AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಹೋ ವಿಕ್ರಮಾರ್ಕ’ ಸಿನಿಮಾದಲ್ಲಿ ಹೀರೋ ಆದ ‘ಮಗಧೀರ’ ವಿಲನ್ ದೇವ್ ಗಿಲ್

ನಟ ದೇವ್​ ಗಿಲ್​ ಅವರು ‘ಅಹೋ ವಿಕ್ರಮಾರ್ಕ’ ಮೂಲಕ ಹೀರೋ ಆಗಿ ಜನರನ್ನು ರಂಜಿಸಲು ಬರುತ್ತಿದ್ದಾರೆ. ಈ ಸಿನಿಮಾ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಹಾಡಿನ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ರವಿ ಬಸ್ರೂರು ಅವರು ಸಾಂಗ್ ರಿಲೀಸ್ ಮಾಡಿ ಶುಭಕೋರಿದರು.

‘ಅಹೋ ವಿಕ್ರಮಾರ್ಕ’ ಸಿನಿಮಾದಲ್ಲಿ ಹೀರೋ ಆದ ‘ಮಗಧೀರ’ ವಿಲನ್ ದೇವ್ ಗಿಲ್
ದೇವ್​ ಗಿಲ್​
ಮದನ್​ ಕುಮಾರ್​
|

Updated on: Aug 07, 2024 | 11:02 PM

Share

2009ರಲ್ಲಿ ಬಿಡುಗಡೆ ಆಗಿದ್ದ ‘ಮಗಧೀರ’ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಆ ಸಿನಿಮಾದಲ್ಲಿ ರಾಮ್​ ಚರಣ್​ ಅವರು ಹೀರೋ ಆಗಿ ಮಿಂಚಿದ್ದರೆ, ನಟ ದೇವ್​ ಗಿಲ್​ ಅವರು ವಿಲನ್​ ಪಾತ್ರ ಮಾಡಿ ಜನಮನ ಗೆದ್ದಿದ್ದರು. ಖಡಕ್​ ಖಳನಾಗಿ ಚಪ್ಪಾಳೆ ಗಿಟ್ಟಿಸಿದ್ದ ಅವರು ಈಗ ಹೀರೋ ಆಗಿದ್ದಾರೆ. ಆ ಮೂಲಕ ಚಿತ್ರರಂಗದಲ್ಲಿ ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಳ್ಳುತ್ತಿದ್ದಾರೆ. ಅವರು ಹೀರೋ ಆಗಿ ನಟಿಸಿರುವ ಸಿನಿಮಾಗೆ ‘ಅಹೋ ವಿಕ್ರಮಾರ್ಕ’ ಎಂದು ಹೆಸರು ಇಡಲಾಗಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ತೆರೆಕಾಣಲಿದೆ.

‘ಅಹೋ ವಿಕ್ರಮಾರ್ಕ’ ಸಿನಿಮಾಗೆ ಬಿರುಸಿನ ಪ್ರಚಾರ ಮಾಡಲಾಗುತ್ತಿದೆ. ಆಗಸ್ಟ್ 30ಕ್ಕೆ ಈ ಸಿನಿಮಾ ಬಿಡುಗಡೆ ಆಗಲಿದೆ. ಕನ್ನಡದಲ್ಲಿಯೂ ಈ ಸಿನಿಮಾ ತೆರೆಕಾಣಲಿದೆ. ಹಾಗಾಗಿ ದೇವ್ ಗಿಲ್ ಅವರು ಚಿತ್ರತಂಡದ ಜೊತೆ ಬೆಂಗಳೂರಿಗೆ ಬಂದು ಪ್ರಚಾರ ಮಾಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನ ಊರ್ವಶಿ ಚಿತ್ರಮಂದಿರದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರು ‘ಅಹೋ ವಿಕ್ರಮಾರ್ಕ’ ಸಿನಿಮಾದ ‘ಮೀನಾಕ್ಷಿ..’ ಸಾಂಗ್ ರಿಲೀಸ್ ಮಾಡಿದರು. ‘ದೇವ್ ಗಿಲ್ ಅವರನ್ನು ಸ್ಕ್ರೀನ್ ಮೇಲೆ ನೋಡಿದಾಗ ಭಯ ಆಗುತ್ತಿತ್ತು. ಆದರೆ ನಮ್ಮ ಮನೆಗೆ ಅವರು ಬಂದಾಗ ಸರಳತೆ ಮತ್ತು ವಿನಯ ನನಗೆ ಇಷ್ಟ ಆಯಿತು. ಸಿನಿಮಾ ಮೇಲೆ ಅವರಿಗೆ ತುಂಬಾ ಪ್ರೀತಿಯಿದೆ. ಚಿತ್ರಮಂದಿರದಲ್ಲಿ ‘ಅಹೋ ವಿಕ್ರಮಾರ್ಕ’ ಸಿನಿಮಾ ಭಿನ್ನ ಅನುಭವ ನೀಡಲಿದೆ’ ಎಂದು ರವಿ ಬಸ್ರೂರು ಹೇಳಿದರು.

‘ಅಹೋ ವಿಕ್ರಮಾರ್ಕ’ ಚಿತ್ರಕ್ಕೆ ನಿರ್ದೇಶಕ ತ್ರಿಕೋಟಿ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ತೇಜಸ್ವಿನಿ ಪಂಡಿತ್, ಪ್ರವೀಣ್ ತಾರ್ಡೆ, ಪೋಸಾನಿ ಮುರಳಿ ಕೃಷ್ಣ, ಸಯಾಜಿ ಶಿಂಧೆ, ವಿಕ್ರಮ್ ಶರ್ಮಾ, ಕಾಲಕೇಯ ಪ್ರಭಾಕರ್ ಮುಂತಾದವರು ಈ ಸಿನಿಮಾ ಪಾತ್ರವರ್ಗದಲ್ಲಿ ಇದ್ದಾರೆ. ಆರತಿ ದೇವಿಂದರ್ ಗಿಲ್, ಅಶ್ವಿನಿ ಕುಮಾರ್ ಮಿಶ್ರಾ, ಮೀಹಿರ್ ಕುಲಕರ್ಣಿ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಸಿನಿಮಾ ಬಗ್ಗೆ ದೇವ್​ ಗಿಲ್​ ಅವರು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕನ್ನಡದ ಸಿನಿಪ್ರಿಯರಿಂದ ಅವರು ಬೆಂಬಲ ಕೋರಿದ್ದಾರೆ.

ಇದನ್ನೂ ಓದಿ: ರಾಜಮೌಳಿ ಜೀವನದ ಅಪರೂಪದ ಮಾಹಿತಿ ತಿಳಿಸಿದ ಹೊಸ ಸಾಕ್ಷ್ಯಚಿತ್ರ

ಬಿಡುಗಡೆ ಆಗಿರುವ ಹೊಸ ಸಾಂಗ್​ನಲ್ಲಿ ದೇವ್​ ಗಿಲ್ ಮತ್ತು ನಟಿ ಚಿತ್ರಾ ಶುಕ್ಲಾ ಅವರು ಬಿಂದಾಸ್​ ಆಗಿ ಡ್ಯಾನ್ಸ್ ಮಾಡಿದ್ದಾರೆ. ಕನ್ನಡ ವರ್ಷನ್​ ಹಾಡಿಗೆ ವರದರಾಜ್​ ಚಿಕ್ಕಬಳ್ಳಾಪುರ ಅವರು ಸಾಹಿತ್ಯ ಬರೆದಿದ್ದಾರೆ. ರವಿ ಬಸ್ರೂರು ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಮನೀಶ್ ದಿನಕರ್ ಅವರು ಈ ಗೀತೆಯನ್ನು ಹಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ