Updated on: Jun 20, 2025 | 6:33 PM

Share

ಧನುಶ್, ಭಾರತದ ಸ್ಟಾರ್ ನಟರಲ್ಲಿ ಒಬ್ಬರು. ದಳಪತಿ ವಿಜಯ್, ಅಜಿತ್ ಇನ್ನಿತರೆ ಕೆಲವು ಸ್ಟಾರ್ ನಟರಂತೆ ಮಾಸ್ ಸಿನಿಮಾಗಳ ಹಿಂದೆ ಓಡದೆ ಭಿನ್ನ ರೀತಿಯ ಸಿನಿಮಾಗಳನ್ನು, ಅದರಲ್ಲೂ ದಮನಿತರಿಗೆ ದನಿಯಾಗುವಂಥಹಾ ಸಿನಿಮಾಗಳಲ್ಲೇ ಹೆಚ್ಚಾಗಿ ನಟಿಸುತ್ತಾರೆ. ಸ್ಟಾರ್ ನಟರು ಫೈಟ್, ಡ್ಯಾನ್ಸು, ಐಟಂ ಸಾಂಗು ಇರುವ ಸಿನಿಮಾಗಳನ್ನೇ ಆಯ್ಕೆ ಮಾಡುತ್ತಿದ್ದರೆ ಧನುಶ್ ಮಾತ್ರ ಒಂದಕ್ಕಿಂತಲೂ ಒಂದು ಭಿನ್ನವಾದ ಪಾತ್ರ ಮತ್ತು ಕತೆಯುಳ್ಳ ಸಿನಿಮಾಗಳನ್ನು ಆಯ್ಕೆ ಮಾಡಿ ನಟಿಸುತ್ತಾ ಭೇಷ್ ಎನಿಸಿಕೊಳ್ಳುತ್ತಿದ್ದಾರೆ.

ಇದೀಗ ಧನುಶ್ ನಟನೆಯ ‘ಕುಬೇರ’ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾನಲ್ಲಿ ಧನುಶ್, ಭಿಕ್ಷುಕನ ಪಾತ್ರದಲ್ಲಿ ನಟಿಸಿದ್ದಾರೆ. ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ, ಸೂಪರ್ ಸ್ಟಾರ್ ನಟನೊಬ್ಬ ಭಿಕ್ಷುಕನ ಪಾತ್ರದಲ್ಲಿ ನಟಿಸಲು ಒಪ್ಪಿಕೊಳ್ಳುವುದೇ ಊಹಿಸಲು ಕಷ್ಟ. ಅಂಥಹದ್ದರಲ್ಲಿ ಧನುಶ್, ಭಿಕ್ಷುಕನ ಪಾತ್ರದಲ್ಲಿ ನಟಿಸಿರುವುದು ಮಾತ್ರವಲ್ಲ, ಸೆಟ್​ಗಳಲಲ್ಲಿ ಅಲ್ಲದೆ, ನಿಜವಾಗಿಯೂ ರಸ್ತೆ ಬದಿಯ ಕೊಳಕು ಪ್ರದೇಶಗಳಲ್ಲಿ ಕುಳಿತು ನಟನೆ ಮಾಡಿದ್ದಾರೆ.

ಇಂದು ‘ಕುಬೇರ’ ಸಿನಿಮಾ ನೋಡಿದ ಪ್ರತಿಯೊಬ್ಬರೂ ಸಹ ಧನುಶ್ ನಟನೆಯನ್ನು ಮನಸಾರೆ ಕೊಂಡಾಡುತ್ತಿದ್ದಾರೆ. ಧನುಶ್​ಗೆ ಮತ್ತೊಂದು ರಾಷ್ಟ್ರಪ್ರಶಸ್ತಿ ಕಟ್ಟಿಟ್ಟ ಬುತ್ತಿ ಎನ್ನುತ್ತಿದ್ದಾರೆ. ಧನುಶ್ ಹೊರತಾಗಿ ಇನ್ಯಾವ ಸ್ಟಾರ್ ನಟರೂ ಸಹ ಇಂಥಹದ್ದೊಂದು ಪಾತ್ರವನ್ನು ಒಪ್ಪಿಕೊಳ್ಳುತ್ತಿರಲಿಲ್ಲ ಎಂಬುದು ನಿಜ, ಆದರೆ ಧನುಶ್ ಸಹ ಭಿಕ್ಷುಕನ ವೇಷ ಧರಿಸಲು ಭಾರಿ ದುಬಾರಿ ಹಣವನ್ನೇ ಪಡೆದುಕೊಂಡಿದ್ದಾರೆ. ‘ಕುಬೇರ’ ಸಿನಿಮಾನಲ್ಲಿ ನಟಿಸಲು ಧನುಶ್​ಗೆ 30 ಕೋಟಿ ರೂಪಾಯಿ ಸಂಭಾವನೆ ನೀಡಲಾಗಿದೆಯಂತೆ.

ಇದನ್ನೂ ಓದಿ:‘ಕುಬೇರ’ ಪ್ರಚಾರ: ರಶ್ಮಿಕಾ ಮಂದಣ್ಣ ಕಾಲೆಳೆದ ನಟ ಧನುಶ್

ಧನುಶ್ ಮಾತ್ರವೇ ಅಲ್ಲದೆ ಈ ಸಿನಿಮಾನಲ್ಲಿ ನಟಿಸಿರುವ ಅಕ್ಕಿನೇನಿ ನಾಗಾರ್ಜುನ ಹಾಗೂ ನಟಿ ರಶ್ಮಿಕಾ ಮಂದಣ್ಣ ಅವರುಗಳಿಗೂ ಸಹ ಭಾರಿ ದೊಡ್ಡ ಸಂಭಾವನೆಯನ್ನೇ ನಿರ್ಮಾಪಕರು ನೀಡಿದ್ದಾರೆ. ಧನುಶ್​ ಅವರಷ್ಟೆ ಪ್ರಮುಖವಾದ ಪಾತ್ರ ನಿರ್ವಹಿಸಿರುವ ನಾಗಾರ್ಜುನ ಅವರಿಗೆ 14 ಕೋಟಿ ರೂಪಾಯಿ ಸಂಭಾವನೆಯನ್ನು ಈ ಸಿನಿಮಾಕ್ಕಾಗಿ ನೀಡಲಾಗಿದೆಯಂತೆ. ಇನ್ನು ನಾಯಕಿ ರಶ್ಮಿಕಾ ಮಂದಣ್ಣ ಅವರಿಗೆ ನಾಲ್ಕು ಕೋಟಿ ರೂಪಾಯಿ ಹಣವನ್ನು ನೀಡಲಾಗಿದೆ.

ಸಿನಿಮಾದ ಒಟ್ಟು ಬಜೆಟ್ 120 ಕೋಟಿ ರೂಪಾಯಿಗಳಾಗಿದ್ದು, ಸಿನಿಮಾದ ಒಟ್ಟು ಬಜೆಟ್​ನ 30% ಹಣವನ್ನು ಧನುಶ್ ಒಬ್ಬರಿಗೇ ನೀಡಲಾಗಿದೆ. ನಿರ್ದೇಶಕ ಶೇಖರ್ ಕಮ್ಮುಲ ಅವರಿಗೆ ನಾಲ್ಕು ಕೋಟಿ ಸಂಭಾವನೆ ನೀಡಲಾಗಿದೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್