AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ ಚಿತ್ರಕ್ಕೆ ದೊಡ್ಡ ಜಯ; ಯುಎ ಪ್ರಮಾಣಪತ್ರ ನೀಡಲು ಕೋರ್ಟ್ ಆದೇಶ

ಸಿನಿಮಾಗೆ ಸೆನ್ಸಾರ್ ಪತ್ರ ನೀಡದ ಬಗ್ಗೆ ಕೆವಿಎನ್ ಸಂಸ್ಥೆ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿತ್ತು. ಸೆನ್ಸಾರ್ ಮಂಡಳಿ ಸೂಚಿಸಿದ ಬದಲಾವಣೆ ಮಾಡಿದರೂ ನಮಗೆ ಪ್ರಮಾಣಪತ್ರ ನೀಡಿಲ್ಲ ಎಂದು ನಿರ್ಮಾಣ ಸಂಸ್ಥೆ ಅಳಲು ತೋಡಿಕೊಂಡಿತ್ತು. ಸಿನಿಮಾಗೆ ದೊಡ್ಡ ಮೊತ್ತದ ಬಂಡವಾಳ ಹೂಡಿದ್ದಾಗಿಯೂ ಹೇಳಿಕೊಂಡಿತ್ತು. ಈಗ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಕೋರ್ಟ್ ಆದೇಶ ನೀಡಿದ್ದು, ‘ಯುಎ’ ಸೆನ್ಸಾರ್ ಪತ್ರ ನೀಡುವಂತೆ ಸೂಚಿಸಿದೆ.

‘ಜನ ನಾಯಗನ್’ ಚಿತ್ರಕ್ಕೆ ದೊಡ್ಡ ಜಯ; ಯುಎ ಪ್ರಮಾಣಪತ್ರ ನೀಡಲು ಕೋರ್ಟ್ ಆದೇಶ
ಜನ ನಾಯಗನ್
ರಾಜೇಶ್ ದುಗ್ಗುಮನೆ
|

Updated on:Jan 09, 2026 | 11:20 AM

Share

ಸಂಕಷ್ಟದಲ್ಲಿದ್ದ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಚಿತ್ರಕ್ಕೆ ದೊಡ್ಡ ಗೆಲುವು ಸಿಕ್ಕಿದೆ. ಈ ಸಿನಿಮಾಗೆ ತಕ್ಷಣವೇ ಸೆನ್ಸಾರ್ ಪತ್ರ ನೀಡುವಂತೆ ಕೋರ್ಟ್​ ಆದೇಶ ಹೊರಡಿಸಿದೆ. ಇದರಿಂದ ತಂಡಕ್ಕೆ ದೊಡ್ಡ ರಿಲೀಫ್ ಸಿಕ್ಕಿದೆ. ಸಿನಿಮಾನ ಯಾವಾಗ ರಿಲೀಸ್ ಮಾಡಬೇಕು ಎಂಬುದರ ಬಗ್ಗೆ ತಂಡ ಶೀಘ್ರವೇ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಸಿನಿಮಾಗೆ ಸೆನ್ಸಾರ್ ಪತ್ರ ನೀಡದ ಬಗ್ಗೆ ಕೆವಿಎನ್ ಸಂಸ್ಥೆ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿತ್ತು. ಸೆನ್ಸಾರ್ ಮಂಡಳಿ ಸೂಚಿಸಿದ ಬದಲಾವಣೆ ಮಾಡಿದರೂ ನಮಗೆ ಪ್ರಮಾಣಪತ್ರ ನೀಡಿಲ್ಲ ಎಂದು ನಿರ್ಮಾಣ ಸಂಸ್ಥೆ ಅಳಲು ತೋಡಿಕೊಂಡಿತ್ತು. ಸಿನಿಮಾಗೆ ದೊಡ್ಡ ಮೊತ್ತದ ಬಂಡವಾಳ ಹೂಡಿದ್ದಾಗಿಯೂ ಹೇಳಿಕೊಂಡಿತ್ತು. ಈಗ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಕೋರ್ಟ್ ಆದೇಶ ನೀಡಿದ್ದು, ‘ಯುಎ’ ಸೆನ್ಸಾರ್ ಪತ್ರ ನೀಡುವಂತೆ ಸೂಚಿಸಿದೆ.

ಡಿಸೆಂಬರ್ ತಿಂಗಳಲ್ಲೇ ಸೆನ್ಸಾರ್ ಮಂಡಳಿಗೆ ‘ಜನ ನಾಯಗನ್’ ಚಿತ್ರ ತೋರಿಸಲಾಯಿತು. ಇದನ್ನು ವೀಕ್ಷಿಸಿದ ಮಂಡಳಿಯವರು 27 ಕಡೆಗಳಲ್ಲಿ ಬದಲಾವಣೆ/ಕಟ್/ಮ್ಯೂಟ್​​ಗೆ ಸೂಚಿಸಿತ್ತು. ಈ ಚಿತ್ರಕ್ಕೆ ಯುಎ 16+ ಪ್ರಮಾಣಪತ್ರ ನೀಡಿತ್ತು. ಈ ಬದಲಾವಣೆಗಳ ಬಳಿಕವೂ ಸೆನ್ಸಾರ್ ಮಂಡಳಿಯ ಸದಸ್ಯರೊಬ್ಬರು ಚಿತ್ರವನ್ನು ರಿವ್ಯೂ ಕಮಿಟಿಗೆ ನಿರ್ದೇಶಿಸುವ ನಿರ್ಧಾರ ಮಾಡಿದರು. ಇದರಿಂದ ಸಿನಿಮಾಗೆ ಸೆನ್ಸಾರ್ ಪ್ರಮಾಣಪತ್ರ ಸಿಕ್ಕಿರಲಿಲ್ಲ.

ಸೆನ್ಸಾರ್ ಮಂಡಳಿಯವರು ಹೇಳಿದ ಬದಲಾವಣೆ ಮಾಡಿದ ಬಳಿಕವೂ ರಿವ್ಯೂ ಸಮಿತಿಗೆ ಚಿತ್ರವನ್ನು ಸಲ್ಲಿಕೆ ಮಾಡುವ ಅವಶ್ಯಕತೆ ಏನಿದೆ ಎಂಬ ಪ್ರಶ್ನೆ ಚಿತ್ರತಂಡದ್ದಾಗಿತ್ತು. ಈಗ ಕೋರ್ಟ್​​ನಲ್ಲಿ ಸಿನಿಮಾ ಪರವಾಗಿ ಆದೇಶ ಬಂದಿದೆ.

ಇದನ್ನೂ ಓದಿ: ‘ಜನ ನಾಯಗನ್’ vs ಸಿಬಿಎಫ್​​ಸಿ: ವಿಜಯ್​​ಗೆ ಬೆಂಬಲಿಸಿದ ಕಾಂಗ್ರೆಸ್: ಡಿಎಂಕೆ?

ಈ ವಾರ ‘ಜನ ನಾಯಗನ್’ ರಿಲೀಸ್ ಅನುಮಾನ ಎನ್ನಲಾಗುತ್ತಿದೆ. ಈಗಾಗಲೇ ತಮಿಳುನಾಡಿನಲ್ಲಿ ‘ಪರಾಶಕ್ತಿ’ ಚಿತ್ರ ತೆರೆಗೆ ಬರುತ್ತಿದೆ. ಜನವರಿ 10ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ ಥಿಯೇಟರ್​​​ಗಳು ಹಂಚಿಕೆ ಆಗಿರುವುದರಿಂದ ಚಿತ್ರವು ಜನವರಿ 14ರಂದು ತೆರೆಗೆ ಬರುವ ಎಲ್ಲಾ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:04 am, Fri, 9 January 26

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ