AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡಿ ವಿಚಾರಣೆಗೆ ಹಾಜರಿ ಹಾಕಲ್ಲ ಮಹೇಶ್ ಬಾಬು; ಕಾರಣ ಇಲ್ಲಿದೆ

ಮಹೇಶ್ ಬಾಬು ಅವರನ್ನು ಸಾಯಿ ಸೂರ್ಯ ಡೆವಲಪರ್ಸ್ ಮತ್ತು ಸುರಾನ ಗ್ರೂಪ್‌ನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ವಿಚಾರಣೆಗೆ ಕರೆಯಲಾಗಿದೆ. ಆದರೆ, ಚಿತ್ರೀಕರಣದ ಕಾರಣದಿಂದಾಗಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಅವರು ಇಡಿಗೆ ಪತ್ರ ಬರೆದಿದ್ದಾರೆ. ಮಹೇಶ್ ಬಾಬು ಅವರು ತನಿಖೆಗೆ ಬೇರೆ ದಿನಾಂಕವನ್ನು ಕೋರಿದ್ದಾರೆ.

ಇಡಿ ವಿಚಾರಣೆಗೆ ಹಾಜರಿ ಹಾಕಲ್ಲ ಮಹೇಶ್ ಬಾಬು; ಕಾರಣ ಇಲ್ಲಿದೆ
ಮಹೇಶ್ ಬಾಬು
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Apr 28, 2025 | 8:13 AM

Share

ಮಹೇಶ್ ಬಾಬು (Mahesh Babu) ಅವರು ಪ್ರಮುಖ ರಿಯಲ್ ಎಸ್ಟೇಟ್ ಕಂಪನಿಗಳಾದ ಸಾಯಿ ಸೂರ್ಯ ಡೆವಲಪರ್ಸ್ ಮತ್ತು ಸುರಾನ ಗ್ರೂಪ್‌ನ ಪ್ರಚಾರದಲ್ಲಿ ಭಾಗಿ ಆಗಿದ್ದರು. ಇದಕ್ಕಾಗಿ ಅವರು 5.90 ಕೋಟಿ ರೂ. ಸಂಭಾವನೆ ಪಡೆದದಿದ್ದರು. ಅಕ್ರಮ ಹಣ ವರ್ಗಾವಣೆಯಲ್ಲಿ ತೊಡಗಿರುವ ಈ ಕಂಪನಿಗಳಲ್ಲಿ ಹೂಡಿಕೆ ಮಾಡುವಂತೆ ಜನರನ್ನು ಪ್ರಭಾವಿಸಿದ್ದಾರೆ ಎಂಬ ಆರೋಪ ಅವರ ಮೇಲೆ ಇದೆ. ಸೋಮವಾರ (ಏಪ್ರಿಲ್ 28) ವಿಚಾರಣೆಗೆ ಹಾಜರಾಗಬೇಕೆಂದು ಇಡಿ (ಜಾರಿ ನಿರ್ದೇಶನಾಲಯ) ನೋಟಿಸ್‌ನಲ್ಲಿ ತಿಳಿಸಿದೆ. ಆದಾಗ್ಯೂ, ಜಾರಿ ನಿರ್ದೇಶನಾಲಯ ಹೊರಡಿಸಿದ ನೋಟಿಸ್‌ಗಳ ಪ್ರಕಾರ, ಮಹೇಶ್ ಬಾಬು ಸೋಮವಾರ ಬೆಳಿಗ್ಗೆ 10:30 ಕ್ಕೆ ಬಶೀರ್‌ಬಾಗ್‌ನಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ, ಶೂಟಿಂಗ್ ವೇಳಾಪಟ್ಟಿಯಿಂದಾಗಿ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಅವರು ಭಾನುವಾರ ಇಡಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಸೋಮವಾರ ಪೂರ್ವ ನಿಗದಿತ ಚಿತ್ರೀಕರಣವಿರುವುದರಿಂದ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಮಹೇಶ್ ಬಾಬು ಇಡಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಮಹೇಶ್ ಬಾಬು ಅವರು ಪ್ರಸ್ತುತ ಸಿನಿಮಾ ಚಿತ್ರೀಕರಣದಲ್ಲಿ ನಿರತರಾಗಿರುವುದರಿಂದ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ತನಿಖೆಗೆ ಬೇರೆ ದಿನಾಂಕ ನಿಗದಿಪಡಿಸುವಂತೆ ಮಹೇಶ್ ಬಾಬು ಇಡಿ ಅಧಿಕಾರಿಗಳನ್ನು ಕೋರಿದ್ದಾರೆ ಎಂದು ತೋರುತ್ತದೆ.

ಮಹೇಶ್ ಬಾಬು ಅವರು ಸದ್ಯ ರಾಜಮೌಳಿ ನಿರ್ದೇಶನದ ಚಿತ್ರದಲ್ಲಿ ಬ್ಯುಸಿ ಇದ್ದಾರೆ. ವಿವಿಧ ಹಂತಗಳಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಈ ಸಿನಿಮಾ ಶೂಟ್​​ಗೆ ಮೊದಲೇ ಎಲ್ಲವೂ ನಿರ್ಧರಿತವಾಗಿರುತ್ತದೆ. ಅಲ್ಲದೆ, ಹಲವು ಕಲಾವಿದರ ಕಾಲ್​ಶೀಟ್ ಕೂಡ ಪಡೆಯಲಾಗುತ್ತದೆ. ಈ ಕಾರಣದಿಂದಲೇ ಮಹೇಶ್ ಬಾಬು ಅವರು ಈ ರೀತಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ
Image
ಉಗ್ರರ ಉದ್ದೇಶ ಹಾಳು ಮಾಡಲು ಕಾಶ್ಮೀರಕ್ಕೆ ಹೋದ ನಟ ಅತುಲ್ ಕುಲಕರ್ಣಿ
Image
ನಾನಿಗೆ ಕನ್ನಡ ಪಾಠ ಮಾಡಿದ ಶ್ರೀನಿಧಿ ಶೆಟ್ಟಿ; ಎಷ್ಟು ಕ್ಯೂಟ್ ನೋಡಿ
Image
ಮುಂಜಾನೆ ಎದ್ದು ತಮ್ಮದೇ ಮೂತ್ರ ಕುಡಿಯುತ್ತಾರೆ ನಟ ಪರೇಶ್ ರಾವಲ್
Image
20 ವರ್ಷಗಳ ಪ್ರಯತ್ನದ ಬಳಿಕ ಕೊನೆಗೂ ಸಿಕ್ತು ‘3 ಇಡಿಯಟ್ಸ್’ ಶಾಲೆಗೆ ಮಾನ್ಯತೆ

ಇದನ್ನೂ ಓದಿ: ಮಹೇಶ್ ಬಾಬುಗೆ ಇಡಿ ನೋಟಿಸ್; ಖ್ಯಾತ ನಟನಿಗೆ ಸಂಕಷ್ಟ

ಕಂಪನಿಗಳಾದ ಸಾಯಿ ಸೂರ್ಯ ಡೆವಲಪರ್ಸ್ ಮತ್ತು ಸುರಾನ ಗ್ರೂಪ್​ನ ಪ್ರಚಾರದಲ್ಲಿ ಮಹೇಶ್ ಬಾಬು ಭಾಗಿ ಆಗಿದ್ದರು. ಅವರ ಕುಟುಂಬ ಕೂಡ ಭಾಗಿ ಆಗಿತ್ತು. ಇದಕ್ಕಾಗಿ ಅವರು ಕೋಟಿ ಕೋಟಿ ಹಣ ಪಡೆದಿದ್ದರು. ಆದರೆ, ಫ್ರಾಡ್ ಕಂಪನಿ ಪ್ರಚಾರದಲ್ಲಿ ಅವರು ಭಾಗಿ ಆಗಿದ್ದೇಕೆ ಎಂಬುದು ಇಡಿ ಪ್ರಶ್ನೆ. ಇದಕ್ಕಾಗಿ ಉತ್ತರಿಸಲು ಅವರು ರೆಡಿ ಆಗಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು