Laal Salaam Movie: ಮೊಹಿದ್ದೀನ್ ಭಾಯ್ ಆಗಿ ಬಂದ ರಜನಿಕಾಂತ್; ‘ಲಾಲ್ ಸಲಾಮ್’ ಚಿತ್ರದಲ್ಲಿ ಹೊಸ ಗೆಟಪ್

|

Updated on: May 08, 2023 | 8:41 AM

ರಜನಿಕಾಂತ್ ಅವರು ‘ಲಾಲ್ ಸಲಾಮ್’ ಸಿನಿಮಾದಲ್ಲಿ ಮೊಹಿದ್ದೀನ್ ಭಾಯ್ ಪಾತ್ರ ಮಾಡುತ್ತಿದ್ದಾರೆ. ಅವರ ಲುಕ್ ಗಮನ ಸೆಳೆದಿದೆ. ರಜನಿಕಾಂತ್ ಅವರು ತಲೆಗೆ ಟೋಪಿ ಧರಿಸಿದ್ದಾರೆ.

Laal Salaam Movie: ಮೊಹಿದ್ದೀನ್ ಭಾಯ್ ಆಗಿ ಬಂದ ರಜನಿಕಾಂತ್; ‘ಲಾಲ್ ಸಲಾಮ್’ ಚಿತ್ರದಲ್ಲಿ ಹೊಸ ಗೆಟಪ್
ರಜನಿಕಾಂತ್
Follow us on

ನಟ ರಜನಿಕಾಂತ್​ಗೆ (Rajinikanth) ಈಗ ವಯಸ್ಸು 72. ಆದಾಗ್ಯೂ ಅವರು ಸಿನಿಮಾ ಕೃಷಿಯನ್ನು ನಿಲ್ಲಿಸಿಲ್ಲ. ಈಗಲೂ ಅವರು ಹಲವು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಪ್ರತಿ ಚಿತ್ರದಲ್ಲೂ ಹೊಸಹೊಸ ಪಾತ್ರ ಮಾಡುತ್ತಿದ್ದಾರೆ. ಅವರ ಎನರ್ಜಿ ಕಡಿಮೆ ಆಗುವಂಥದ್ದಲ್ಲ. ಈಗ ರಜನಿಕಾಂತ್ ಅವರು ‘ಲಾಲ್ ಸಲಾಮ್’ ಸಿನಿಮಾದಲ್ಲಿ (Laal Salaam Movie) ನಟಿಸುತ್ತಿದ್ದಾರೆ. ಅವರ ಮಗಳು ಐಶ್ವರ್ಯಾ ರಜನಿಕಾಂತ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಒಂದು ಮುಖ್ಯ ಅತಿಥಿ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಈಗ ಸಿನಿಮಾದ ಫಸ್ಟ್ ಪೋಸ್ಟರ್ ರಿಲೀಸ್ ಆಗಿದೆ.

ರಜನಿಕಾಂತ್ ಅವರು ‘ಲಾಲ್ ಸಲಾಮ್’ ಸಿನಿಮಾದಲ್ಲಿ ಮೊಹಿದ್ದೀನ್ ಭಾಯ್ ಪಾತ್ರ ಮಾಡುತ್ತಿದ್ದಾರೆ. ಅವರ ಲುಕ್ ಗಮನ ಸೆಳೆದಿದೆ. ರಜನಿಕಾಂತ್ ಅವರು ತಲೆಗೆ ಟೋಪಿ ಧರಿಸಿದ್ದಾರೆ. ಹಿಂಭಾಗದಲ್ಲಿ ಜನರು ಧಂಗೆ ಎದ್ದಿರುವ ಫೋಟೋ ಇದೆ. ತಳ್ಳುವ ಗಾಡಿಗಳಿಗೆ ಬೆಂಕಿ ಇಡಲಾಗಿದೆ. ಅಷ್ಟೇ ಅಲ್ಲ ಪತ್ರಿಕೆ ಒಂದನ್ನು ತೋರಿಸಲಾಗಿದ್ದು, ‘ಮುಂಬೈ ನಿಯಂತ್ರಣದಲ್ಲಿದೆ’ ಎಂದು ಬರೆಯಲಾಗಿದೆ. ಜೊತೆಗೆ ‘ಮೊಹಿದ್ದೀನ್​ ಬಂದಾಗಿದೆ’ ಎನ್ನುವ ಕ್ಯಾಪ್ಶನ್ ಇದೆ.

‘ಲಾಲ್ ಸಲಾಮ್’ ಸಿನಿಮಾದಲ್ಲಿ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಅವರು ಮುಖ್ಯಭೂಮಿಕೆಯಲ್ಲಿದ್ದಾರೆ. ಆಸ್ಕರ್ ವಿಜೇತ ಎಆರ್​ ರೆಹಮಾನ್ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ವಿಷ್ಣು ರಂಗಸ್ವಾಮಿ ಅವರ ಛಾಯಾಗ್ರಹಣ ಇದೆ. ಈ ವರ್ಷದ ಕೊನೆಯಲ್ಲಿ ಸಿನಿಮಾ ರಿಲೀಸ್ ಆಗಲಿದೆ.

ಇದನ್ನೂ ಓದಿ: ಐಶ್ವರ್ಯಾ ರಜನಿಕಾಂತ್​ ಮನೆಯಲ್ಲಿ ಕಳ್ಳತನ ಮಾಡಿದ ಆರೋಪದಲ್ಲಿ ಇಬ್ಬರ ಬಂಧನ

ರಜನಿಕಾಂತ್ ಹಿರಿ ಮಗಳು ಐಶ್ವರ್ಯಾ ಅವರು ‘ಲಾಲ್ ಸಲಾಮ್’ ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಅವರು ಅನೇಕ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು. ಮಗಳಿಗೋಸ್ಕರ ಅವರು ಈ ಸಿನಿಮಾ ಒಪ್ಪಿಕೊಂಡಿದ್ದಾರೆ. ಇನ್ನು ರಜನಿಕಾಂತ್ ಹಾಗೂ ಲೈಕಾ ಪ್ರೊಡಕ್ಷನ್ ಜೊತೆ ಒಳ್ಳೆಯ ನಂಟಿದೆ. ಅವರ ಕೆಲವು ಸಿನಿಮಾಗಳಿಗೆ ಈ ನಿರ್ಮಾಣ ಸಂಸ್ಥೆ ಬಂಡವಾಳ ಹೂಡಿತ್ತು. ಈಗ ಅವರು ಮತ್ತೊಮ್ಮೆ ಲೈಕಾ ಜೊತೆ ಕೈ ಜೋಡಿಸಿದ್ದಾರೆ. ಈ ಸಿನಿಮಾದಲ್ಲಿ ರಜನಿಕಾಂತ್ ಪಾತ್ರ ಹೇಗಿರಲಿದೆ ಎನ್ನುವ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:22 am, Mon, 8 May 23