AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್​ ಕಲ್ಯಾಣ್​ ಹತ್ಯೆಗೆ ಸ್ಕೆಚ್​: ಗುಪ್ತಚರ ಇಲಾಖೆಯಿಂದ ಎಚ್ಚರಿಕೆ ಸಂದೇಶ?

ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಪವನ್​ ಕಲ್ಯಾಣ್​ ಅವರಿಗೆ ಎಚ್ಚರದಿಂದ ಇರುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಯಾಕೆಂದರೆ, ಕೆಲವು ಅನುಮಾನಾಸ್ಪದ ಸಂದೇಶಗಳು ಹರಿದಾಡಿರುವುದು ಪತ್ತೆ ಆಗಿದೆ. ಪವನ್​ ಕಲ್ಯಾಣ್​ ಅವರ ಪ್ರಾಣಕ್ಕೆ ಅಪಾಯ ಇದೆ ಎಂಬುದು ತಿಳಿದುಬಂದಿದೆ. ಅವರಿಗೆ ಭದ್ರತೆ ಹೆಚ್ಚಿಸುವ ಪ್ರಯತ್ನ ನಡೆದಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ..

ಪವನ್​ ಕಲ್ಯಾಣ್​ ಹತ್ಯೆಗೆ ಸ್ಕೆಚ್​: ಗುಪ್ತಚರ ಇಲಾಖೆಯಿಂದ ಎಚ್ಚರಿಕೆ ಸಂದೇಶ?
ಪವನ್​ ಕಲ್ಯಾಣ್
ಮದನ್​ ಕುಮಾರ್​
|

Updated on: Jul 22, 2024 | 10:41 PM

Share

ಟಾಲಿವುಡ್​ ನಟ ಪವನ್​ ಕಲ್ಯಾಣ್​​ ಈಗ ಪೂರ್ಣಾವಧಿ ರಾಜಕೀಯದಲ್ಲಿ ಬ್ಯುಸಿ ಆಗಿದ್ದಾರೆ. ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಆಗಿರುವ ಅವರು ಹತ್ತಾರು ಕಡೆಗಳಿಗೆ ಭೇಟಿ ನೀಡುತ್ತಿದ್ದಾರೆ. ಸಾರ್ವಜನಿಕವಾಗಿ ಸುತ್ತಾಡುವಾಗ ಅವರು ಎಚ್ಚರಿಕೆಯಿಂದ ಇರಬೇಕಾದ ಅನಿವಾರ್ಯತೆ ಎದುರಾಗಿದೆ. ಶಾಕಿಂಗ್​ ಸಂಗತಿ ಏನೆಂದರೆ, ಅವರ ಪ್ರಾಣಕ್ಕೆ ಅಪಾಯ ಇದೆ ಎಂಬ ಮಾಹಿತಿ ಹರಿದಾಡುತ್ತಿದೆ. ಕೇಂದ್ರ ಗುಪ್ತಚರ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಪವನ್​ ಕಲ್ಯಾಣ್​ ಅವರಿಗೆ ಮಾಹಿತಿ ರವಾನಿಸಿದ್ದಾರೆ ಎನ್ನಲಾಗಿದೆ. ಈ ಸುದ್ದಿ ಕೇಳಿ ಪವನ್ ಕಲ್ಯಾಣ್​ ಅವರ ಅಭಿಮಾನಿಗಳಿಗೆ ಆತಂಕ ಆಗಿದೆ.

ಜನಸೇನಾ ಪಕ್ಷದ ಮೂಲಕ ಪವನ್​ ಕಲ್ಯಾಣ್​ ಅವರಿಗೆ ಈ ವರ್ಷ ದೊಡ್ಡ ಗೆಲುವು ಸಿಕ್ಕಿತು. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಜನಸೇನಾ ಪಕ್ಷ ಜಯಭೇರಿ ಬಾರಿಸಿತು. ಸಿನಿಮಾರಂಗದಲ್ಲೂ ಪವನ್​ ಕಲ್ಯಾಣ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇದೆಲ್ಲದರ ನಡುವೆ ಅವರ ಹತ್ಯೆಗೆ ಕೆಲವರು ಸ್ಕೆಚ್​ ಹಾಕುತ್ತಿದ್ದಾರೆ ಎಂಬುದು ಆತಂಕಕಾರಿ ವಿಷಯ. ಈ ಬಗ್ಗೆ ಪವನ್​ ಕಲ್ಯಾಣ್​ ಅವರು ಗಮನ ಹರಿಸುವ ಅಗತ್ಯ ಇದೆ.

ಪದವಿ ಪಡೆದ ಪವನ್ ಕಲ್ಯಾಣ್ ಪತ್ನಿ, ಎಷ್ಟು ಓದಿದ್ದಾರೆ ಗೊತ್ತೆ?

ಕಿಡಿಗೇಡಿಗಳು ಪವನ್​ ಕಲ್ಯಾಣ್​ ಅವರ ಹತ್ಯೆಗೆ ಸಂಚು ರೂಪಿಸುತ್ತಿರುವ ಕಾರಣದಿಂದ ಪೊಲೀಸರು ಭದ್ರತೆ ಹೆಚ್ಚಿಸಬೇಕು ಎಂದು ಗುಪ್ತಚರ ಇಲಾಖೆಯ ಅಧಿಕಾರಿಗಳು ಸಂದೇಶ ನೀಡಿದ್ದಾರೆ ಎನ್ನಲಾಗಿದೆ. ಈ ಮಾಹಿತಿಯನ್ನು ಜನಸೇನಾ ಪಕ್ಷದ ಮೂಲಗಳು ಖಚಿತಪಡಿಸಿವೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ. ಅಷ್ಟಕ್ಕೂ ಪವನ್​ ಕಲ್ಯಾಣ್​ ಅವರನ್ನು ಮುಗಿಸಲು ಯತ್ನಿಸುತ್ತಿರುವವರು ಯಾರು ಎಂಬುದು ಸದ್ಯಕ್ಕೆ ಬಹಿರಂಗ ಆಗಿಲ್ಲ.

ತಮ್ಮ ಪ್ರಾಣಕ್ಕೆ ಅಪಾಯ ಇರುವ ಬಗ್ಗೆ ಈ ಮೊದಲು ಸ್ವತಃ ಪವನ್​ ಕಲ್ಯಾಣ್​ ಅವರು ಹೇಳಿದ್ದರು. ಈಗ ಗುಪ್ತಚರ ಇಲಾಖೆಗೂ ಈ ಬಗ್ಗೆ ಮಾಹಿತಿ ಸಿಕ್ಕಿರುವುದರಿಂದ ಪವನ್​ ಕಲ್ಯಾಣ್​ ಅವರಿಗೆ ಝಡ್​ ಪ್ಲಸ್​ ಸೆಕ್ಯೂರಿಟಿ ನೀಡಬೇಕು ಎಂದು ಜನಸೇನಾ ಪಕ್ಷದವರು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಪವನ್​ ಕಲ್ಯಾನ್ ಅವರ ಏಳಿಗೆಯನ್ನು ಸಹಿಸದವರು ಈ ರೀತಿ ಸಂಚು ರೂಪಿಸಿರಬಹುದು. ಈ ಎಲ್ಲ ವರದಿಗಳಿಂದಾಗಿ ಪವನ್​ ಕಲ್ಯಾಣ್ ಅವರ ಅಭಿಮಾನಿಗಳಿಗೆ ಆತಂಕ ಹೆಚ್ಚಾಗಿದೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಪವನ್ ಕಲ್ಯಾಣ್​ ಅವರು ಹೆಚ್ಚು ಎಚ್ಚರಿಕೆ ವಹಿಸಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More