ತಮಿಳು ನಟಿ-ನಿರೂಪಕಿ ಮಹಾಲಕ್ಷ್ಮಿ (Mahalakshmi) ಹಾಗೂ ನಿರ್ಮಾಪಕ ರವೀಂದರ್ ಚಂದ್ರಶೇಖರನ್ (Ravindar Chandrasekaran) ಮದುವೆಯ ಸುದ್ದಿ ಹಾಟ್ ಟಾಪಿಕ್ ಆಗಿದೆ. ಕೆಲವೇ ದಿನಗಳ ಹಿಂದೆ ಈ ಜೋಡಿಯ ಕಲ್ಯಾಣ ನೆರವೇರಿತು. ಸೋಶಿಯಲ್ ಮೀಡಿಯಾದಲ್ಲಿ ಮದುವೆ ಫೋಟೋಗಳು ಸಖತ್ ವೈರಲ್ ಆದವು. ಫೋಟೋ ನೋಡಿದ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅನೇಕ ಮೀಮ್ಸ್ (Ravindar Chandrasekaran Memes) ಹರಿದಾಡುತ್ತಿವೆ. ಎಲ್ಲದರಲ್ಲೂ ರವೀಂದರ್ ಚಂದ್ರಶೇಖರನ್ ಅವರಿಗೆ ಅವಮಾನ ಮಾಡಲಾಗಿದೆ. ಇದು ಮಹಾಲಕ್ಷ್ಮಿ ಅವರ ಗಮನಕ್ಕೂ ಬಂದಿದೆ. ಹಾಗಾಗಿ ಇನ್ಸ್ಟಾಗ್ರಾಮ್ನಲ್ಲಿ ಲೈವ್ ಬಂದಿರುವ ಅವರು ‘ನನ್ನ ಗಂಡನಿಗೆ ಅವಮಾನ ಮಾಡಬೇಡಿ’ ಎಂದು ಮನವಿ ಮಾಡಿಕೊಂಡಿದ್ದಾರೆ. ಯಾವ ವ್ಯಕ್ತಿಯನ್ನೂ ಹೀಯಾಳಿಸಬಾರದು ಎಂದು ಮಹಾಲಕ್ಷ್ಮಿ ಹೇಳಿದ್ದಾರೆ.
ಮಹಾಲಕ್ಷ್ಮಿ ಹಾಗೂ ರವೀಂದರ್ ಚಂದ್ರಶೇಖರನ್ ಅವರಿಗೆ ಇದು ಎರಡನೇ ಮದುವೆ. ಇಬ್ಬರೂ ಪರಸ್ಪರ ಕೈ ಹಿಡಿಯುವ ಮೂಲಕ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ. ರವೀಂದರ್ ಅವರು ಹೆಚ್ಚು ದಪ್ಪ ಇದ್ದಾರೆ ಎಂಬ ಕಾರಣಕ್ಕೆ ಅವರನ್ನು ಒಂದು ವರ್ಗದ ನೆಟ್ಟಿಗರು ಟ್ರೋಲ್ ಮಾಡುತ್ತಿರುವುದು ಬೇಸರದ ಸಂಗತಿ. ಈ ದಂಪತಿ ಹಂಚಿಕೊಂಡಿರುವ ಫೋಟೋಗಳಿಗೆ ಬಹುತೇಕ ನೆಗೆಟಿವ್ ಕಮೆಂಟ್ಗಳು ಬರುತ್ತಿವೆ.
ಮಹಾಲಕ್ಷ್ಮಿ ಮತ್ತು ರವೀಂದರ್ ಚಂದ್ರಶೇಖರನ್ ಅವರು ಪರಸ್ಪರ ಪ್ರೀತಿಸುತ್ತಿದ್ದರು ಎಂಬ ವಿಚಾರ ಯಾರಿಗೂ ತಿಳಿದಿರಲಿಲ್ಲ. ಏಕಾಏಕಿ ಮದುವೆ ಆಗುವ ಮೂಲಕ ಅವರಿಬ್ಬರು ಸರ್ಪ್ರೈಸ್ ನೀಡಿದ್ದಾರೆ. ಮಹಾಲಕ್ಷ್ಮಿ ಅವರಿಗೆ 32 ವರ್ಷ ವಯಸ್ಸು. 38ರ ಪ್ರಾಯದ ರವೀಂದರ್ ಚಂದ್ರಶೇಖರ್ ಜತೆ ಅವರ ಕಲ್ಯಾಣ ನೆರವೇರಿದೆ. ಈಗ ಅವರು ಖಾಸಗಿ ವಿಮಾನದಲ್ಲಿ ಹನಿಮೂನ್ಗೆ ತೆರಳಿದ್ದಾರೆ ಎಂಬ ಬಗ್ಗೆಯೂ ಸುದ್ದಿ ಹರಿದಾಡುತ್ತಿದೆ. ಆದರೆ ‘ನಾವು ಹೋಗಿದ್ದು ಹನಿಮೂನ್ಗೆ ಅಲ್ಲ. ದೇವಸ್ಥಾನಕ್ಕೆ ಹೋಗಿದ್ವಿ’ ಎಂದು ರವೀಂದರ್ ಚಂದ್ರಶೇಖರನ್ ಹೇಳಿದ್ದಾರೆ.
ಪತ್ನಿ ಮಹಾಲಕ್ಷ್ಮಿಗೆ ರವೀಂದರ್ ಚಂದ್ರಶೇಖರ್ ಅವರು ದುಬಾರಿ ಗಿಫ್ಟ್ಗಳನ್ನು ನೀಡಿದ್ದಾರೆ ಎಂಬ ಕುರಿತು ಗುಸುಗುಸು ಕೇಳಿಬರುತ್ತಿದೆ. ಕೋಟ್ಯಂತರ ರೂಪಾಯಿ ಬೆಲೆಬಾಳುವ ಆಭರಣ, ಸೀರೆ, ಬಂಗಲೆಯನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ ಎಂದು ಕೆಲವು ಕಡೆ ಸುದ್ದಿ ಬಿತ್ತರ ಆಗಿದೆ. ಆದರೆ ಈ ವಿಚಾರಗಳ ಬಗ್ಗೆ ಮಹಾಲಕ್ಷ್ಮಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
‘ಫಸ್ಟ್ಲುಕ್’ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ಮಹಾಲಕ್ಷ್ಮಿ ನಟಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಸಕ್ರಿಯರಾಗಿದ್ದಾರೆ. ಪತಿಯ ಜೊತೆ ಇರುವ ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿದ್ದಾರೆ. ಮನಸ್ಸಿಗೆ ಬಂದಂತೆ ಟ್ರೋಲ್ ಮಾಡುವವರ ಬಗ್ಗೆ ಅವರು ಹೆಚ್ಚು ತಲೆ ಕೆಡಿಸಿಕೊಂಡಿಲ್ಲ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.