AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಹಾಕಾವ್ಯ ಶ್ರೀ ರಾಮಾಯಣ ಕಥಾ’ ಚಿತ್ರ ಗೆಲ್ಲದಂತೆ ತಡೆಯಿತಾ ‘ರಾಮಾಯಣ’? ನಿರ್ಮಾಪಕರ ಆರೋಪ

'ಮಹಾಕಾವ್ಯ ಶ್ರೀ ರಾಮಾಯಣ ಕಥಾ' ಚಿತ್ರದ ನಿರ್ಮಾಪಕ ಪ್ರಕಾಶ್ ಮಹೋಬಿಯಾ ತಮ್ಮ ಸಿನಿಮಾದ ವಿರುದ್ಧ ನಕಾರಾತ್ಮಕ ಪ್ರಚಾರ ನಡೆದಿದೆ ಎಂದು ಆರೋಪಿಸಿದ್ದಾರೆ. ದೊಡ್ಡ ಬಜೆಟ್ ಸಿನಿಮಾದವರು ಸೋಶಿಯಲ್ ಮೀಡಿಯಾ ಮೂಲಕ ಅಪಪ್ರಚಾರ ನಡೆಸಿದ್ದಾರೆ ಎಂದು ಹೇಳಿರುವ ಅವರು, ತಮ್ಮ ಚಿತ್ರವನ್ನು ಮತ್ತೆ ಚಿತ್ರಮಂದಿರಗಳಲ್ಲಿ ಮರು ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ.

'ಮಹಾಕಾವ್ಯ ಶ್ರೀ ರಾಮಾಯಣ ಕಥಾ' ಚಿತ್ರ ಗೆಲ್ಲದಂತೆ ತಡೆಯಿತಾ ‘ರಾಮಾಯಣ’? ನಿರ್ಮಾಪಕರ ಆರೋಪ
ರಾಮಾಯಣ
ರಾಜೇಶ್ ಹೆಗಡೆ ದುಗ್ಗುಮನೆ
|

Updated on: Oct 06, 2026 | 1:21 PM

Share

‘ಮಹಾಕಾವ್ಯ ಶ್ರೀ ರಾಮಾಯಣ ಕಥಾ’ ಚಿತ್ರದ ನಿರ್ಮಾಪಕ ಪ್ರಕಾಶ್ ಮಹೋಬಿಯಾ ತಮ್ಮ ಸಿನಿಮಾದ ವಿರುದ್ಧ ನೆಗೆಟಿವ್ ಪ್ರಚಾರ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸಿನಿಮಾ ಪ್ರೇಕ್ಷಕರನ್ನು ತಲುಪಲು ಸೂಕ್ತ ಅವಕಾಶವೇ ಸಿಗಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಮುಂಬರುವ ದೊಡ್ಡ ಬಜೆಟ್‌ನ ರಾಮಾಯಣ ಸಿನಿಮಾದ ತಂಡದವರು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಮೂಲಕ ತಮ್ಮ ಚಿತ್ರದ ವಿರುದ್ಧ ಅಪಪ್ರಚಾರ ನಡೆಸಿದ್ದಾರೆ ಎಂದು ಅವರು ಸುಳಿವು ನೀಡಿದ್ದಾರೆ.

‘ನಮ್ಮ ಸಿನಿಮಾವನ್ನು ವೀಕ್ಷಿಸಿದ ಎಲ್ಲ ಪ್ರೇಕ್ಷಕರು ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ಚಿತ್ರಮಂದಿರಗಳಲ್ಲಿ ಜನರಿಗೆ ಸಿನಿಮಾ ನೋಡಲು ಅವಕಾಶವೇ ಸಿಗಲಿಲ್ಲ. ಯೂಟ್ಯೂಬರ್‌ಗಳು ಮತ್ತು ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್‌ಗಳಿಗೆ ಹಣ ನೀಡಿ ನಕಾರಾತ್ಮಕ ವಿಮರ್ಶೆಗಳನ್ನು ಹರಡಿಸಲಾಗಿದೆ. ಜನರು ನಮ್ಮ ಚಿತ್ರವನ್ನು ನೋಡದಂತೆ ತಡೆಯಲು ಸಂಘಟಿತ ಪ್ರಯತ್ನ ನಡೆದಿದೆ. ಈ ಕುರಿತು ನಮಗೆ ಮಾಹಿತಿ ಸಿಕ್ಕಿದೆ’ ಎಂದು ಪ್ರಕಾಶ್ ಮಹೋಬಿಯಾ ಹೇಳಿದ್ದಾರೆ.

‘ಸಿನಿಮಾ ರಂಗದಲ್ಲಿ ನಮಗೆ ಇದು ಮೊದಲ ಅನುಭವ. ಚಿತ್ರ ನಿರ್ಮಾಣದ ನಂತರ ಅದನ್ನು ಹೇಗೆ ಪ್ರಚಾರ ಮಾಡಬೇಕು ಎಂಬುದು ನಮಗೆ ತಿಳಿದಿರಲಿಲ್ಲ. ಹಣದ ನಷ್ಟಕ್ಕಿಂತ ಹೆಚ್ಚು ಜನರಿಗೆ ಸಿನಿಮಾ ತಲುಪಲಿಲ್ಲ ಎಂಬ ಬೇಸರ ನಮಗಿದೆ. ಆದ್ದರಿಂದ ಈ ಸಿನಿಮಾವನ್ನು ಮತ್ತೆ ಚಿತ್ರಮಂದಿರಗಳಲ್ಲಿ ಮರು ಬಿಡುಗಡೆ ಮಾಡಲು ನಾವು ಯೋಜನೆ ರೂಪಿಸುತ್ತಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಸಿನಿಮಾ ದೊಡ್ಡ ಬಜೆಟ್‌ನಲ್ಲಿ ತಯಾರಾಗುತ್ತಿದೆ. ರಣಬೀರ್ ಕಪೂರ್, ಸಾಯಿ ಪಲ್ಲವಿ ಮತ್ತು ಯಶ್ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ದೊಡ್ಡ ಸಿನಿಮಾದ ಪ್ರಭಾವದಿಂದಾಗಿಯೇ ತಮ್ಮ ಸಣ್ಣ ಬಜೆಟ್ ಸಿನಿಮಾಗೆ ತೊಂದರೆಯಾಗಿದೆ ಎಂದು ಮಹೋಬಿಯಾ ಪರೋಕ್ಷವಾಗಿ ಸೂಚಿಸಿದ್ದಾರೆ. ಆದರೆ ಅವರು ಯಾವುದೇ ನಿರ್ದಿಷ್ಟ ನಿರ್ಮಾಪಕರ ಅಥವಾ ಚಿತ್ರದ ಹೆಸರನ್ನು ನೇರವಾಗಿ ಉಲ್ಲೇಖಿಸಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಹಾಗೊಂದು ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ: ರಣಬೀರ್ ಕಪೂರ್, ಸಾಯಿ ಪಲ್ಲವಿ ಅಭಿನಯದ ‘ರಾಮಾಯಣ’ ಸಿನಿಮಾ ಸೆಟ್‌ನಲ್ಲಿ ಬೆಂಕಿ ಅವಘಡ

ಅಭಿಷೇಕ್ ಸಿಂಗ್ ನಿರ್ದೇಶನದ ‘ಮಹಾಕಾವ್ಯ ಶ್ರೀ ರಾಮಾಯಣ ಕಥಾ’ ಸೆಪ್ಟೆಂಬರ್ 25 ರಂದು ಬಿಡುಗಡೆಯಾಗಿತ್ತು. ದೇವ್ ಶರ್ಮಾ, ಅಂಜಲಿ ಅರೋರಾ ಮತ್ತು ಶೀಲ್ ವರ್ಮಾ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಪೌರಾಣಿಕ ಕಥೆಯನ್ನು ವಿಭಿನ್ನವಾಗಿ ತೋರಿಸಿರುವ ಈ ಚಿತ್ರಕ್ಕೆ ಮತ್ತೊಮ್ಮೆ ಅವಕಾಶ ಸಿಕ್ಕರೆ ಪ್ರೇಕ್ಷಕರು ಖಂಡಿತವಾಗಿಯೂ ಮೆಚ್ಚಿಕೊಳ್ಳುತ್ತಾರೆ ಎಂಬ ಭರವಸೆಯನ್ನು ಚಿತ್ರತಂಡ ಹೊಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!
ನಕಲಿ ದಾಖಲೆ ಸೃಷ್ಟಿಸಿ ಜೈಲಿನಿಂದ ಬಿಡುಗಡೆ​​ ಪ್ರಕರಣ ಬಯಲಾಗಿದ್ದೇ ರೋಚಕ
ನಕಲಿ ದಾಖಲೆ ಸೃಷ್ಟಿಸಿ ಜೈಲಿನಿಂದ ಬಿಡುಗಡೆ​​ ಪ್ರಕರಣ ಬಯಲಾಗಿದ್ದೇ ರೋಚಕ
ಕೆಪಿಎಸ್‌ಸಿ ನೇಮಕಾತಿ ಹಗರಣ: ತನಿಖೆ ವಿಚಾರವಾಗಿ ಇಡಿ-ಸಿಐಡಿ ನಡುವೆ ಜಟಾಪಟಿ!
ಕೆಪಿಎಸ್‌ಸಿ ನೇಮಕಾತಿ ಹಗರಣ: ತನಿಖೆ ವಿಚಾರವಾಗಿ ಇಡಿ-ಸಿಐಡಿ ನಡುವೆ ಜಟಾಪಟಿ!
ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ವಿಪಕ್ಷಗಳ ಮಾರ್ಚ್
ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ವಿಪಕ್ಷಗಳ ಮಾರ್ಚ್
ಮೈಸೂರು ದಸರಾ: ಖಾಸಗಿ ದರ್ಬಾರ್ ಮತ್ತು ರತ್ನಖಚಿತ ಸಿಂಹಾಸನದ ವಿಶೇಷತೆ
ಮೈಸೂರು ದಸರಾ: ಖಾಸಗಿ ದರ್ಬಾರ್ ಮತ್ತು ರತ್ನಖಚಿತ ಸಿಂಹಾಸನದ ವಿಶೇಷತೆ
ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್; ಗತವೈಭವ ಕಂಡು ಬೆರಗು
ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್; ಗತವೈಭವ ಕಂಡು ಬೆರಗು
ಬಿಗ್ ಬಾಸ್ ಮನೆಯಲ್ಲಿ ಗಂಧರ್ವರು vs ರಾಕ್ಷಸರು; ಮಂಜು ಅಬ್ಬರ
ಬಿಗ್ ಬಾಸ್ ಮನೆಯಲ್ಲಿ ಗಂಧರ್ವರು vs ರಾಕ್ಷಸರು; ಮಂಜು ಅಬ್ಬರ
ಇಂದು ಈ ರಾಶಿಯವರು ಸಾಲದ ವಿಚಾರದಲ್ಲಿ ಸ್ವಲ್ಪ ಜಾಗೃತರಾಗಿರಿ
ಇಂದು ಈ ರಾಶಿಯವರು ಸಾಲದ ವಿಚಾರದಲ್ಲಿ ಸ್ವಲ್ಪ ಜಾಗೃತರಾಗಿರಿ
ಬೆಂಗಳೂರಿನಾದ್ಯಂತ ವರುಣಾರ್ಭಟ: ರಾತ್ರಿ ಮಳೆಗೆ ರಸ್ತೆಗಳು ಜಲಾವೃತ
ಬೆಂಗಳೂರಿನಾದ್ಯಂತ ವರುಣಾರ್ಭಟ: ರಾತ್ರಿ ಮಳೆಗೆ ರಸ್ತೆಗಳು ಜಲಾವೃತ