
ವಿಜಯ್ ದೇವರಕೊಂಡ (Vijay Devarakonda) ನಟನೆಯ ‘ಲೈಗರ್’ ಸಿನಿಮಾ (Liger Movie) ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈ ಸಿನಿಮಾಗೆ ಪುರಿ ಜಗನ್ನಾಥ್ ( Puri Jagannadh) ಅವರು ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಚಿತ್ರದ ಪೋಸ್ಟರ್ ಹಾಗೂ ಹಾಡು ಸಾಕಷ್ಟು ನಿರೀಕ್ಷೆ ಸೃಷ್ಟಿ ಮಾಡಿದೆ. ಈಗ ಸಿನಿಮಾ ಎರಡು ಹೊಸ ಅಪ್ಡೇಟ್ ಸಿಕ್ಕಿದೆ. ಚಿತ್ರದ ಹೊಸ ಹಾಡು ರಿಲೀಸ್ ಆಗುತ್ತಿರುವ ದಿನಾಂಕದ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ಸಿನಿಮಾ ರಿಲೀಸ್ಗೂ ಮುನ್ನ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತದೆ. ಸಿನಿಮಾಗೆ ಪ್ರಚಾರ ಸಿಗಬೇಕು ಎಂದರೆ ಹಾಡುಗಳ ಪಾತ್ರ ತುಂಬಾನೇ ಮುಖ್ಯವಾಗಿರುತ್ತದೆ. ಈಗ ಹಾಡಿನ ಮೂಲಕ ‘ಲೈಗರ್’ ಸಿನಿಮಾ ಗಮನ ಸೆಳೆಯಲು ಮುಂದಾಗಿದೆ. ಈ ಚಿತ್ರದ ‘ಅಕ್ಡಿ ಪಕ್ಡಿ..’ ಹಾಡು ಜುಲೈ 11ರಂದು ರಿಲೀಸ್ ಆಗುತ್ತಿದೆ. ಈ ಹಾಡಿನ ಟೀಸರ್ ಜುಲೈ 8ಕ್ಕೆ ಬಿಡುಗಡೆ ಆಗಲಿದೆ.
‘ಲೈಗರ್’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಹಿಂದಿ, ತೆಲುಗು, ಕನ್ನಡ, ತಮಿಳು ಹಾಗೂ ಮಲಯಾಳಂನಲ್ಲಿ ಸಿನಿಮಾ ತೆರೆಗೆ ಬರುತ್ತಿದೆ. ‘ಅಕ್ಡಿ ಪಕ್ಡಿ..’ ಹಾಡು ಕನ್ನಡದಲ್ಲೂ ಬಿಡುಗಡೆ ಆಗುತ್ತಿದೆ. ಕನ್ನಡ ವರ್ಷನ್ಗೆ ಸಂತೋಷ್ ವೆಂಕಿ ಮತ್ತು ಸಂಗೀತಾ ರವಿಚಂದ್ರನಾಥ್ ಅವರು ಧ್ವನಿಯಾಗಿದ್ದಾರೆ. ಈ ಹಾಡಿಗಾಗಿ ಫ್ಯಾನ್ಸ್ ಕಾದಿದ್ದಾರೆ.
ವಿಜಯ್ ದೇವರಕೊಂಡ ಅವರು ಇತ್ತೀಚೆಗೆ ಬೋಲ್ಡ್ ಪೋಸ್ಟರ್ ಮೂಲಕ ಗಮನ ಸೆಳೆದಿದ್ದರು. ಅವರು ಅರೆಬೆತ್ತಲೆ ಪೋಸ್ಟರ್ ಹಂಚಿಕೊಂಡಿದ್ದರು. ಈ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿತ್ತು.
ಕರಣ್ ಜೋಹರ್, ಪುರಿ ಜಗನ್ನಾಥ್, ಚಾರ್ಮಿ ಕೌರ್ ಹಾಗೂ ಅಪೂರ್ವ ಮೆಹ್ತಾ ಅವರು ‘ಲೈಗರ್’ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ವಿಜಯ್ ದೇವರಕೊಂಡ ಅವರಿಗೆ ಜೋಡಿಯಾಗಿ ಅನನ್ಯಾ ಪಾಂಡೆ ಕಾಣಿಸಿಕೊಳ್ಳಲಿದ್ದಾರೆ. ಬಾಕ್ಸಿಂಗ್ ಲೋಕದಲ್ಲಿ ದೊಡ್ಡ ಹೆಸರು ಮಾಡಿದ ಮೈಕ್ ಟೈಸನ್ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಆಗಸ್ಟ್ 25ರಂದು ‘ಲೈಗರ್’ ಸಿನಿಮಾ ಬಿಡುಗಡೆ ಆಗಲಿದೆ. ಜುಲೈ 10ರಂದು ಈ ಚಿತ್ರದ ಟ್ರೇಲರ್ ರಿಲೀಸ್ ಆಗಲಿದೆ. ಶೀಘ್ರದಲ್ಲೇ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಲಾಗುವುದು. ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳಿನಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ. ಪ್ಯಾನ್ ಇಂಡಿಯಾ ಹೀರೋ ಆಗಿ ಸದ್ದು ಮಾಡಲು ವಿಜಯ್ ದೇವರಕೊಂಡ ಸಜ್ಜಾಗಿದ್ದಾರೆ. ಸದ್ಯ ಈ ಚಿತ್ರಕ್ಕೆ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ.
ಇದನ್ನೂ ಓದಿ:Mike Tyson: ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್ ಜನ್ಮದಿನಕ್ಕೆ ವಿಶೇಷ ವಿಡಿಯೋ ಮೂಲಕ ವಿಶ್ ಮಾಡಿದ ‘ಲೈಗರ್’ ತಂಡ
ಧೂಳೆಬ್ಬಿಸಿದ ವಿಜಯ್ ದೇವರಕೊಂಡ ಹೊಸ ಅವತಾರ; ಇಲ್ಲಿದೆ ‘ಲೈಗರ್’ ಚಿತ್ರದ ಪೋಸ್ಟರ್