‘ಧುರಂಧರ್ 2’ ಬ್ಯಾನ್ ಮಾಡಿ, ವಕೀಲನಿಂದ ಹೈಕೋರ್ಟ್ಗೆ ಅರ್ಜಿ
Dhurandhar 2 movie: ಮಲ್ಟಿಪ್ಲೆಕ್ಸ್ಗಳಲ್ಲಿ ಬೆಳಿಗಿನಿಂದ ಮಧ್ಯ ರಾತ್ರಿ ವರೆಗೆ ಸತತವಾಗಿ ಶೋಗಳನ್ನು ಪ್ರದರ್ಶನ ಮಾಡಲಾಗುತ್ತಿದೆ. ಕೆಲವರು ಸಿನಿಮಾ ಬಗ್ಗೆ ಅಸಮಾಧಾನ ಸಹ ವ್ಯಕ್ತಪಡಿಸಿದ್ದಾರೆ. ಆದರೆ ಇದೀಗ ಚೆನ್ನೈನ ವಕೀಲರೊಬ್ಬರು, ಸಿನಿಮಾ ವಿರುದ್ಧ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದು, ಸಿನಿಮಾದ ಮೇಲೆ ನಿಷೇಧ ಹೇರಬೇಕು ಎಂದು ಒತ್ತಾಯಿಸಿದ್ದಾರೆ.

ರಣ್ವೀರ್ ಸಿಂಗ್ (Ranveer Singh) ನಟಿಸಿ, ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ್ 2’ ಸಿನಿಮಾ ಬಿಡುಗಡೆ ಆಗಿ ಕೆಲ ದಿನಗಳಾಗಿದ್ದು, ಎಲ್ಲೆಡೆ ಸಿನಿಮಾಕ್ಕೆ ಭರ್ಜರಿ ರೆಸ್ಪಾನ್ಸ್ ಧಕ್ಕುತ್ತಿದೆ. ಕೆಲವೇ ದಿನಗಳಲ್ಲಿ ಸಿನಿಮಾ 500 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಮಲ್ಟಿಪ್ಲೆಕ್ಸ್ಗಳಲ್ಲಿ ಬೆಳಿಗಿನಿಂದ ಮಧ್ಯ ರಾತ್ರಿ ವರೆಗೆ ಸತತವಾಗಿ ಶೋಗಳನ್ನು ಪ್ರದರ್ಶನ ಮಾಡಲಾಗುತ್ತಿದೆ. ಕೆಲವರು ಸಿನಿಮಾ ಬಗ್ಗೆ ಅಸಮಾಧಾನ ಸಹ ವ್ಯಕ್ತಪಡಿಸಿದ್ದಾರೆ. ಆದರೆ ಇದೀಗ ಚೆನ್ನೈನ ವಕೀಲರೊಬ್ಬರು, ಸಿನಿಮಾ ವಿರುದ್ಧ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದು, ಸಿನಿಮಾದ ಮೇಲೆ ನಿಷೇಧ ಹೇರಬೇಕು ಎಂದು ಒತ್ತಾಯಿಸಿದ್ದಾರೆ.
ವಕೀಲರೊಬ್ಬರು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸುಶ್ರುತ್ ಅರವಿಂದ್ ಧರ್ಮಾಧಿಕಾರಿ ಮತ್ತು ನ್ಯಾಯಮೂರ್ತಿ ಜಿ ಅರುಳ್ ಮುರುಗನ್ ಅವರನ್ನೊಳಗೊಂಡ ಪೀಠದ ಮುಂದೆ ಈ ಅರ್ಜಿ ಸಲ್ಲಿಸಿ, ವಾದ ಮಂಡಿಸಿದ್ದು. ‘ಧುರಂಧರ್ 2’ ಸಿನಿಮಾವು ರಾಜಕೀಯ ವಿಷಯಗಳನ್ನು ಒಳಗೊಂಡಿದ್ದು, ಚುನಾವಣಾ ಸಮಯದಲ್ಲಿ ಇದು ಮತದಾರರ ಮೇಲೆ ಪ್ರಭಾವ ಬೀರಬಹುದು ಎಂದು ಅರ್ಜಿದಾರರು ವಾದಿಸಿದ್ದಾರೆ.
ತಮಿಳುನಾಡಿನಲ್ಲಿ ಚುನಾವಣೆ ಘೋಷಣೆ ಆಗಿದ್ದು ಏಪ್ರಿಲ್ 23 ರಂದು ಮತದಾನ ನಡೆಯಲಿದೆ. ಪ್ರಸ್ತುತ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಇಂತಹ ಸಂದರ್ಭದಲ್ಲಿ ರಾಜಕೀಯ ಪ್ರೇರಿತ ಅಥವಾ ವಿವಾದಾತ್ಮಕ ವಿಷಯಗಳಿರುವ ಚಿತ್ರಗಳ ಬಿಡುಗಡೆಯು ನೀತಿ ಸಂಹಿತೆಯ ಉಲ್ಲಂಘನೆಯಾಗಬಹುದು ಎಂಬುದು ಅರ್ಜಿದಾರ ವಾದವಾಗಿದೆ. ಅರ್ಜಿದಾರರ ಮೌಖಿಕ ಮನವಿಯನ್ನು ಆಲಿಸಿದ ನ್ಯಾಯಪೀಠವು, ಈ ವಿಷಯದ ಕುರಿತು ಅಧಿಕೃತ ರಿಟ್ ಅರ್ಜಿಯನ್ನು ಸಲ್ಲಿಸುವಂತೆ ಸೂಚಿಸಿದೆ. ಅರ್ಜಿ ಸಲ್ಲಿಕೆಯಾದ ನಂತರವಷ್ಟೇ ಇದರ ತುರ್ತು ವಿಚಾರಣೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.
ಇದನ್ನೂ ಓದಿ:ಮತ್ತೆ ಬಂತು ಬೆದರಿಕೆ: ರಣ್ವೀರ್ ಸಿಂಗ್-ದೀಪಿಕಾಗೆ ಭದ್ರತೆ ಹೆಚ್ಚಳ
ಚುನಾವಣಾ ಸಮಯದಲ್ಲಿ ರಾಜಕೀಯ ಸಂವೇದನಾಶೀಲ ವಿಷಯಗಳಿರುವ ಚಲನಚಿತ್ರಗಳು ಹೆಚ್ಚಾಗಿ ಕಾನೂನು ಹೋರಾಟಗಳನ್ನು ಎದುರಿಸುತ್ತವೆ. ಮದ್ರಾಸ್ ಹೈಕೋರ್ಟ್ ಈ ಅರ್ಜಿಯನ್ನು ಅಧಿಕೃತವಾಗಿ ಸ್ವೀಕರಿಸಿದ ನಂತರ ಚಿತ್ರದ ಭವಿಷ್ಯ ನಿರ್ಧರವಾಗಲಿದೆ. ಇದೇ ರೀತಿಯ ವಿವಾದವು ನಟ ವಿಜಯ್ ಅವರ ‘ಜನನಾಯಕನ್’ ಚಿತ್ರಕ್ಕೂ ಎದುರಾಗಿದೆ. ಸೆನ್ಸಾರ್ ಮಂಡಳಿಯು ಈ ಚಿತ್ರದ ಪ್ರಮಾಣಪತ್ರವನ್ನು ತಡೆಹಿಡಿದಿದ್ದು, ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಪರಿಶೀಲನೆಗಾಗಿ ಭಾರತೀಯ ಚುನಾವಣಾ ಆಯೋಗಕ್ಕೆ ಕಳುಹಿಸಿದೆ.
ಆದಿತ್ಯ ಧರ್ ನಿರ್ದೇಶನದ ಈ ಚಿತ್ರವು ಕರಾಚಿಯ ಲಿಯಾರಿ ಎಂಬ ಭೂಗತ ಜಗತ್ತಿನ ಹಿನ್ನೆಲೆಯಲ್ಲಿ ನಡೆಯುವ ಕಥೆಯಾಗಿದೆ. ಸಿನಿಮಾನಲ್ಲಿ ರಣವೀರ್ ಸಿಂಗ್, ಮಾಧವನ್ ಮತ್ತು ಸಂಜಯ್ ದತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಭಾರತದ ಸೈನಿಕನೊಬ್ಬ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಉಗ್ರರನ್ನು ಸೆದೆ ಬಡಿಯುವ ಕತೆಯನ್ನು ಒಳಗೊಂಡಿದೆ. ‘ಧುರಂಧರ್ 2’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಾಣುತ್ತಿದ್ದು, ಬಿಡುಗಡೆಯಾದ ಮೊದಲ ನಾಲ್ಕು ದಿನಗಳಲ್ಲೇ ವಿಶ್ವದಾದ್ಯ ಸುಮಾರು 750 ಕೋಟಿಗೂ ಹೆಚ್ಚು ಮೊತ್ತ ಗಳಿಸಿದೆ ಎನ್ನಲಾಗುತ್ತಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




