AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vishal: ವಿಶಾಲ್​ ಮನೆ ಮೇಲೆ ಕಲ್ಲು ತೂರಾಟ; ಸಿಸಿಟಿವಿ ವಿಡಿಯೋ ನೋಡಿ ಅಭಿಮಾನಿಗಳಲ್ಲಿ ಆತಂಕ

Vishal House Attack: ಕಲ್ಲು ತೂರಾಟದ ಕೃತ್ಯವನ್ನು ವಿಶಾಲ್ ಅಭಿಮಾನಿಗಳು ಖಂಡಿಸಿದ್ದಾರೆ. ಅಪರಾಧಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಸೋಶಿಯಲ್​ ಮೀಡಿಯಾದಲ್ಲಿ ಒತ್ತಾಯ ಹೇರಲಾಗುತ್ತಿದೆ.

Vishal: ವಿಶಾಲ್​ ಮನೆ ಮೇಲೆ ಕಲ್ಲು ತೂರಾಟ; ಸಿಸಿಟಿವಿ ವಿಡಿಯೋ ನೋಡಿ ಅಭಿಮಾನಿಗಳಲ್ಲಿ ಆತಂಕ
ವಿಶಾಲ್
TV9 Web
| Edited By: |

Updated on: Sep 28, 2022 | 1:05 PM

Share

ನಟ ವಿಶಾಲ್​ (Vishal) ಅವರ ಅಭಿಮಾನಿಗಳಿಗೆ ಚಿಂತೆ ಶುರುವಾಗಿದೆ. ಕಾಲಿವುಡ್​ನ (Kollywood) ಈ ಸ್ಟಾರ್ ಕಲಾವಿದನನ್ನು ಯಾರೋ ಟಾರ್ಗೆಟ್​ ಮಾಡಿದ್ದಾರೆ. ವಿಶಾಲ್​ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ. ಈ ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಿಡಿಗೇಡಿಗಳು ಕಲ್ಲು ತೂರಿದ್ದರಿಂದ ವಿಶಾಲ್​ ಮನೆಯ (Vishal House) ಕಿಟಕಿ ಗಾಜು ಒಡೆದುಹೋಗಿದೆ. ಚೆನ್ನೈನ ಅಣ್ಣಾ ನಗರ್​ ಪ್ರದೇಶದಲ್ಲಿ ವಿಶಾಲ್​ ಅವರ ನಿವಾಸ ಇದೆ. ಇಲ್ಲಿಗೆ ಸೋಮವಾರ (ಸೆ.26) ರಾತ್ರಿ ಕೆಂಪು ಬಣ್ಣದ ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಕಲ್ಲು ಎಸೆದಿದ್ದಾರೆ. ಈ ವೇಳೆ ವಿಶಾಲ್​ ಅವರು ಮನೆಯಲ್ಲಿ ಇರಲಿಲ್ಲ. ಅಲ್ಲದೆ, ಮನೆಯ ಯಾರಿಗೂ ಗಾಯ ಆಗಿಲ್ಲ ಎಂಬುದು ಸಮಾಧಾನದ ಸಂಗತಿ. ಘಟನೆಗೆ ಸಂಬಂಧಿಸಿದಂತೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ದುಷ್ಕರ್ಮಿಗಳು ಕಲ್ಲು ಎಸೆದಿದ್ದರಿಂದ ಮನೆಯ ಕಿಟಕಿ ಗಾಜು ಒಡೆದು ಹೋಗಿದ್ದು, ಅದರ ಫೋಟೋ ಕೂಡ ವೈರಲ್​ ಆಗಿದೆ. ವಿಶಾಲ್​ ಮ್ಯಾನೇಜರ್​ ಹರಿಕೃಷ್ಣ ಅವರು ಅಣ್ಣಾ ನಗರ್​ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಸಂಬಂಧ ತನಿಖೆ ಆಗಬೇಕಿದೆ. ಕಲ್ಲು ತೂರಾಟದ ಕೃತ್ಯವನ್ನು ಅಭಿಮಾನಿಗಳು ಖಂಡಿಸಿದ್ದಾರೆ. ಅಪರಾಧಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಸೋಶಿಯಲ್​ ಮೀಡಿಯಾದಲ್ಲಿ ಒತ್ತಾಯ ಹೇರಲಾಗುತ್ತಿದೆ.

ತಮಿಳು ಚಿತ್ರರಂಗದಲ್ಲಿ ವಿಶಾಲ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಬ್ಯಾಕ್ ಟು ಬ್ಯಾಕ್​ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಅವರು ತಮ್ಮ ಪಾಡಿಗೆ ತಾವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿರುವಾಗ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿದ್ದು ಯಾಕೆ ಎಂಬ ಪ್ರಶ್ನೆ ಮೂಡಿದೆ. ಆ ಅಪರಿಚಿತ ವ್ಯಕ್ತಿಗಳು ವಿಶಾಲ್​ ಮೇಲೆ ಈ ಪರಿ ದ್ವೇಷ ಸಾಧಿಸಲು ಕಾರಣವಾದರೂ ಏನು ಎಂಬುದು ತನಿಖೆ ಬಳಿಕ ಗೊತ್ತಾಗಬೇಕಿದೆ.

ಇದನ್ನೂ ಓದಿ
Image
ಶಕ್ತಿಧಾಮದ ಮಕ್ಕಳಲ್ಲಿ ದೇವರನ್ನು ಕಂಡ ತಮಿಳು ನಟ ವಿಶಾಲ್
Image
ಅಪ್ಪು ಕನಸು ಈಡೇರಿಸಲು ಶಕ್ತಿಧಾಮಕ್ಕೆ ಭೇಟಿ ನೀಡಿದ ತಮಿಳು ನಟ ವಿಶಾಲ್
Image
Vishal: ವೃದ್ಧಾಶ್ರಮಗಳಲ್ಲಿ ಅನ್ನದಾನ ನಡೆಸಿ ಪುನೀತ್​ಗೆ ಅರ್ಥಪೂರ್ಣ ನಮನ ಸಲ್ಲಿಸಿದ ವಿಶಾಲ್
Image
ಫೈಟಿಂಗ್​ ದೃಶ್ಯದ ಶೂಟಿಂಗ್​ ವೇಳೆ ವಿಶಾಲ್​ಗೆ ಗಾಯ; ಘಟನೆ ಬಗ್ಗೆ ವಿಡಿಯೋ ಸಮೇತ ವಿವರಿಸಿದ​ ನಟ

ವಿಶಾಲ್​ ನಟನೆಯ ‘ಲಾಠಿ’ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಸಿನಿಮಾದಲ್ಲಿ ಅವರು ಪೊಲೀಸ್​ ಪಾತ್ರ ಮಾಡುತ್ತಿದ್ದಾರೆ. ಇದಲ್ಲದೇ ‘ಮಾರ್ಕ್​ ಆಂಟೋನಿ’ ಸಿನಿಮಾದಲ್ಲೂ ವಿಶಾಲ್​ ನಟಿಸುತ್ತಿದ್ದಾರೆ. ಅವರು ನಿರ್ದೇಶನ ಮಾಡಲಿರುವ ‘ತುಪ್ಪರಿವಾಲನ್​ 2’ ಚಿತ್ರ ಇನ್ನಷ್ಟೇ ಸೆಟ್ಟೇರಬೇಕಿದೆ. ಸದ್ಯ ಒಪ್ಪಿಕೊಂಡಿರುವ ಬೇರೆಲ್ಲ ಸಿನಿಮಾಗಳ ಕೆಲಸಗಳನ್ನು ಮುಗಿಸಿದ ಬಳಿಕ ‘ತುಪ್ಪರಿವಾಲನ್​ 2’ ನಿರ್ದೇಶನದ ಕಡೆಗೆ ವಿಶಾಲ್​ ಗಮನ ಹರಿಸಲಿದ್ದಾರೆ.

ಕರ್ನಾಟಕದಲ್ಲೂ ವಿಶಾಲ್ ಅವರಿಗೆ ಅಭಿಮಾನಿಗಳು ಇದ್ದಾರೆ. ಕಳೆದ ವರ್ಷ ಪುನೀತ್​ ರಾಜ್​ಕುಮಾರ್​ ನಿಧನದ ಬಳಿಕ ವಿಶಾಲ್​ ಬೆಂಗಳೂರಿಗೆ ಬಂದಿದ್ದರು. ಶಕ್ತಿಧಾಮದ ಮಕ್ಕಳ ಜವಾಬ್ದಾರಿ ಹೊತ್ತುಕೊಳ್ಳಲು ತಾವು ಸಿದ್ಧ ಎಂದು ಅವರು ಹೇಳಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ