‘ತಮನ್ನಾ ಮೇಲೆ ನನಗೆ ಹುಚ್ಚು ಪ್ರೀತಿ ಆಗಿದೆ’; ಪಬ್ಲಿಸಿಟಿ ಸ್ಟಂಟ್ಸ್​ ಎಂದವರಿಗೆ ವಿಜಯ್ ವರ್ಮಾ ಉತ್ತರ

ಈಗ ಸಂಪೂರ್ಣವಾಗಿ ಈ ವಿಚಾರವನ್ನು ತಮನ್ನಾ ಹಾಗೂ ವಿಜಯ್ ಒಪ್ಪಿಕೊಂಡಿದ್ದಾರೆ. ಇದು ಪಬ್ಲಿಸಿಟಿ ಸ್ಟಂಟ್ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.

‘ತಮನ್ನಾ ಮೇಲೆ ನನಗೆ ಹುಚ್ಚು ಪ್ರೀತಿ ಆಗಿದೆ’; ಪಬ್ಲಿಸಿಟಿ ಸ್ಟಂಟ್ಸ್​ ಎಂದವರಿಗೆ ವಿಜಯ್ ವರ್ಮಾ ಉತ್ತರ
ವಿಜಯ್ ವರ್ಮಾ-ತಮನ್ನಾ
Follow us
ರಾಜೇಶ್ ದುಗ್ಗುಮನೆ
|

Updated on: Jul 15, 2023 | 6:30 AM

ನಟಿ ತಮನ್ನಾ ಹಾಗೂ ವಿಜಯ್ ವರ್ಮಾ ಅವರು ‘ಲಸ್ಟ್ ಸ್ಟೋರೀಸ್ 2’ ಸಿನಿಮಾದಲ್ಲಿ (Lust Stories 2 Movie) ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಇವರ ಎಪಿಸೋಡ್ ಸಖತ್ ಬೋಲ್ಡ್ ಆಗಿರೋದು ಮಾತ್ರವಲ್ಲದೆ ಸಖತ್ ಸಸ್ಪೆನ್ಸ್ ಆಗಿದೆ. ಈ ಜೋಡಿ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಲವು ವಿಚಾರಗಳು ಹರಿದಾಡಿದ್ದವು. ಇದಕ್ಕೆಲ್ಲ ವಿಜಯ್ ವರ್ಮಾ ಅವರು ಉತ್ತರ ನೀಡಿದ್ದಾರೆ. ‘ನನಗೆ ತಮನ್ನಾ (Tamanna Bhatia) ಮೇಲೆ ಹುಚ್ಚು ಪ್ರೀತಿ ಆಗಿದೆ’ ಎಂದು ಹೇಳುವ ಮೂಲಕ ಎಲ್ಲ ಅಂತೆಕಂತೆಗಳಿಗೆ ಅವರು ಉತ್ತರ ನೀಡಿದ್ದಾರೆ.

ತಮನ್ನಾ ಹಾಗೂ ವಿಜಯ್ ವರ್ಮಾ ಅವರು ‘ಲಸ್ಟ್​ ಸ್ಟೋರಿಸ್ 2’ ಚಿತ್ರದಲ್ಲಿ ಮೊದಲ ಬಾರಿಗೆ ಒಟ್ಟಾಗಿ ನಟಿಸಿದ್ದರು. ಇವರ ಮಧ್ಯೆ ಪ್ರೀತಿ ಮೂಡಿದ್ದು ಇದೇ ಚಿತ್ರದ ಸೆಟ್​ನಲ್ಲಿ. ಆದರೆ, ಈ ವಿಷಯವನ್ನು ಇವರು ಗುಟ್ಟಾಗಿ ಇಟ್ಟಿದ್ದರು. ಸಿನಿಮಾ ರಿಲೀಸ್ ದಿನಾಂಕ ಹತ್ತಿರವಾದಂತೆ ಈ ವಿಚಾರವನ್ನು ಅವರು ಒಪ್ಪಿಕೊಳ್ಳೋಕೆ ಆರಂಭಿಸಿದರು. ಈಗ ಸಂಪೂರ್ಣವಾಗಿ ಈ ವಿಚಾರವನ್ನು ತಮನ್ನಾ ಹಾಗೂ ವಿಜಯ್ ಒಪ್ಪಿಕೊಂಡಿದ್ದಾರೆ. ಇದು ಪಬ್ಲಿಸಿಟಿ ಸ್ಟಂಟ್ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.

ಸಿನಿಮಾ ಪ್ರೇಕ್ಷಕರ ಗಮನ ಸೆಳೆಯಬೇಕು ಎಂಬ ಕಾರಣಕ್ಕೆ ಸಿನಿಮಾದಲ್ಲಿ ನಟಿಸಿದ ಅನೇಕರು ನಿಜ ಜೀವನದಲ್ಲೂ ಒಟ್ಟಾಗಿ ಸುತ್ತಾಡಿದ ಉದಾಹರಣೆ ಇದೆ. ಇದೆಲ್ಲವೂ ಸಿನಿಮಾ ರಿಲೀಸ್ ಆಗುವವರೆಗೆ ಮಾತ್ರ ಇರುತ್ತದೆ. ಆ ಬಳಿಕ ಸೈಲೆಂಟ್ ಆಗುತ್ತಾರೆ. ವಿಜಯ್ ವರ್ಮಾ ಹಾಗೂ ತಮನ್ನಾ ಕೂಡ ಇದೇ ಸಾಲಿಗೆ ಸೇರುತ್ತಾರೆ ಎಂದು ಅನೇಕರು ಮಾತನಾಡಿಕೊಂಡಿದ್ದಿದೆ. ಇದಕ್ಕೆ ವಿಜಯ್ ವರ್ಮಾ ಉತ್ತರ ನೀಡಿದ್ದಾರೆ.

‘ನಾವು ಡೇಟಿಂಗ್ ಮಾಡುತ್ತಿದ್ದೇವೆ ಎನ್ನುವ ವಿಚಾರ ಅಭಿಮಾನಿಗಳಿಗೆ ಸ್ಪಷ್ಟವಾಗಿದೆ. ನಾನು ಖುಷಿಯಾಗಿದ್ದೇನೆ. ನನಗೆ ತಮನ್ನಾ ಮೇಲೆ ಹುಚ್ಚು ಪ್ರೀತಿ ಆಗಿದೆ’ ಎಂದು ಅವರು ಹೇಳಿದ್ದಾರೆ. ಈ ಮೂಲಕ ಅವರು ಪ್ರೀತಿ ವಿಚಾರವನ್ನು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ:ಎಲ್ಲೆಲ್ಲೂ ‘ಕಾವಾಲಾ’ ಹಾಡಿನ ಗುಂಗು; ಏರ್​ಪೋರ್ಟ್​​ನಲ್ಲೂ ಡ್ಯಾನ್ಸ್​ ಮಾಡಿದ ತಮನ್ನಾ

ಈ ಮೊದಲು ತಮನ್ನಾ ಕೂಡ ವಿಜಯ್ ಬಗ್ಗೆ ಮಾತನಾಡಿದ್ದರು. ‘ಸಹನಟ ಎಂಬ ಕಾರಣಕ್ಕೆ ಅವರಿಂದ ನೀವು ಆಕರ್ಷಿತರಾಗುತ್ತೀರಿ ಎಂಬುದು ಸುಳ್ಳು. ನಾನು ಅನೇಕ ನಟರ ಜೊತೆ ಕೆಲಸ ಮಾಡಿದ್ದೇನೆ. ವಿಜಯ್ ನನ್ನ ಹ್ಯಾಪಿ ಪ್ಲೇಸ್’ ಎಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ