AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Singeetam Srinivasa Rao Death: ಕನ್ನಡದ ಸೂಪರ್​​ ಹಿಟ್​​​​ ಸಿನಿಮಾಗಳಿಗೆ ಆ್ಯಕ್ಷನ್​​ ಕಟ್​​ ಹೇಳಿದ್ದ ಖ್ಯಾತ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ

ಖ್ಯಾತ ಚಲನಚಿತ್ರ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ (95) ವಯೋಸಹಜ ಕಾಯಿಲೆಯಿಂದ ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಡಾ.ರಾಜ್‌ಕುಮಾರ್ ಸೇರಿದಂತೆ ಹಲವು ದೈತ್ಯ ನಟರ ಸೂಪರ್ ಹಿಟ್ ಸಿನಿಮಾಗಳಿಗೆ ಇವರು ಆ್ಯಕ್ಷನ್ ಕಟ್ ಹೇಳಿದ್ದರು. 2 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ, 3 ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ, ನಂದಿ ಪ್ರಶಸ್ತಿ ಮತ್ತು ಫಿಲ್ಮ್​ಫೇರ್ ಪ್ರಶಸ್ತಿಗೆ ಭಾಜನರಾಗಿದ್ದ ಇವರು, ಪ್ರಯೋಗತ್ಮಕ ಸಿನಿಮಾಗಳನ್ನ ಮಾಡಿ ಸೈ ಅನಿಸಿಕೊಂಡಿದ್ದ ನಿರ್ದೇಶಕರಾಗಿದ್ದರು.

Singeetam Srinivasa Rao Death: ಕನ್ನಡದ ಸೂಪರ್​​ ಹಿಟ್​​​​ ಸಿನಿಮಾಗಳಿಗೆ ಆ್ಯಕ್ಷನ್​​ ಕಟ್​​ ಹೇಳಿದ್ದ ಖ್ಯಾತ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ
ಸಿಂಗೀತಂ ಶ್ರೀನಿವಾಸ ರಾವ್
ಮಂಗಳ ರಾಜಗೋಪಾಲ್​
| Edited By: |

Updated on:Oct 04, 2026 | 7:03 AM

Share

ಬೆಂಗಳೂರು, ಅಕ್ಟೋಬರ್​ 04: ವಯೋಸಹಜ ಕಾಯಿಲೆಯಿಂದ ಬಳಲ್ತಿದ್ದ ಖ್ಯಾತ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್(95) ನಿಧನ ಹೊಂದಿದ್ದಾರೆ. ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ರಾತ್ರಿ 10.30ಕ್ಕೆ ಅವರು ಕೊನೆಯುಸಿರೆಳೆದಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂ ಸೇರಿ ಹಿಂದಿ ಭಾಷೆಯಲ್ಲಿಯೂ ಅವರು ಸಿನಿಮಾ ನಿರ್ದೇಶಿಸಿದ್ದರು. 60ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶಿಸಿದ್ದ ಸಿಂಗೀತಂ ಶ್ರೀನಿವಾಸ ರಾವ್, 2 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ, 3 ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ನಂದಿ ಪ್ರಶಸ್ತಿ ಮತ್ತು ಫಿಲ್ಮ್​ಫೇರ್ ಪ್ರಶಸ್ತಿಗೆ ಭಾಜನರಾಗಿದ್ದರು.

1931ರ ಸೆಪ್ಟೆಂಬರ್ 21ರಂದು ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಉದಯಗಿರಿಯಲ್ಲಿ ಜನಿಸಿದ್ದ ಇವರು, ಪ್ರಯೋಗತ್ಮಕ ಸಿನಿಮಾಗಳನ್ನ ಮಾಡಿ ಸೈ ಅನಿಸಿಕೊಂಡಿದ್ದ ನಿರ್ದೇಶಕರಾಗಿದ್ದರು. ಆನಂದ್ ಸಿನಿಮಾ ಮೂಲಕ ಶಿವರಾಜ್​ಕುಮಾರ್​ರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದೇ ಇವರಾಗಿದ್ದು, ತಮ್ಮ 95ನೇ ವಯಸಿನಲ್ಲೂ ಗೀತo ಸಿನಿಮಾ ನಿರ್ದೇಶನ ಮಾಡಿ ಗಮನ ಸೆಳೆದಿದ್ದರು. ಮೂಖಿ, ಪುಷ್ಕಕ ವಿಮಾನಮ್, ಶಿವಣ್ಣ ಅಭಿನಯದ ಆನಂದ್, ಆದಿತ್ಯ 369, ಬೈರವ ದ್ವೀಪಮ್ ಸೇರಿದಂತೆ ಹಲವು ಇವರ ನಿರ್ದೇಶನದ ಪ್ರಮುಖ ಸಿನಿಮಾಗಳಾಗಿವೆ.

ಇದನ್ನೂ ಓದಿ: ‘ಇಡ್ಲಿ-ಮಸಿ’ ಎಂದರೇನು? ಸ್ಪಷ್ಟನೆ ಕೊಟ್ಟು ಬಚಾವಾದರೇ ಲಿಖಿತ್?

ಡಾ.ರಾಜ್​ಕುಮಾರ್ ಅವರ ಹಲವು ಸಿನಿಮಾ ನಿರ್ದೇಶಿಸಿದ್ದ ರಾವ್

ಸಿಂಗೀತಂ ಶ್ರೀನಿವಾಸ ರಾವ್ ಅವರು ಡಾ.ರಾಜ್​ಕುಮಾರ್ ಅವರ ಹಲವು ಸಿನಿಮಾಗಳಿಗೂ ಆ್ಯಕ್ಷನ್​​ ಕಟ್​​ ಹೇಳಿದ್ದರು. ಚಲಿಸುವ ಮೋಡಗಳು, ಹಾಲು ಜೇನು, ಭಾಗ್ಯದ ಲಕ್ಷ್ಮೀ ಬಾರಮ್ಮ, 2 ನಕ್ಷತ್ರಗಳು, ಶ್ರಾವಣ ಬಂತು, ಶ್ರುತಿ ಸೇರಿದಾಗ ಚಲನಚಿತ್ರಗಳನ್ನು ನಿರ್ದೇಶಿಸಿದ್ದರು. ರಾಘವೇಂದ್ರ ರಾಜ್​ಕುಮಾರ್​​ ಅವರ ‘ಚಿರಂಜೀವಿ ಸುಧಾಕರ್’ ಸೇರಿ ಜಗ್ಗೇಶ್​​ ಅಭಿನಯದ ‘ಮೇಕಪ್’ ಸಿನಿಮಾಗೂ ಕೂಡ ಇವರದ್ದೇ ನಿರ್ದೇಶನವಾಗಿತ್ತು.1988ರಲ್ಲಿ ಸಂಭಾಷಣೆ ರಹಿತ ಪುಷ್ಪಕ ವಿಮಾನ ಸಿನಿಮಾ ನಿರ್ದೇಶಿಸಿಯೂ ಸಿನಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:28 am, Sun, 4 October 26

Follow Us
ಮಂಗಳ ರಾಜಗೋಪಾಲ್​
ಮಂಗಳ ರಾಜಗೋಪಾಲ್​

ಮಂಗಳ ರಾಜಗೋಪಾಲ್​

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ