ಮೆಗಾ ಸ್ಟಾರ್ ಚಿರಂಜೀವಿ ಜೊತೆ ಕೆವಿಎನ್ ಪ್ರೊಡಕ್ಷನ್ಸ್ ಹೊಸ ಸಿನಿಮಾ

ಕನ್ನಡ, ತಮಿಳಿನಲ್ಲಿ ಸಿನಿಮಾಗಳನ್ನು ಮಾಡುತ್ತಿರುವ ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ಈಗ ತೆಲುಗಿಗೆ ಕಾಲಿಟ್ಟಿದೆ. ಟಾಲಿವುಡ್​ ಮೆಗಾ ಸ್ಟಾರ್ ಚಿರಂಜೀವಿ ನಟನೆಯ 158ನೇ ಸಿನಿಮಾಗೆ ಈ ಸಂಸ್ಥೆ ಬಂಡವಾಳ ಹೂಡಲು ಸಜ್ಜಾಗಿದೆ. ಚಿರಂಜೀವಿ ಅವರ ಜನ್ಮದಿನದ ಪ್ರಯುಕ್ತ ಹೊಸ ಸಿನಿಮಾವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ಘೋಷಿಸಿದೆ.

ಮೆಗಾ ಸ್ಟಾರ್ ಚಿರಂಜೀವಿ ಜೊತೆ ಕೆವಿಎನ್ ಪ್ರೊಡಕ್ಷನ್ಸ್ ಹೊಸ ಸಿನಿಮಾ
Chiranjeevi, Venkat Narayan

Updated on: Aug 24, 2025 | 7:13 AM

ಸ್ಟಾರ್ ನಟರ ಜೊತೆ ದೊಡ್ಡ ದೊಡ್ಡ ಸಿನಿಮಾಗಳನ್ನು ಮಾಡುತ್ತಿದೆ ಕನ್ನಡದ ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ನಿರ್ಮಾಣ ಸಂಸ್ಥೆ. ‘ಟಾಕ್ಸಿಕ್’, ‘ಕೆಡಿ’, ‘ಜನ ನಾಯಗನ್’ ಮುಂತಾದ ಬಹುನಿರೀಕ್ಷಿತ ಸಿನಿಮಾಗಳು ಈ ಸಂಸ್ಥೆಯಿಂದ ಮೂಡಿಬರುತ್ತಿವೆ. ಆ ಮೂಲಕ ದಕ್ಷಿಣ ಭಾರತ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾಗಿ ‘ಕೆವಿಎನ್ ಪ್ರೊಡಕ್ಷನ್ಸ್’ ಬೆಳೆದುನಿಂತಿದೆ. ಇದೀಗ ತೆಲುಗು ಚಿತ್ರರಂಗಕ್ಕೂ ಈ ಸಂಸ್ಥೆ ಎಂಟ್ರಿ ಕೊಟ್ಟಿದೆ. ಮೆಗಾ ಸ್ಟಾರ್ ಚಿರಂಜೀವಿ (Mega Star Chiranjeevi) ಜೊತೆ ಹೊಸ ಸಿನಿಮಾವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಘೋಷಿಸಿದೆ.

ಸಿನಿಮಾ ನಿರ್ಮಾಣ ಮತ್ತು ವಿತರಣೆಯಲ್ಲಿ ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ದೊಡ್ಡ ಹೆಸರು ಮಾಡಿದೆ. ಕನ್ನಡ, ತಮಿಳಿನಲ್ಲಿ ಸಿನಿಮಾಗಳನ್ನು ಮಾಡುತ್ತಿರುವ ಈ ನಿರ್ಮಾಣ ಸಂಸ್ಥೆ ಈಗ ಟಾಲಿವುಡ್ ಅಂಗಳಕ್ಕೆ ಕಾಲಿಟ್ಟಿದೆ. ತೆಲುಗಿನಲ್ಲಿ ತಮ್ಮ ಮೊದಲ ಸಿನಿಮಾವನ್ನೇ ಮೆಗಾ ಸ್ಟಾರ್ ಚಿರಂಜೀವಿ ಜೊತೆ ಮಾಡುತ್ತಿರುವುದು ವಿಶೇಷ. ಆ ಮೂಲಕ ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿಸಿದೆ.

ಕನ್ನಡದಲ್ಲಿ ಬಹುನಿರೀಕ್ಷಿತ ‘ಟಾಕ್ಸಿಕ್’, ‘ಕೆಡಿ’ ಸಿನಿಮಾಗಳನ್ನು ನಿರ್ಮಿಸುತ್ತಿರುವ ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯು ತಮಿಳಿನಲ್ಲಿ ದಳಪತಿ ವಿಜಯ್ ಅಭಿನಯದ ‘ಜನ ನಾಯಗನ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಆ ಮೂಲಕ ತಮಿಳು ಚಿತ್ರರಂಗದಲ್ಲೂ ಸಕ್ರಿಯವಾಗಿದೆ. ಅದೇ ರೀತಿ, ಇದೀಗ ಟಾಲಿವುಡ್​ನತ್ತಲೂ ಮುಖ ಮಾಡಿರುವ ‘ಕೆವಿಎನ್’ ಸಂಸ್ಥೆಯು ಚಿರಂಜೀವಿ ಅವರ 158ನೇ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

ಆಗಸ್ಟ್ 22ರಂದು ‘ಮೆಗಾ ಸ್ಟಾರ್’ ಚಿರಂಜೀವಿ ಅವರು 70ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ‘ಕೆವಿಎನ್ ಪ್ರೊಡಕ್ಷನ್ಸ್’ ಜೊತೆಗಿನ ಹೊಸ ಪ್ರಾಜೆಕ್ಟ್ ಅನೌನ್ಸ್ ಮಾಡಲಾಗಿದೆ. ಈ ಮೊದಲು ‘ವಾಲ್ತೇರು ವೀರಯ್ಯ’ ಸಿನಿಮಾವನ್ನು ಮಾಡಿದ್ದ ಬಾಬಿ ಕೊಲ್ಲಿ ಅವರು ಮತ್ತೊಮ್ಮೆ‌ ಚಿರಂಜೀವಿಗೆ ನಿರ್ದೇಶನ ಮಾಡಲಿದ್ದಾರೆ. ಈ ಪ್ರಾಜೆಕ್ಟ್​ ಬಗ್ಗೆ ಹೆಚ್ಚಿನ ಮಾಹಿತಿ ಹಂತ ಹಂತವಾಗಿ ಸಿಗಲಿದೆ.

ಇದನ್ನೂ ಓದಿ: ಕುಟುಂಬದೊಟ್ಟಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಚಿರಂಜೀವಿ: ವಿಡಿಯೋ

ಅಂದಹಾಗೆ ಚಿರಂಜೀವಿ, ಬಾಬಿ ಕೊಲ್ಲಿ, ಕೆವಿಎನ್ ಪ್ರೊಡಕ್ಷನ್ಸ್ ಕಾಂಬಿನೇಷನ್​​ನಲ್ಲಿ ಸಿದ್ಧವಾಗಲಿರುವ ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿಬರಲಿದೆ. ದಸರಾ ಹಬ್ಬದ ಸಮಯದಲ್ಲಿ ಈ ಸಿನಿಮಾವನ್ನು ಲಾಂಚ್ ಮಾಡಲು ನಿರ್ಮಾಪಕರು ಯೋಜನೆ ಹಾಕಿಕೊಂಡಿದ್ದಾರೆ. ಇದೇ ವರ್ಷದ ಕೊನೆಯಲ್ಲಿ ಚಿತ್ರೀಕರಣ ಶುರು ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us