AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ನಿಜಕ್ಕೂ ಒಂದು ಕ್ರಾಂತಿ’: ಟಿವಿಕೆ ವಿಜಯ್ ಗೆಲುವಿಗೆ ಕೆವಿಎನ್ ಪ್ರೊಡಕ್ಷನ್ಸ್ ಸಂತಸ

‘ಜನ ನಾಯಗನ್’ ಸಿನಿಮಾದ ನಿರ್ಮಾಪಕ ವೆಂಕಟ್ ಕೆ. ನಾರಾಯಣ ಅವರು ದಳಪತಿ ವಿಜಯ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ವಿಜಯ್ ಅವರ ಗೆಲುವನ್ನು ಒಂದು ನಿಜವಾದ ಕ್ರಾಂತಿ ಎಂದು ಅವರು ಬಣ್ಣಿಸಿದ್ದಾರೆ. ಆದಷ್ಟು ಬೇಗ ‘ಜನ ನಾಯಗನ್’ ಸಿನಿಮಾ ರಿಲೀಸ್ ಆಗಲಿ ಎಂದು ಫ್ಯಾನ್ಸ್ ಕಾದಿದ್ದಾರೆ.

‘ಇದು ನಿಜಕ್ಕೂ ಒಂದು ಕ್ರಾಂತಿ’: ಟಿವಿಕೆ ವಿಜಯ್ ಗೆಲುವಿಗೆ ಕೆವಿಎನ್ ಪ್ರೊಡಕ್ಷನ್ಸ್ ಸಂತಸ
Thalapathy Vijay, Venkat K. Narayana
ಮದನ್​ ಕುಮಾರ್​
|

Updated on: May 04, 2026 | 8:38 PM

Share

ನಟ ದಳಪತಿ ವಿಜಯ್ (Thalapathy Vijay) ಅವರು ಈಗ ಪೂರ್ಣಾವಧಿ ರಾಜಕಾರಣಿ. ಚುನಾವಣೆಯ ಅಖಾಡಕ್ಕೆ ಇಳಿದ ಅವರಿಗೆ ಚೊಚ್ಚಲ ಪ್ರಯತ್ನದಲ್ಲೇ ಗೆಲುವು ಸಿಕ್ಕಿದೆ. ಅವರ ಈ ಗೆಲುವನ್ನು ಆಪ್ತರು ಸಂಭ್ರಮಿಸುತ್ತಿದ್ದಾರೆ. ಚುನಾವಣೆಗೂ ಮುನ್ನ ವಿಜಯ್ ಅವರ ಕೊನೇ ಸಿನಿಮಾ ‘ಜನ ನಾಯಗನ್’ (Jana Nayagan) ಬಿಡುಗಡೆಗೆ ಸಾಕಷ್ಟು ತೊಂದರೆ ಉಂಟಾಯಿತು. ಈಗ ಆ ಸಿನಿಮಾದ ನಿರ್ಮಾಣ ಸಂಸ್ಥೆಯಿಂದ ವಿಜಯ್ ಅವರಿಗೆ ಅಭಿನಂದನೆ ಸಲ್ಲಿಸಲಾಗಿದೆ. ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ಸಂಸ್ಥೆಯ ನಿರ್ಮಾಪಕ ವೆಂಕಟ್ ಕೆ. ನಾರಾಯಣ ಅವರು ಅಭಿನಂದನೆ ತಿಳಿಸಿದ್ದಾರೆ.

‘ನಮ್ಮ ಜನ ನಾಯಕನಿಗೆ ಹೃತ್ಪೂರ್ವಕ ಅಭಿನಂದನೆಗಳು’ ಎಂಬ ಕ್ಯಾಪ್ಷನ್​ನೊಂದಿಗೆ ಸಿನಿಮಾದ ಹೊಸ ಪೋಸ್ಟರ್ ಹಂಚಿಕೊಳ್ಳಲಾಗಿದೆ. ಅದರಲ್ಲಿ ದಳಪತಿ ವಿಜಯ್ ಅವರು ದೀವಟಿಗೆ ಹಿಡಿದಿರುವ ಚಿತ್ರ ಇದೆ. ‘ಪ್ರಜಾಪ್ರಭುತ್ವದ ದಾರಿದೀಪ ಹಿಡಿದವರು’ ಎಂದು ಬರೆಯಲಾಗಿದೆ. ಈ ಮೂಲಕ ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯು ದಳಪತಿ ವಿಜಯ್ ಅವರಿಗೆ ಶುಭ ಹಾರೈಸಿದೆ.

‘ಎಲ್ಲಾ ಅಡೆತಡೆಗಳನ್ನು ಮೀರಿ ಇಂದು ಹೊಸ ಇತಿಹಾಸ ಬರೆದಿರುವ ದಳಪತಿ ವಿಜಯ್ ಸರ್ ಅವರಿಗೆ ಅಭಿನಂದನೆಗಳು. ಇದು ನಿಜಕ್ಕೂ ಒಂದು ಕ್ರಾಂತಿ ಮತ್ತು ಮುಂದಿನ ಹಲವು ತಲೆಮಾರುಗಳವರೆಗೆ ಇದು ಪ್ರತಿಧ್ವನಿಸಲಿದೆ’ ಎಂದು ನಿರ್ಮಾಪಕ ವೆಂಕಟ್ ಕೆ. ನಾರಾಯಣ ಅವರ ಪರವಾಗಿ ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಜನ ನಾಯಗನ್’ ಸಿನಿಮಾ ಹಲವು ತಿಂಗಳ ಹಿಂದೆಯೇ ಬಿಡುಗಡೆ ಆಗಬೇಕಿತ್ತು. ಆದರೆ ಅನೇಕ ಕಾರಣಗಳಿಂದ ಈ ಚಿತ್ರಕ್ಕೆ ಅಡ್ಡಿ ಉಂಟುಮಾಡಲಾಯಿತು. ಅದರ ಹಿಂದೆ ರಾಜಕೀಯದ ಹುನ್ನಾರ ಇದೆ ಎಂಬುದು ಹಲವರ ಆರೋಪ. ಚಿತ್ರಕ್ಕೆ ಸೆನ್ಸಾರ್ ಪ್ರಮಾಣ ಪತ್ರ ಸಿಗದ ಕಾರಣದಿಂದ ಸಿನಿಮಾ ಬಿಡುಗಡೆ ಆಗಲಿಲ್ಲ.

ಇದನ್ನೂ ಓದಿ: ನೀವು ಇತಿಹಾಸ ಸೃಷ್ಟಿ ಮಾಡಿದ್ರಿ: ಟಿವಿಕೆ ಗೆಲುವಿನ ಬಳಿಕ ವಿಜಯ್​ಗೆ ಸೆಲೆಬ್ರಿಟಿಗಳ ಅಭಿನಂದನೆ

ಈ ಪ್ರಕರಣ ಸುಪ್ರೀಂ ಕೋರ್ಟ್ ತನಕ ಹೋಯಿತು. ತಮ್ಮ ಚುನಾವಣಾ ಭಾಷಣದಲ್ಲಿ ದಳಪತಿ ವಿಜಯ್ ಅವರು ಆ ಬಗ್ಗೆ ಮಾತನಾಡಿದ್ದರು. ಸಿನಿಮಾ ತಡೆ ಹಿಡಿದಿರುವುದಕ್ಕೆ ತಮಗೆ ನ್ಯಾಯ ಬೇಕು ಎಂದು ಅವರು ಹೇಳಿದ್ದರು. ಚುನಾವಣೆಗೂ ಮುನ್ನ ‘ಜನ ನಾಯಗನ್’ ಸಿನಿಮಾವನ್ನು ಲೀಕ್ ಕೂಡ ಮಾಡಲಾಯಿತು. ಈ ಎಲ್ಲ ಅಡೆತಡೆಗಳನ್ನು ದಾಟಿಕೊಂಡು ವಿಜಯ್ ಅವರು ಜಯ ಸಾಧಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ