AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆವಳಿಕೊಂಡು 10 ಕೋಟಿ ರೂಪಾಯಿ ಕ್ಲಬ್ ಸೇರಿದ ರಜನಿ ನಟನೆಯ ‘ಲಾಲ್ ಸಲಾಂ’ ಸಿನಿಮಾ

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಸಂಕ್ರಾಂತಿ ಸಂದರ್ಭದಲ್ಲೇ ‘ಲಾಲ್ ಸಲಾಂ’ ರಿಲೀಸ್ ಆಗಬೇಕಿತ್ತು. ಸಾಲು ಸಾಲು ಸಿನಿಮಾಗಳ ಜೊತೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ಫೆಬ್ರವರಿ 9ಕ್ಕೆ ಸಿನಿಮಾನ ರಿಲೀಸ್ ಮಾಡಲಾಯಿತು. ಮೊದಲ ಮೂರು ದಿನ ತಲಾ 3 ಕೋಟಿ ರೂಪಾಯಿಯನ್ನು ಚಿತ್ರ ಗಳಿಕೆ ಮಾಡಿತ್ತು.

ತೆವಳಿಕೊಂಡು 10 ಕೋಟಿ ರೂಪಾಯಿ ಕ್ಲಬ್ ಸೇರಿದ ರಜನಿ ನಟನೆಯ ‘ಲಾಲ್ ಸಲಾಂ’ ಸಿನಿಮಾ
ರಜಿನಿಕಾಂತ್
ರಾಜೇಶ್ ದುಗ್ಗುಮನೆ
|

Updated on: Feb 13, 2024 | 12:20 PM

Share

ರಜನಿಕಾಂತ್ (Rajinikanth) ನಟನೆಯ ‘ಲಾಲ್ ಸಲಾಂ’ ಸಿಮಿಮಾ ಫೆಬ್ರವರಿ 9ರಂದು ರಿಲೀಸ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಮಂದಗತಿಯಲ್ಲಿ ಗಳಿಕೆ ಮಾಡುತ್ತಿದೆ. ಐಶ್ವರ್ಯಾ ರಜನಿಕಾಂತ್ ನಿರ್ದೇಶನದ ಈ ಚಿತ್ರಕ್ಕೆ ಲೈಕಾ ಪ್ರೊಡಕ್ಷನ್ ಬಂಡವಾಳ ಹೂಡಿದೆ. ಸೋಮವಾರ (ಫೆಬ್ರವರಿ 12) ಈ ಚಿತ್ರ ಕೇವಲ 1.13 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ನಾಲ್ಕು ದಿನಕ್ಕೆ ಚಿತ್ರ 11 ಕೋಟಿ ರೂಪಾಯಿ ಗಳಿಕೆ ಮಾಡಿದಂತೆ ಆಗಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಸಿನಿಮಾ ನಷ್ಟ ಅನುಭವಿಸಲಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ‘ಲಾಲ್ ಸಲಾಂ’ ಸಿನಿಮಾ ಸಂಕ್ರಾಂತಿ ಸಂದರ್ಭದಲ್ಲೇ ರಿಲೀಸ್ ಆಗಬೇಕಿತ್ತು. ಆದರೆ, ಸಾಲು ಸಾಲು ಸಿನಿಮಾಗಳ ಜೊತೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ಫೆಬ್ರವರಿ 9ಕ್ಕೆ ಸಿನಿಮಾನ ಮುಂದೂಡಲಾಗಿತ್ತು. ಮೊದಲ ಮೂರು ದಿನ ತಲಾ 3 ಕೋಟಿ ರೂಪಾಯಿಯನ್ನು ಚಿತ್ರ ಗಳಿಕೆ ಮಾಡಿತ್ತು. ಸೋಮವಾರ ಮತ್ತಷ್ಟು ಇಳಿಕೆ ಕಾಣುವ ಮೂಲಕ ಸಿನಿಮಾ ಸೋಮವಾರದ ಪರೀಕ್ಷೆಯಲ್ಲಿ ಫೇಲ್ ಆಗಿದೆ. ಚಿತ್ರದ ಒಟ್ಟಾರೆ ಗಳಿಕೆ 11 ಕೋಟಿ ರೂಪಾಯಿ ಆಗಿದೆ. ವಿದೇಶದಲ್ಲಿ ಈ ಚಿತ್ರ 3 ಕೋಟಿ ರೂಪಾಯಿ ಗಳಿಕೆ ಮಾಡಲಷ್ಟೇ ಸಾಧ್ಯವಾಗಿದೆ.

ಮುರ್ದಾಬಾದ್ ಎಂಬ ಗ್ರಾಮದ ಕಥೆಯನ್ನು ಹೇಳಲಾಗಿದೆ. ಹಿಂದೂಗಳು ಹಾಗೂ ಮುಸ್ಲಿಮರು ಒಟ್ಟಾಗಿ ಸಹಬಾಳ್ವೆ ನಡೆಸುತ್ತಾ ಇರುತ್ತಾರೆ. ರಾಜಕಾರಣಿಗಳು ಮಾಡುವ ಕುತಂತ್ರದಿಂದ ಇಬ್ಬರ ಮಧ್ಯೆ ಕಿತ್ತಾಟ ಆರಂಭ ಆಗುತ್ತದೆ. ಈ ರೀತಿಯಲ್ಲಿ ಕಥೆ ಮೂಡಿ ಬಂದಿದೆ. ರಜನಿಕಾಂತ್ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಮೊಯಿದ್ದೀನ್ ಭಾಯ್ ಪಾತ್ರ ಮಾಡಿದ್ದಾರೆ. ವಿಷ್ಣು ವಿಶಾಲ್ ಕೂಡ ಚಿತ್ರದಲ್ಲಿದ್ದಾರೆ. ಖ್ಯಾತ ಕ್ರಿಕೆಟರ್ ಕಪಿಲ್ ದೇವ್ ಅತಿಥಿ ಪಾತ್ರ ಮಾಡಿದ್ದಾರೆ.

ಇದನ್ನೂ ಓದಿ: ಮೂರು ದಿನಕ್ಕೆ 10 ಕೋಟಿ ರೂ. ಗಳಿಸಿಲ್ಲ ‘ಲಾಲ್ ಸಲಾಂ’; ಸಂಕಷ್ಟದಲ್ಲಿ ರಜನಿಕಾಂತ್ ಸಿನಿಮಾ

ರಜನಿಕಾಂತ್ ಹೀರೋ ಆಗಿ ಕಾಣಿಸಿಕೊಂಡ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಿದ ಉದಾಹರಣೆ ಇದೆ. ಆದರೆ, ‘ಲಾಲ್ ಸಲಾಂ’ ಚಿತ್ರದಲ್ಲಿ ರಜನಿಯದ್ದು ಅತಿಥಿ ಪಾತ್ರ ಎಂಬ ಕಾರಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಿನಿಮಾ ವೀಕ್ಷಣೆ ಮಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿಯ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ
ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿಯ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ
ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ
ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ