AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ವ್ಯಾಕ್ಸಿನ್​ ಬಗ್ಗೆ ತಪ್ಪು ಮಾಹಿತಿ ಹರಡಿದ ನಟನಿಗೆ 2 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್​

ವಾಕ್ಸಿನ್​ ಬಂದಿದ್ದರೂ ಸಹ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಪರಿಸ್ಥಿತಿಯಲ್ಲಿ ಕೆಲವರು ತಪ್ಪು ಮಾಹಿತಿ ಹರಡುತ್ತಿರುವುದು ವಿಪರ್ಯಾಸ. ಅಂಥವರಲ್ಲಿ ಕೆಲವು ಸೆಲೆಬ್ರಿಟಿಗಳು ಕೂಡ ಸೇರಿಕೊಂಡಿದ್ದಾರೆ.

ಕೊವಿಡ್​ ವ್ಯಾಕ್ಸಿನ್​ ಬಗ್ಗೆ ತಪ್ಪು ಮಾಹಿತಿ ಹರಡಿದ ನಟನಿಗೆ 2 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್​
ಮನ್ಸೂರ್ ಅಲಿ ಖಾನ್ - ಕೊವಿಡ್ ವ್ಯಾಕ್ಸಿನ್
ಮದನ್​ ಕುಮಾರ್​
|

Updated on: May 01, 2021 | 10:07 AM

Share

ಕೊರೊನಾ ವೈರಸ್​ ಎರಡನೇ ಅಲೆಗೆ ದೇಶದ ಜನರು ತತ್ತರಿಸಿದ್ದಾರೆ. ಪ್ರಾಣ ಹೋಗುತ್ತಿದ್ದರೂ ಕೂಡ ಆಸ್ಪತ್ರೆಗಳಲ್ಲಿ ಬೆಡ್​ ಸಿಗದಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ವಾಕ್ಸಿನ್​ ಬಂದಿದ್ದರೂ ಸಹ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಪರಿಸ್ಥಿತಿಯಲ್ಲಿ ಕೆಲವರು ತಪ್ಪು ಮಾಹಿತಿ ಹರಡುತ್ತಿರುವುದು ವಿಪರ್ಯಾಸ. ಅಂಥವರಲ್ಲಿ ಕೆಲವು ಸೆಲೆಬ್ರಿಟಿಗಳು ಕೂಡ ಸೇರಿಕೊಂಡಿದ್ದಾರೆ. ಕೊವಿಡ್​ ವ್ಯಾಕ್ಸಿನ್​ ಬಗ್ಗೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಕಾಲಿವುಡ್​ ನಟ ಮನ್ಸೂರ್​ ಅಲಿ ಖಾನ್​ ಅವರಿಗೆ 2 ಲಕ್ಷ ರೂ. ದಂಡ ವಿಧಿಸಲಾಗಿದೆ.

ಕಳೆದ ತಿಂಗಳು ಕಾಲಿವುಡ್​ ನಟ ವಿವೇಕ್​ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಕೊವಿಡ್​ ವ್ಯಾಕ್ಸಿನ್​ ಪಡೆದುಕೊಂಡ ಮರುದಿನವೇ ಅವರಿಗೆ ಹೃದಯಾಘಾತ ಆಗಿದ್ದು ಕಾಕತಾಳೀಯ. ಆ ಘಟನೆಯನ್ನು ಉಲ್ಲೇಖವಾಗಿ ಇಟ್ಟುಕೊಂಡು ನಟ ಮನ್ಸೂರ್​ ಅಲಿ ಖಾನ್​ ಅವರು ಕೊರೊನಾ ವ್ಯಾಕ್ಸಿನ್​ ಬಗ್ಗೆ ತಪ್ಪು ಮಾಹಿತಿ ಹರಡಿದ್ದರು ಎಂದು ದೂರು ದಾಖಲಿಸಲಾಗಿತ್ತು.

ವಿವೇಕ್​ ಅವರ ಹೃದಯಾಘಾತಕ್ಕೆ ವ್ಯಾಕ್ಸಿನ್​ ಕಾರಣ ಎಂದು ಮನ್ಸೂರ್​ ಅಲಿ ಖಾನ್​ ಹೇಳಿದ್ದ ವಿಡಿಯೋ ವೈರಲ್​ ಆಗಿತ್ತು. ಅವರ ವಿರುದ್ಧ ಆರೋಗ್ಯಾಧಿಕಾರಿಗಳು ದೂರು ದಾಖಲಿಸಿದ್ದರು. ವಡಪಳನಿ ಪೊಲೀಸರು ಮನ್ಸೂರ್​ ಅಲಿ ಖಾನ್​ ವಿರುದ್ಧ ಎಫ್​ಐಆರ್​ ಸಿದ್ಧಪಡಿಸಿದ್ದರು. ಈ ಪ್ರಕರಣದಕ್ಕೆ ಸಂಬಂಧಿಸಿದಂತೆ ಮದ್ರಾಸ್​ ಹೈಕೋರ್ಟ್​ ಈಗ ತೀರ್ಪು ನೀಡಿದೆ. ತಮಿಳುನಾಡು ಆರೋಗ್ಯ ಇಲಾಖೆಗೆ 2 ಲಕ್ಷ ರೂ.ಗಳನ್ನು ದಂಡದ ರೂಪದಲ್ಲಿ ಮನ್ಸೂರ್ ಅಲಿ ಖಾನ್​ ನೀಡಬೇಕು ಎಂದು ತೀರ್ಪಿನಲ್ಲಿ ಸೂಚಿಸಲಾಗಿದೆ.

ವ್ಯಾಕ್ಸಿನ್​ ಬಗ್ಗೆ ತಪ್ಪು ಮಾಹಿತಿ ನೀಡುವುದು ನನ್ನ ಉದ್ದೇಶ ಆಗಿರಲಿಲ್ಲ. ವಿವೇಕ್​ ನಿಧನದ ಬಳಿಕ ತೀವ್ರ ನೋವು ಉಂಟಾಗಿತ್ತು. ಆ ಭಾವುಕತೆಯ ಭರದಲ್ಲಿ ಹಾಗೆ ಮಾತನಾಡಿದ್ದೆ ಎಂದು ಕೋರ್ಟ್​ನಲ್ಲಿ ಮನ್ಸೂರ್​ ಅಲಿ ಖಾನ್​ ಹೇಳಿಕೆ ನೀಡಿದ್ದಾರೆ ಎಂದು ವರದಿ ಆಗಿದೆ. ಏ.17ರಂದು ನಟ ವಿವೇಕ್​ ನಿಧನರಾಗಿದ್ದರು. ಆ ಬಳಿಕ ಮನ್ಸೂರ್​ ಅಲಿ ಖಾನ್​ ಅವರು ಕೊರೊನಾ ವ್ಯಾಕ್ಸಿನ್​ ಬಗ್ಗೆ ತಪ್ಪು ಮಾಹಿತಿ ಹರಡಿದ್ದರು.

ಇದನ್ನೂ ಓದಿ: ಕೊವಿಡ್​ ಲಸಿಕೆ ಪಡೆದ ಮರುದಿನವೇ ನಟ ವಿವೇಕ್​ಗೆ ಹೃದಯಾಘಾತ! ಆಸ್ಪತ್ರೆಗೆ ದಾಖಲು

Vivek: ತಮಿಳು ನಟ ವಿವೇಕ್​ ನಿಧನಕ್ಕೆ ಕಂಬನಿ ಮಿಡಿದ ಪುನೀತ್​, ರಜನಿಕಾಂತ್​, ಪ್ರಕಾಶ್​ ರೈ, ರೆಹಮಾನ್​

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More