Sahil Khan Arrested: ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ, ನಟ ಸಾಹಿಲ್ ಖಾನ್ ಬಂಧನ
ಮಹಾದೇವ್ ಬುಕ್ ಬೆಟ್ಟಿಂಗ್ ಪ್ರಕರಣದಲ್ಲಿ ನಟ ಸಾಹಿಲ್ ಖಾನ್ ಸಂಕಷ್ಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಾಸ್ತವವಾಗಿ, ಸಾಹಿಲ್ ಖಾನ್ ಅವರನ್ನು ಬಾಂಬೆ ಹೈಕೋರ್ಟ್ ಆರೋಪಿ ಎಂದು ಘೋಷಿಸಿತು. ಇದಾದ ಬಳಿಕ ನ್ಯಾಯಾಲಯ ಅವರ ಅರ್ಜಿಯನ್ನು ತಿರಸ್ಕರಿಸಿತ್ತು. ಇದೀಗ ಈ ಪ್ರಕರಣದಲ್ಲಿ ಸಾಹಿಲ್ ಖಾನ್ ನನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.ಮುಂಬೈ ಪೊಲೀಸರ ಎಸ್‌ಐಟಿ ತಂಡ ಶನಿವಾರ ರಾತ್ರಿ ಅವರನ್ನು ಬಂಧಿಸಿದೆ. ಸಾಹಿಲ್ ಖಾನ್ ವಿರುದ್ಧ 15 ಸಾವಿರ ಕೋಟಿ ರೂಪಾಯಿ ವಂಚನೆ ಆರೋಪವಿದೆ.
ಮಹಾದೇವ್ ಬೆಟ್ಟಿಂಗ್ ಆಪ್(Mahadev Betting App) ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ನಟ ಸಾಹಿಲ್ ಖಾನ್(Sahil Khan) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್‌ಗಢದಲ್ಲಿ ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡ (ಎಸ್‌ಐಟಿ) ಅವರನ್ನು ಬಂಧಿಸಿದ್ದು, ಬಂಧನ ಪೂರ್ವ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ.
ಇದಕ್ಕೂ ಮೊದಲು, 2023 ರ ಡಿಸೆಂಬರ್‌ನಲ್ಲಿ ಎಸ್‌ಐಟಿ ಸಾಹಿಲ್ ಮತ್ತು ಇತರ ಮೂವರನ್ನು ವಿಚಾರಣೆಗೆ ಕರೆದಿತ್ತು, ಆದರೆ ಅವರು ಹಾಜರಾಗಲಿಲ್ಲ. Isports247, ದಿ ಲಯನ್ ಬುಕ್ ಬ್ರ್ಯಾಂಡ್ ಅನ್ನು ಪ್ರಚಾರ ಮಾಡುತ್ತಿದೆ ಮತ್ತು ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ನೊಂದಿಗೆ ನೇರ ಸಂಬಂಧವನ್ನು ನಿರಾಕರಿಸಿದೆ.
ರಾಯಪುರ ಮಾರ್ಗವಾಗಿ ಮುಂಬೈಗೆ ಕರೆತರಲಾಗುತ್ತಿದೆ. ಲೋಟಸ್ ಆಪ್ 247ರಲ್ಲಿ ಪಾಲುದಾರನಾಗಿದ್ದು, ಇಂದು ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಕಾನೂನುಬಾಹಿರ ಕಾರ್ಯಾಚರಣೆಯಲ್ಲಿ ನೇರವಾಗಿ ಭಾಗಿಯಾಗಿರುವುದನ್ನು ಉಲ್ಲೇಖಿಸಿ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಸ್ಟೈಲ್ ಮತ್ತು ಎಕ್ಸ್‌ಕ್ಯೂಸ್ ಮಿಯಲ್ಲಿನ ಪಾತ್ರಗಳಿಗೆ ಹೆಸರುವಾಸಿಯಾದ ಸಾಹಿಲ್ ಈಗ ಫಿಟ್‌ನೆಸ್‌ನತ್ತ ಗಮನಹರಿಸಿದ್ದಾರೆ, ಡಿವೈನ್ ನ್ಯೂಟ್ರಿಷನ್ ಅನ್ನು ಸ್ಥಾಪಿಸಿದ್ದಾರೆ, ಇದು ಫಿಟ್‌ನೆಸ್ ಪೂರಕಗಳನ್ನು ನೀಡುತ್ತದೆ.
ಮತ್ತಷ್ಟು ಓದಿ: ಮಹಾದೇವ ಬೆಟ್ಟಿಂಗ್ ಆ್ಯಪ್ ಸೇರಿ ಇತರೇ 21 ಆ್ಯಪ್ ನಿಷೇಧ: ಕೇಂದ್ರ ಸರ್ಕಾರದ ಮಹತ್ವದ ಆದೇಶ
2023 ರಲ್ಲಿ, ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ಅಪರಾಧ ವಿಭಾಗವು ಡಿಸೆಂಬರ್ 15 ರಂದು ತಮ್ಮ ಹೇಳಿಕೆಗಳನ್ನು ದಾಖಲಿಸಲು ಸಾಹಿಲ್ ಖಾನ್ ಮತ್ತು ಇತರ ಮೂವರಿಗೆ ಸಮನ್ಸ್ ನೀಡಿತ್ತು ಎಂದು ವರದಿಯಾಗಿದೆ. ಆದರೆ, ಖಾನ್ ತನಿಖೆಗಾಗಿ ಪೊಲೀಸರ ಮುಂದೆ ಹಾಜರಾಗಲಿಲ್ಲ.
ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಹಲವು ನಟ ಹೆಸರುಗಳು ಬೆಳಕಿಗೆ ಬಂದಿವೆ. ಇದೀಗ ಆ ಪಟ್ಟಿಯಲ್ಲಿ ಸಾಹಿಲ್ ಖಾನ್ ಹೆಸರೂ ಕೂಡ ಸೇರಿದೆ. ಮಹಾದೇವ ಬೆಟ್ಟಿಂಗ್ ಆ್ಯಪ್ ನಿಷೇಧಗೊಳಿಸಿ ಕೇಂದ್ರ ಸರ್ಕಾರ ಕಳೆದ ವರ್ಷ ಆದೇಶ ಹೊರಡಿಸಿತ್ತು. ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನಿಖೆ ನಡೆಸಿದ್ದು, ಈ ಮಧ್ಯೆ ಮಹದೇವ್ ಬುಕ್ ಆನ್‌ಲೈಲ್ ಸೇರಿದಂತೆ ಇತರೆ 21 ಬೆಟ್ಟಿಂಗ್ ಅಪ್ಲಿಕೇಶನ್‌ಗಳು ಮತ್ತು ವೆಬ್‌ಸೈಟ್‌ಗಳ ವಿರುದ್ಧ ಐಟಿ ಸಚಿವಾಲಯ ರ್ಬಂಧ ಹೇರಿತ್ತು. ಇಡಿ ಶಿಫಾರಸಿನ ನಂತರ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ಆದೇಶ ಹೊರಡಿಸಲಾಗಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ