AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಿಯೋ’ ತಂಡಕ್ಕೆ ಮತ್ತೊಂದು ಆಘಾತ; ತಂಡದವರ ಕಾರಿಗೆ ಅಪಘಾತ  

Leo Movie: ‘ಲಿಯೋ’ ಚಿತ್ರದಲ್ಲಿ ದಳಪತಿ ವಿಜಯ್ ಹಾಗೂ ತ್ರಿಷಾ ಮೊದಲಾದವರು ನಟಿಸಿದ್ದಾರೆ. ಲೋಕೇಶ್ ಕನಗರಾಜ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ‘ಲೋಕೇಶ್ ಕನಗರಾಜ್ ಯೂನಿವರ್ಸ್’ ಅಡಿಯಲ್ಲಿ ಸಿನಿಮಾ ಸಿದ್ಧಗೊಂಡಿದೆ ಎನ್ನಲಾಗುತ್ತಿದೆ.

‘ಲಿಯೋ’ ತಂಡಕ್ಕೆ ಮತ್ತೊಂದು ಆಘಾತ; ತಂಡದವರ ಕಾರಿಗೆ ಅಪಘಾತ   
ಕಾರು ಅಪಘಾತಕ್ಕೆ ಒಳಗಾದ ಲಿಯೋ ತಂಡ
ರಾಜೇಶ್ ದುಗ್ಗುಮನೆ
|

Updated on:Oct 18, 2023 | 7:17 AM

Share

ದಳಪತಿ ವಿಜಯ್ (Thalapathy Vijay) ನಟನೆಯ ‘ಲಿಯೋ’ ತಂಡಕ್ಕೆ ಒಂದಾದ ಬಳಿಕ ಒಂದರಂತೆ ಹಿನ್ನಡೆ ಆಗುತ್ತಲೇ ಇದೆ. ಈ ಮೊದಲು ಮುಂಜಾನೆ ನಾಲ್ಕು ಗಂಟೆ ಶೋಗೆ ಅವಕಾಶ ನೀಡಲು ಸರ್ಕಾರ ನಿರಾಕರಿಸಿತ್ತು. ಈ ವಿಚಾರದಲ್ಲಿ ಸಿನಿಮಾ ತಂಡ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿಯನ್ನು ಕೋರ್ಟ್ ರಿಜೆಕ್ಟ್ ಮಾಡಿತ್ತು. ಈ ಕಾರಣಕ್ಕೆ ತಂಡ ಗೃಹಕಾರ್ಯದರ್ಶಿಯನ್ನು ಭೇಟಿ ಮಾಡಿದೆ. ಆ ಬಳಿಕ ಮರಳಿ ಬರುವಾಗ ಇವರ ಕಾರು ಅಪಘಾತಕ್ಕೆ ಒಳಗಾಗಿದೆ. ‘ಲಿಯೋ (Leo Movie) ತಂಡಕ್ಕೆ ಏನಾಗುತ್ತಿದೆ’ ಎಂದು ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ.

‘ಲಿಯೋ’ ಚಿತ್ರದಲ್ಲಿ ದಳಪತಿ ವಿಜಯ್ ಹಾಗೂ ತ್ರಿಷಾ ಮೊದಲಾದವರು ನಟಿಸಿದ್ದಾರೆ. ಲೋಕೇಶ್ ಕನಗರಾಜ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ‘ಲೋಕೇಶ್ ಕನಗರಾಜ್ ಯೂನಿವರ್ಸ್’ ಅಡಿಯಲ್ಲಿ ಸಿನಿಮಾ ಸಿದ್ಧಗೊಂಡಿದೆ ಎನ್ನಲಾಗುತ್ತಿದೆ. ಈ ಕಾರಣದಿಂದಲೇ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.  ಈ ಕಾರಣಕ್ಕೆ ತಮಿಳಿನಾಡಿನಾದ್ಯಂತ ಮುಂಜಾನೆ ನಾಲ್ಕು ಗಂಟೆಗೆ ಫ್ಯಾನ್ ಶೋ ಇಡಲು ತಂಡ ನಿರ್ಧರಿಸಿತ್ತು. ಆದರೆ, ಸರ್ಕಾರ ಇದಕ್ಕೆ ಅವಕಾಶ ನೀಡಿಲ್ಲ.

ಕೋರ್ಟ್ ಕೂಡ ಅವಕಾಶ ನೀಡಲು ನಿರಾಕರಿಸಿದ ಬಳಿಕ ‘ಲಿಯೋ’ ಸಿನಿಮಾದ ವಕೀಲರ ತಂಡ ಗೃಹ ಕಾರ್ಯದರ್ಶಿಯನ್ನು ಭೇಟಿ ಮಾಡಿತ್ತು. ಅಲ್ಲಿ ಮಾತುಕತೆ ನಡೆಸಿ ಮರಳಿ ಬರುವಾಗ ಕಾರು ದ್ವಿಚಕ್ರ ವಾಹನಕ್ಕೆ ಗುದ್ದಿದೆ. ಬೈಕ್ ಕಾರಿನ ಅಡಿಯಲ್ಲಿ ಬಿದ್ದಿದೆ. ಈ ಬಗ್ಗೆ ಟ್ರೇಡ್ ಅನಲಿಸ್ಟ್ ಮನೋಬಲ ವಿಜಯಬಾಲನ್ ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ‘4 ಗಂಟೆ ಶೋಗೆ ಅವಕಾಶ ನೀಡಿ’; ಕೋರ್ಟ್ ಮೆಟ್ಟಿಲೇರಿದ ‘ಲಿಯೋ’ ತಂಡ  

‘ಲಿಯೋ’ ಸಿನಿಮಾದ ಆಡಿಯೋ ಲಾಂಚ್​ನ ದೊಡ್ಡ ಮಟ್ಟದಲ್ಲಿ ಮಾಡುವ ಪ್ಲಾನ್​ನಲ್ಲಿ ತಂಡ ಇತ್ತು. ಆದರೆ, ಇದಕ್ಕೆ ಅವಕಾಶ ಸಿಗಲಿಲ್ಲ. ಆ ಬಳಿಕ ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೂ ಇದೇ ರೀತಿ ಆಯಿತು. ಈಗ ಸಿನಿಮಾ ವಿಚಾರದಲ್ಲಿ ಕಿರಿಕ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:05 am, Wed, 18 October 23

ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?