AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚನೆ ಪ್ರಕರಣ: ‘ಮಹಾಭಾರತ’ ನಟ ಸೌರವ್ ಬಂಧನ

‘ಮಹಾಭಾರತ’ ಧಾರಾವಾಹಿಯಲ್ಲಿ ಭೀಮನ ಪಾತ್ರದಲ್ಲಿ ನಟಿಸುವ ಮೂಲಕ ಗಮನ ಸೆಳೆದಿದ್ದ ನಟ ಸೌರವ್ ಗುರ್ಜರ್ ಇದೀಗ ಹೈದರಾಬಾದ್ ಪೊಲೀಸರ ಅತಿಥಿ ಆಗಿದ್ದಾನೆ. ವೃತ್ತಿಪರ ಕುಸ್ತಿಪಟು ಮತ್ತು ದೇಹದಾರ್ಡ್ಯ ಪಟುವೂ ಆಗಿರುವ ಸೌರವ್ ಗುರ್ಜರ್ ಅನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ನಟನ ಮೇಲಿರುವ ಆರೋಪಗಳೇನು? ನಟನ ಬಂಧನಕ್ಕೆ ಕಾರಣವೇನು? ಮಾಹಿತಿ ಇಲ್ಲಿದೆ...

ವಂಚನೆ ಪ್ರಕರಣ: ‘ಮಹಾಭಾರತ’ ನಟ ಸೌರವ್ ಬಂಧನ
Sauvrav Gurjar
ಮಂಜುನಾಥ ಸಿ.
|

Updated on: Sep 20, 2026 | 7:23 PM

Share

‘ಮಹಾಭಾರತ’ ಧಾರಾವಾಹಿಯಲ್ಲಿ ಭೀಮನ ಪಾತ್ರದ ಮೂಲಕ ಜನಪ್ರಿಯತೆ ಗಳಿಸಿದ್ದ ನಟ ಸೌರವ್ ಗುರ್ಜರ್ ಅನ್ನು ಪೊಲೀಸರು ಬಂಧಿಸಿದ್ದಾರೆ. ವೃತ್ತಿಪರ ಕುಸ್ತಿಪಟು ಸಹ ಆಗಿರುವ ಸೌರವ್ ವಿರುದ್ಧ ಮಹಿಳೆಯೊಬ್ಬರು ವಂಚನೆ ಪ್ರಕರಣ ದಾಖಲಿಸಿದ್ದರು. ಹೈದರಾಬಾದ್ ನಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಇದೀಗ ಸೌರವ್ ಗುರ್ಜರ್ ಅನ್ನು ಬಂಧಿಸಿದ್ದಾರೆ. ಮಹಿಳೆಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ ಅವರಿಗೆ ವಂಚನೆ ಮಾಡಿರುವ ಆರೋಪ ಸೌರವ್ ಅವರ ಮೇಲಿದೆ.

ಮಹಾಭಾರತದಲ್ಲಿ ‘ಭೀಮ’ ಮತ್ತು ರಣ್​​ಬೀರ್ ಕಪೂರ್ ನಟಿಸಿರುವ ‘ಬ್ರಹ್ಮಾಸ್ತ್ರ’ ಸಿನಿಮಾನಲ್ಲಿ ‘ಜೋರ್’ ಪಾತ್ರಗಳ ಮೂಲಕ ಹೆಚ್ಚು ಜನಪ್ರಿಯರಾಗಿರುವ ಸೌರವ್ ಗುರ್ಜರ್, ಇದೀಗ ಹೈದರಾಬಾದ್ ಪೊಲೀಸರ ಅತಿಥಿ ಆಗಿದ್ದಾರೆ. ದೂರು ನೀಡಿರುವ ಮಹಿಳೆ ತಮ್ಮ ಹಾಗೂ ಸೌರವ್ ಸಂಬಂಧವು ಹಲವು ವರ್ಷಗಳ ಹಿಂದೆ ಪ್ರಾರಂಭವಾಯಿತು ಮತ್ತು ಮದುವೆಯಾಗುವುದಾಗಿ ಗುರ್ಜರ್ ತಮಗೆ ಭರವಸೆ ನೀಡಿದ್ದರು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಮಹಿಳೆ ನೀಡಿರುವ ದೂರಿನ ಅನ್ವಯ ಮಹಿಳೆಗೆ ಮದುವೆಯ ಭರವಸೆ ನೀಡಿ ಸೌರವ್ ಲೈಂಗಿಕ ಚಟುವಟಿಕೆಗೆ ಮಹಿಳೆಯನ್ನು ಬಳಸಿಕೊಂಡಿದ್ದಾನೆ ಎನ್ನಲಾಗಿದೆ.

ಗಚಿಬೌಲಿ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ಪ್ರಕಾರ, 2021ರಲ್ಲಿ ಇನ್‌ಸ್ಟಾಗ್ರಾಮ್ ಮೂಲಕ ತನಗೆ ಸೌರವ್ ಗುರ್ಜರ್ ಪರಿಚಯವಾಗಿದ್ದರು ಎಂದು ಮಹಿಳೆ ತಿಳಿಸಿದ್ದಾರೆ. ವಾಟ್ಸಾಪ್ ಮೂಲಕ ಇಬ್ಬರೂ ಪರಸ್ಪರ ಹತ್ತಿರವಾದರು ಮತ್ತು ಡಿಸೆಂಬರ್ 25, 2021 ರಂದು ಮೊದಲ ಬಾರಿಗೆ ನೇರವಾಗಿ ಭೇಟಿಯಾದರಂತೆ. ಮಹಿಳೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದರು ಮತ್ತು ಹೆಂಡತಿಗೆ ಸಮಾನವಾದ ಹಕ್ಕುಗಳನ್ನು ನೀಡುವುದಾಗಿ ಭರವಸೆ ನೀಡಿದ್ದರು ಎಂದು ಮಹಿಳೆ ದೂರಿನಲ್ಲಿ ಹೇಳಿದ್ದಾರೆ.

ಇದನ್ನೂ ಓದಿThandav Ram Profile: ಧಾರಾವಾಹಿ, ಸಿನಿಮಾ, ವಿವಾದ ಈಗ ಬಿಗ್​ಬಾಸ್: ತಾಂಡವ್ ರಾಮ್ ಹಿನ್ನೆಲೆಯೇನು?

ಸೌರವ್ ಅನ್ನು ನಂಬಿ ತಾನು ಅಮೆರಿಕದಿಂದ ಭಾರತಕ್ಕೆ ವಾಪಸ್ಸಾಗಿದ್ದಾಗಿ ಮಹಿಳೆ ಹೇಳಿದ್ದು, ಇಬ್ಬರೂ ಸೇರಿ ಒಟ್ಟಿಗೆ ವ್ಯಾಪಾರವೊಂದನ್ನು ಪ್ರಾರಂಭಿಸುವುದಾಗಿಯೂ ಸೌರವ್ ಭರವಸೆ ನೀಡಿ ಅಮೆರಿಕದಲ್ಲಿದ್ದ ತಮ್ಮ ಉದ್ಯೋಗವನ್ನು ಬಿಡುವಂತೆ ಸೌರವ್​ ಒಪ್ಪಿಸಿದ್ದ, ಆದರೆ ಆ ಬಳಿಕ ಮದುವೆಯ ವಿಚಾರದಲ್ಲಿ ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಯ್ತು, ನಾನು ಮದುವೆಗೆ ಒತ್ತಾಯಿಸಿದಾಗೆಲ್ಲ ನನ್ನನ್ನು ಬ್ಲಾಕ್ ಮಾಡುತ್ತಿದ್ದ, ಸಾಕಷ್ಟು ಮಾನಸಿಕ ಮತ್ತು ದೈಹಿಕ ಕಿರುಕುಳವನ್ನು ನನಗೆ ಸೌರವ್ ನೀಡಿದ್ದಾನೆ ಎಂದು ಮಹಿಳೆ ದೂರು ದಾಖಲಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ