‘ವಿನೋದ್​ಗೆ ನಾನು ಯಾವಾಗ್ಲೂ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಮೊದಲ ಪ್ರತಿಕ್ರಿಯೆ

Updated on: Dec 08, 2023 | 7:40 PM

86ನೇ ವಯಸ್ಸಿನಲ್ಲಿ ಲೀಲಾವತಿ ಅವರು ನಿಧನರಾಗಿದ್ದಾರೆ. ತಾಯಿಯನ್ನು ಕಳೆದುಕೊಂಡು ವಿನೋದ್​ ರಾಜ್​ ಕಣ್ಣೀರು ಹಾಕುತ್ತಿದ್ದಾರೆ. ಲೀಲಾವತಿ ನಿಧನಕ್ಕೆ ನಟ ಶಿವರಾಜ್​ಕುಮಾರ್​ ಅವರು ಸಂತಾಪ ಸೂಚಿಸಿದ್ದಾರೆ. ಆಸ್ಪತ್ರೆಯ ಬಳಿ ಬಂದ ಶಿವಣ್ಣ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಹಿರಿಯ ನಟಿ ಲೀಲಾವತಿ (​Leelavathi) ಅವರ ನಿಧನಕ್ಕೆ ಚಿತ್ರರಂಗದ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ನಟ ಶಿವರಾಜ್​ಕುಮಾರ್​ (​Shivarajkumar) ಅವರು ಕೂಡ ಸಂತಾಪ ಸೂಚಿಸಿದ್ದಾರೆ. ಲೀಲಾವತಿ ಇನ್ನಿಲ್ಲ ಎಂಬ ವಿಷಯ ತಿಳಿದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಶಿವಣ್ಣ ಅವರು, ‘ಮನಸ್ಸಿಗೆ ಬಹಳ ಬೇಸರ ಆಗಿದೆ. ಅವರ ಅಗಲಿಕೆ ನಮ್ಮ ಚಿತ್ರರಂಗಕ್ಕೆ ದೊಡ್ಡ ನಷ್ಟ. ನಾವೆಲ್ಲರೂ ಜೊತೆಯಲ್ಲಿ ಇದ್ದೇವೆ ಅಂತ ವಿನೋದ್​ಗೆ ನಾನು ಯಾವಾಗಲೂ ಹೇಳ್ತಾ ಇದ್ದೆ. ತಾಯಿಯನ್ನು ಅವರು ತುಂಬ ಹಚ್ಚಿಕೊಂಡಿದ್ದರು. ಅವರಿಬ್ಬರ ನಡುವಿನ ಬಾಂಧವ್ಯ ಬೇರೆ ರೀತಿಯಿತ್ತು. ವಿನೋದ್​ ಈಗ ಧೈರ್ಯ ತಂದುಕೊಳ್ಳಬೇಕು. ಅವರ ಜೊತೆ ನಾನು ಈಗಾಗಲೇ ಮಾತನಾಡಿದ್ದೇನೆ. ಲೀಲಾವತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ವಿನೋದ್​ ಅವರನ್ನು ಮತ್ತೆ ಭೇಟಿ ಮಾಡುತ್ತೇನೆ’ ಎಂದು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published on: Dec 08, 2023 07:36 PM
Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More