ವಿಜಯ್ ಕೊನೆಯ ಸಿನಿಮಾ ಸ್ಮರಣೀಯಗೊಳಿಸಲಿರುವ ಕೆವಿಎನ್
KVN Production: ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ ಅನ್ನು ಕೆವಿಎನ್ ಪ್ರೊಡಕ್ಷನ್ಸ್ನ ವೆಂಕಟ್ ನಿರ್ಮಾಣ ಮಾಡುತ್ತಿದ್ದಾರೆ. ವಿಜಯ್ರ ಕೊನೆಯ ಸಿನಿಮಾ ಇದಾಗಿರುವ ಕಾರಣ ಭಾರಿ ದೊಡ್ಡ ಮಟ್ಟದಲ್ಲಿ ಸಿನಿಮಾ ನಿರ್ಮಾಣವನ್ನು ಕೆವಿಎನ್ ಪ್ರೊಡಕ್ಷನ್ಸ್ ಮುಂದಾಗಿದೆ. ವಿಜಯ್ರ ವೃತ್ತಿ ಜೀವನದಲ್ಲಿಯೇ ದೊಡ್ಡ ಬಜೆಟ್ನ ಸಿನಿಮಾ ಇದಾಗಿರಲಿದೆ ಎನ್ನಲಾಗುತ್ತಿದೆ.

ದಳಪತಿ ವಿಜಯ್ ನಟನೆಯ 69ನೇ ಸಿನಿಮಾಕ್ಕೆ ‘ಜನನಾಯಗನ್’ ಎಂದು ಹೆಸರಿಡಲಾಗಿದೆ. ಇದು ವಿಜಯ್ ಅವರ ಕೊನೆಯ ಸಿನಿಮಾ ಎಂದು ಖುದ್ದು ಅವರೇ ಘೋಷಿಸಿದ್ದಾರೆ. ವಿಜಯ್ ರಾಜಕೀಯ ಪ್ರವೇಶ ಮಾಡಿರುವ ಕಾರಣ ಚಿತ್ರರಂಗದಿಂದ ದೂರಾಗುತ್ತಿದ್ದಾರೆ. ವಿಜಯ್ರ ಕೊನೆಯ ಸಿನಿಮಾ ಅನ್ನು ಕರ್ನಾಟಕದ ಹೆಮ್ಮೆಯ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿದೆ. ವಿಜಯ್ರ ಕೊನೆಯ ಸಿನಿಮಾವನ್ನು ಸ್ಮರಣೀಯಗೊಳಿಸುವ ನಿರ್ಧಾರ ಮಾಡಿದೆ ಕೆವಿಎನ್ ನಿರ್ಮಾಣ ಸಂಸ್ಥೆ.
‘ಜನನಾಯಗನ್’ ಸಿನಿಮಾಕ್ಕೆ ಭಾರಿ ಬಂಡವಾಳವನ್ನು ಕೆವಿಎನ್ನ ವೆಂಕಟ್ ಕೆ ನಾರಾಯಣ್ ಹೂಡುತ್ತಿದ್ದು, ಭಾರಿ ದೊಡ್ಡ ಪ್ರಮಾಣದಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅದ್ಧೂರಿ ಸೆಟ್ಗಳು, ಅದ್ಧೂರಿ ವಿಎಫ್ಎಕ್ಸ್ ಮಾತ್ರವೇ ಅಲ್ಲದೆ ಭಾರಿ ಸಂಖ್ಯೆಯ ಜನರನ್ನು ಸೇರಿಸಿ ಚಿತ್ರೀಕರಣ ಮಾಡಲು ಸಜ್ಜಾಗಿದ್ದಾರೆ. ಭಾರತ ಮಾತ್ರವೇ ಅಲ್ಲದೆ ವಿದೇಶಗಳಲ್ಲಿಯೂ ಚಿತ್ರೀಕರಣ ಮಾಡಲಾಗುತ್ತಿದ್ದು, ವಿಜಯ್ರ ವೃತ್ತಿ ಜೀವನದ ಭಾರಿ ಬಜೆಟ್ ಸಿನಿಮಾ ಇದಾಗಿರಲಿದೆ.
ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಹಲವು ಅತ್ಯುತ್ತಮ ಸಿನಿಮಾಗಳನ್ನು ನಿರ್ಮಾಣ ಮಾಡಿದೆ. ಗಣೇಶ್ ನಟನೆಯ ‘ಸಖತ್’ ಮೂಲಕ ಸಿನಿಮಾ ನಿರ್ಮಾಣ ಆರಂಭಿಸಿದ ವೆಂಕಟ್ ಅವರು ಆ ನಂತರ ‘ಬೈ ಟು ಲವ್’ ನಿರ್ಮಾಣ ಮಾಡಿ ಹಿಟ್ ನೀಡಿದರು. ಇದೀಗ ಕೆವಿಎನ್ ಪ್ರೊಡಕ್ಷನ್ನಿಂದ ಸಾಲು ಸಾಲು ಸಿನಿಮಾಗಳು ತೆರೆಗೆ ಬರಲು ಸಜ್ಜಾಗಿವೆ. ಧ್ರುವ ಸರ್ಜಾ ನಟಿಸಿ ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’, ಯಶ್ ನಟಿಸಿ, ಗೀತು ಮೋಹನ್ದಾಸ್ ನಿರ್ದೇಶನ ಮಾಡಿರುವ ಇಡೀ ಭಾರತವೇ ಎದುರು ನೋಡುತ್ತಿರುವ ‘ಟಾಕ್ಸಿಕ್’ ಸಿನಿಮಾ ಅನ್ನೂ ಸಹ ನಿರ್ಮಾಣ ಮಾಡುತ್ತಿರುವುದು ಕೆವಿಎನ್ನ ವೆಂಟಕ್ ಅವರೇ. ಇದರ ಜೊತೆಗೆ ಮಲಯಾಳಂ ಸಿನಿಮಾ ಒಂದಕ್ಕೂ ಬಂಡವಾಳ ಹೂಡಿದ್ದಾರೆ.
ಇದನ್ನೂ ಓದಿ:
ವಿಜಯ್ ನಟನೆಯ ‘ಜನನಾಯಗನ್’ ಸಿನಿಮಾದ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ. ಹಿಂದೆ ನಿಂತ ಅಗಣಿತ ಜನಸಾಗರದ ಮುಂದೆ ವಿಜಯ್ ಅವರು ಸೊಂಟದ ಮೇಲೆ ಕೈಯಿಟ್ಟುಕೊಂಡು ನಿಂತು ಸೆಲ್ಫೀ ತೆಗೆದುಕೊಳ್ಳುತ್ತಿರುವ ಫೋಟೋವನ್ನು ಪೋಸ್ಟರಿನಲ್ಲಿ ಬಳಸಲಾಗಿದೆ. ವಿಜಯ್ರ ರಾಜಕೀಯ ಪ್ರವೇಶವನ್ನು ಗಮನದಲ್ಲಿಟ್ಟುಕೊಂಡು ‘ಜನ ನಾಯಗನ್’ ಹೆಸರನ್ನು ಸಿನಿಮಾಕ್ಕೆ ಇಡಲಾಗಿದೆ.
‘ಜನ ನಾಯಗನ್’ ಸಿನಿಮಾ ಅನ್ನು ತಮಿಳಿನ ಖ್ಯಾತ ನಿರ್ದೇಶಕ ಹೆಚ್ ವಿನೋದ್ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಅನಿರುದ್ಧ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸತ್ಯನ್ ಸೂರ್ಯನ್ ಸಿನಿಮಾಟೊಗ್ರಫಿ, ಅನಲ್ ಅರಸು ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಇದೀಗ ಚಾಲ್ತಿಯಲ್ಲಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ