AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟನೆಯಲ್ಲಿ ಸಕ್ಸಸ್ ಕಂಡರೂ ಬೇಸರದಲ್ಲಿ ನಿರ್ದೇಶಕ ಲೋಕೇಶ್ ಕನಗರಾಜ್: ಯಾಕೆ ಗೊತ್ತಾ?

ನಟನಾಗಿ ಮೊದಲ ಸಿನಿಮಾದಲ್ಲಿ ಯಶಸ್ಸು ಕಂಡರೂ ನಿರ್ದೇಶಕ ಲೋಕೇಶ್ ಕನಗರಾಜ್ ಬೇಸರಗೊಂಡಿದ್ದಾರೆ. ತೆಲುಗು ರಾಜ್ಯಗಳಲ್ಲಿ 'ಡಿ ಸಿ' ಸಿನಿಮಾ ಬಾಕ್ಸ್ ಆಫೀಸ್ ಧೂಳೆಬ್ಬಿಸುತ್ತಿದ್ದರೂ, ತಮಿಳುನಾಡಿನಲ್ಲಿ ನಿರೀಕ್ಷಿತ ಮಟ್ಟದ ಅಭೂತಪೂರ್ವ ಪ್ರತಿಕ್ರಿಯೆ ಸಿಗದಿರುವುದು ಅವರ ನಿರಾಸೆಗೆ ಕಾರಣವಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ನಟನೆಯಲ್ಲಿ ಸಕ್ಸಸ್ ಕಂಡರೂ ಬೇಸರದಲ್ಲಿ ನಿರ್ದೇಶಕ ಲೋಕೇಶ್ ಕನಗರಾಜ್: ಯಾಕೆ ಗೊತ್ತಾ?
ಲೋಕೇಶ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 15, 2026 | 11:20 AM

Share

ಮುಖ್ಯಾಂಶಗಳು

  • ನಟನಾಗಿ ಮೊದಲ ಸಿನಿಮಾದಲ್ಲೇ ಗೆದ್ದು ಬೀಗಿದ ಲೋಕೇಶ್ ಕನಗರಾಜ್
  • ತೆಲುಗಿನಲ್ಲಿ 'ಡಿ ಸಿ' ಧಮಾಕಾ; ತಮಿಳುನಾಡಿನ ಕಲೆಕ್ಷನ್ ಮೀರಿಸುವ ಮುನ್ಸೂಚನೆ
  • ಸಿನಿಮಾ ಹಿಟ್ ಆದರೂ ಲೋಕೇಶ್ ಕನಗರಾಜ್ ನಿರಾಸೆಗೆ ಅಸಲಿ ಕಾರಣವೇನು?

ಖ್ಯಾತ ನಿರ್ದೇಶಕ ಲೋಕೇಶ್ ಕನಗರಾಜ್ ತಮ್ಮ ನಟನೆಯ ಚೊಚ್ಚಲ ಸಿನಿಮಾ ‘ಡಿ ಸಿ’ (DC) ಯಶಸ್ಸಿನ ಅಲೆಯಲ್ಲಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ ಅನಿರೀಕ್ಷಿತ ಗೆಲುವು ಸಾಧಿಸುತ್ತಿದ್ದು, ಲೋಕೇಶ್ ಅವರ ನಟನೆಯನ್ನು ಪ್ರೇಕ್ಷಕರು ಹಾಗೂ ಚಿತ್ರರಂಗದ ಪ್ರಮುಖರು ಕೊಂಡಾಡುತ್ತಿದ್ದಾರೆ. ಈ ಮೊದಲು ನಿರ್ದೇಶಕರಾಗಿ ಮೆಚ್ಚುಗೆ ಪಡೆದಿದ್ದ ಅವರು, ಈಗ ನಟನೆಯಲ್ಲೂ ಭೇಷ್ ಎಂದಿದ್ದಾರೆ. ಆದರೂ ಸಿನಿಮಾ ಬಗ್ಗೆ ಅವರಿಗೆ ಬೇಸರ ಇದೆ.

‘ಡಿಸಿ’ ಸಿನಿಮಾಗೆ ತೆಲುಗು ರಾಜ್ಯಗಳಲ್ಲಿ ಈ ಸಿನಿಮಾಗೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಬಾಕ್ಸ್ ಆಫೀಸ್ ಕಲೆಕ್ಷನ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ತೆಲುಗು ಅವತರಣಿಕೆಯ ಕಲೆಕ್ಷನ್ ಶೀಘ್ರದಲ್ಲೇ ತಮಿಳುನಾಡಿನ ಗಳಿಕೆಯನ್ನೇ ಹಿಂದಿಕ್ಕುವ ಸಾಧ್ಯತೆಯಿದೆ ಎಂದು ಟ್ರೇಡ್ ಪಂಡಿತರು ವಿಶ್ಲೇಷಿಸಿದ್ದಾರೆ.

ಸಿನಿಮಾಗೆ ಸಿಗುತ್ತಿರುವ ಈ ದೊಡ್ಡ ಯಶಸ್ಸು ಲೋಕೇಶ್ ಅವರಿಗೆ ತೀವ್ರ ಸಂತಸ ತಂದಿದೆಯಾದರೂ, ಮತ್ತೊಂದೆಡೆ ಅವರಿಗೆ ಸಣ್ಣದೊಂದು ಬೇಸರವೂ ಇದೆ ಎನ್ನಲಾಗಿದೆ. ತಮ್ಮ ತೃಪ್ತಿಕರ ನಟನೆಯ ಹೊರತಾಗಿಯೂ ತಮಿಳುನಾಡಿನಲ್ಲಿ ಸಿನಿಮಾಗೆ ಇನ್ನಷ್ಟು ಭರ್ಜರಿ ಹಾಗೂ ಬೃಹತ್ ಮಟ್ಟದ ಪ್ರತಿಕ್ರಿಯೆ ಸಿಗಬಹುದು ಎಂದು ಅವರು ನಿರೀಕ್ಷಿಸಿದ್ದರು. ಆದರೆ ಅಲ್ಲಿ ಅಂದುಕೊಂಡ ಮಟ್ಟದ ರೆಸ್ಪಾನ್ಸ್ ಸಿಗದೇ ಇರುವುದು ಅವರಿಗೆ ಕೊಂಚ ನಿರಾಸೆ ತಂದಿದೆ ಎಂಬ ವರದಿಗಳು ಹರಿದಾಡುತ್ತಿವೆ.

ಇದನ್ನೂ ಓದಿ: ಹೀರೋ ಆಗಿ ಗೆದ್ದ ನಿರ್ದೇಶಕ ಲೋಕೇಶ್ ಕನಗರಾಜ್; ಮೊದಲ ದಿನ ಭರ್ಜರಿ ಗಳಿಕೆ

ಇನ್ನು ಈ ಚಿತ್ರದಲ್ಲಿ ನಟಿ ವಾಮಿಕಾ ಗಬ್ಬಿ ತಮ್ಮ ಅದ್ಭುತ ಅಭಿನಯದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದರೆ, ಅನಿರುದ್ಧ್ ರವಿಚಂದರ್ ಅವರ ಎನರ್ಜಿಟಿಕ್ ಸಂಗೀತ ಸಿನಿಮಾದ ಹೈಲೈಟ್‌ಗಳಲ್ಲಿ ಒಂದಾಗಿ ಮೂಡಿಬಂದಿದೆ. ಲೋಕೇಶ್ ಅವರು ಸದ್ಯ ನಿರ್ದೇಶನದಲ್ಲಿ ಬ್ಯುಸಿ ಆಗಲಿದ್ದಾರೆ. ಹಲವು ಸೂಪರ್ ಹಿಟ್ ಸಿನಿಮಾಗಳಿಗೆ ಅವರು ಸೀಕ್ವೆಲ್ ಮಾಡಬೇಕಿದೆ. ಆ ಬಗ್ಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ ಎಂದರೂ ತಪ್ಪಾಗಲಾರದು. ಈ ಬಗ್ಗೆ ಶೀಘ್ರವೇ ಅಪ್​ಡೇಟ್ ಸಿಗೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀವ್ರ ಕುಸಿತ
ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀವ್ರ ಕುಸಿತ
ವಿಶ್ವಸಂಸ್ಥೆಯಲ್ಲಿ ಹಫೀಜ್ ಸಯೀದ್ ಪ್ರಶ್ನೆಗೆ ಮುಖ ತಿರುಗಿಸಿದ ಪಾಕ್ ಪಿಎಂ
ವಿಶ್ವಸಂಸ್ಥೆಯಲ್ಲಿ ಹಫೀಜ್ ಸಯೀದ್ ಪ್ರಶ್ನೆಗೆ ಮುಖ ತಿರುಗಿಸಿದ ಪಾಕ್ ಪಿಎಂ
ಬಿಜೆಪಿ ನಾಯಕಿ ಮಾಧವಿ ಲತಾಗೆ ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ
ಬಿಜೆಪಿ ನಾಯಕಿ ಮಾಧವಿ ಲತಾಗೆ ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ
ಧಾರಾಕಾರ ಮಳೆಗೆ ನಡುಗಿದ ಸಿಕ್ಕಿಂ, ರಿಂಬಿ ಗ್ರಾಮದಲ್ಲಿ ಭೂಕುಸಿತ
ಧಾರಾಕಾರ ಮಳೆಗೆ ನಡುಗಿದ ಸಿಕ್ಕಿಂ, ರಿಂಬಿ ಗ್ರಾಮದಲ್ಲಿ ಭೂಕುಸಿತ
ಇಂದು ಅನಂತ ಪದ್ಮನಾಭ ವ್ರತ ಆಚರಣೆಯಿಂದ ಐಶ್ವರ್ಯ ಮತ್ತು ಯಶಸ್ಸು ಲಭ್ಯ
ಇಂದು ಅನಂತ ಪದ್ಮನಾಭ ವ್ರತ ಆಚರಣೆಯಿಂದ ಐಶ್ವರ್ಯ ಮತ್ತು ಯಶಸ್ಸು ಲಭ್ಯ
ಭಾರೀ ಭೂಕುಸಿತ, ತಡೆಗೋಡೆ ಕುಸಿತದಿಂದ ಒಡಿಶಾದ ಕಳಿಂಗ ಘಾಟ್ ರಸ್ತೆ ಬಂದ್
ಭಾರೀ ಭೂಕುಸಿತ, ತಡೆಗೋಡೆ ಕುಸಿತದಿಂದ ಒಡಿಶಾದ ಕಳಿಂಗ ಘಾಟ್ ರಸ್ತೆ ಬಂದ್
ಚಿತ್ರದುರ್ಗ ಎಸ್ಪಿ ವಿರುದ್ಧ ಶಾಸಕ ವೀರೇಂದ್ರ ಪಪ್ಪಿ ಕೆಂಡಾಮಂಡಲ
ಚಿತ್ರದುರ್ಗ ಎಸ್ಪಿ ವಿರುದ್ಧ ಶಾಸಕ ವೀರೇಂದ್ರ ಪಪ್ಪಿ ಕೆಂಡಾಮಂಡಲ
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್
ಬರದಿಂದ ನಲುಗಿದ ರೈತರಿಗೆ ಗುಡ್ ನ್ಯೂಸ್:ಬರ ಪರಿಹಾರ ಘೋಷಿಸಿದ ಸರ್ಕಾರ
ಬರದಿಂದ ನಲುಗಿದ ರೈತರಿಗೆ ಗುಡ್ ನ್ಯೂಸ್:ಬರ ಪರಿಹಾರ ಘೋಷಿಸಿದ ಸರ್ಕಾರ
ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ಗೆ ಟ್ರಂಪ್ ದಂಪತಿಯಿಂದ ಅದ್ದೂರಿ ಸ್ವಾಗತ
ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ಗೆ ಟ್ರಂಪ್ ದಂಪತಿಯಿಂದ ಅದ್ದೂರಿ ಸ್ವಾಗತ