ಸ್ವಲ್ಪ ಆದ್ರೂ ನಾಚಿಕೆ ಇರಲಿ: ಕೊರೊನಾ ಸಮಯದಲ್ಲಿ ಬೀಚ್​ಗೆ ಹೋಗಿ ಬಿಕಿನಿ ಹಾಕುವವರಿಗೆ ಸ್ಟಾರ್​ ನಟನ ಟಾಂಗ್

ಲಸಿಕೆ ಪಡೆಯುವ ಸಂದರ್ಭದಲ್ಲಿ ಬಾಲಿವುಡ್​ ಸೆಲೆಬ್ರಿಟಿಗಳು ಕ್ಯಾಮೆರಾಗೆ ಪೋಸ್​ ನೀಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈಗ ಸಾಮಾನ್ಯರು ಹೊತ್ತಿನ ಊಟಕ್ಕೂ ಒದ್ದಾಡುತ್ತಿದ್ದಾರೆ.

ಸ್ವಲ್ಪ ಆದ್ರೂ ನಾಚಿಕೆ ಇರಲಿ: ಕೊರೊನಾ ಸಮಯದಲ್ಲಿ ಬೀಚ್​ಗೆ ಹೋಗಿ ಬಿಕಿನಿ ಹಾಕುವವರಿಗೆ ಸ್ಟಾರ್​ ನಟನ ಟಾಂಗ್
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
|

Updated on: Apr 25, 2021 | 6:16 PM

ದೇಶದೆಲ್ಲೆಡೆ ಕೊರೊನಾ ವೈರಸ್​ ಮಿತಿಮೀರಿ ಹರಡುತ್ತಿದೆ. ಅಕ್ಷಯ್​ ಕುಮಾರ್​ ಸೇರಿದಂತೆ ಸಾಕಷ್ಟು ಸ್ಟಾರ್​ಗಳು ಕೊರೊನಾ ವಿರುದ್ಧ ಹೋರಾಡೋಕೆ ತಮ್ಮನ್ನು ತಾವು ಮುಡಿಪಿಟ್ಟಿದ್ದಾರೆ. ಇಂಥ ಕಷ್ಟದ ಸ್ಥಿತಿಯಲ್ಲಿ ಸೋನು ಸೂದ್​ ನೇರವಾಗಿ ಅಖಾಡಕ್ಕೆ ಇಳಿದು ಸಹಾಯ ಮಾಡುತ್ತಿದ್ದಾರೆ. ಅಕ್ಷಯ್​ ಕುಮಾರ್​ ಆರ್ಥಿಕವಾಗಿ ಸಹಾಯ ಮಾಡುವ ಮೂಲಕ ಕೊರೊನಾ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ್ದಾರೆ. ಈ ಮಧ್ಯೆ ಕೆಲವರು ಮಾಲ್ಡೀವ್ಸ್​ಗೆ ತೆರಳಿ ವೆಕೇಷನ್​ ಫೋಟೋ ಹಾಕುತ್ತಿದ್ದಾರೆ. ಇದಕ್ಕೆ ಬಾಲಿವುಡ್​ ಹಿರಿಯ ನಟ ನವಾಜುದ್ದೀನ್​ ಸಿದ್ಧಿಕಿ ಸಿಟ್ಟಾಗಿದ್ದು, ಸ್ವಲ್ಪವಾದರೂ ನಾಚಿಕೆ ಇರಲಿ ಎಂದಿದ್ದಾರೆ.

ದೇಶದಲ್ಲಿ ಪ್ರತಿ ನಿತ್ಯ ಲಕ್ಷ ಲಕ್ಷ ಕೊರೊನಾ ಕೇಸ್​ಗಳು ಬರುತ್ತಿವೆ. ಇದನ್ನು ನಿಯಂತ್ರಣ ಮಾಡೋಕೆ ಸರ್ಕಾರಗಳು ಒದ್ದಾಡುತ್ತಿವೆ. ಆಸ್ಪತ್ರೆಗಳಲ್ಲಿ ಬೆಡ್​ಗಳು ಸಿಗುತ್ತಿಲ್ಲ ಎಂಬುದು ಒಂದು ಕಡೆಯಾದರೆ, ಸಾವಿನ ಸಂಖ್ಯೆ ಏರುತ್ತಿರುವುದು ಮತ್ತೊಂದು ಕಡೆ. ಈ ಮಧ್ಯೆ ಕೆಲವರು ವಿದೇಶಕ್ಕೆ ಹಾರಿದ್ದಾರೆ. ಅಲ್ಲಿ ಹಾಯಾಗಿ ದಿನ ಕಳೆಯುತ್ತಿದ್ದಾರೆ. ಇದು ನವಾಜುದ್ದೀನ್​ ಸಿದ್ಧಿಕಿಗೆ ಬೇಸರ ತರಿಸಿದೆ.

ಲಸಿಕೆ ಪಡೆಯುವ ಸಂದರ್ಭದಲ್ಲಿ ಬಾಲಿವುಡ್​ ಸೆಲೆಬ್ರಿಟಿಗಳು ಕ್ಯಾಮೆರಾಗೆ ಪೋಸ್​ ನೀಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈಗ ಸಾಮಾನ್ಯರು ಹೊತ್ತಿನ ಊಟಕ್ಕೂ ಒದ್ದಾಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಸೆಲೆಬ್ರಿಟಿಗಳು ವಿದೇಶಕ್ಕೆ ತೆರಳಿ ಹಣವನ್ನು ದುಂದುವೆಚ್ಛ ಮಾಡುತ್ತಿದ್ದಾರೆ. ಸ್ವಲ್ಪವಾದರೂ ನಾಚಿಕೆ ಇಟ್ಟುಕೊಳ್ಳಿ ಎಂದು ಕಿವಿಮಾತು ಹೇಳಿದ್ದಾರೆ.

ದಯವಿಟ್ಟು ಒಳ್ಳೆಯ ಮನಸ್ಸು ಇಟ್ಟುಕೊಳ್ಳಿ. ಇಡೀ ದೇಶ ಕೊರೊನಾಗೆ ತತ್ತರಿಸಿದೆ. ಕೊರೊನಾದಿಂದ ಬಳಲುತ್ತಿರುವವರಿಗೆ ಟಾಂಟ್ ಕೊಡಬೇಡಿ ಎಂದು ಸಿದ್ಧಿಕಿ ಕೋರಿದ್ದಾರೆ. ಇತ್ತೀಚೆಗೆ ಅನೇಕ ಸೆಲೆಬ್ರಿಟಿಗಳು ಮಾಲ್ಡೀವ್ಸ್​ಗೆ ತೆರಳಿ ಫೋಟೋ ಹಂಚಿಕೊಂಡಿದ್ದರು. ಇಂಥ ಕಷ್ಟ ಸಮಯದಲ್ಲಿ ಅವರು ದೇಶ ಬಿಟ್ಟು ಹೋದ ಬಗ್ಗೆ ಅಭಿಮನಿಗಳು ಬೇಸರ ಹೊರ ಹಾಕಿದ್ದರು.

ಇದನ್ನೂ ಓದಿ: ಕೊರೊನಾದಿಂದ ಗುಣಮುಖರಾಗುತ್ತಿದ್ದಂತೆಯೇ ಮಾಲ್ಡೀವ್ಸ್​ಗೆ ಹಾರಿದ ರಣಬೀರ್ ಮತ್ತು ಆಲಿಯಾ; ಸಾಮಾಜಿಕ ಜಾಲತಾಣದಲ್ಲಿ ಫುಲ್​ ಟ್ರೋಲ್

ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ