
ಮಹೇಶ್ ಬಾಬು (Mahesh Babu) ಅವರು ಪ್ರಮುಖ ರಿಯಲ್ ಎಸ್ಟೇಟ್ ಕಂಪನಿಗಳಾದ ಸಾಯಿ ಸೂರ್ಯ ಡೆವಲಪರ್ಸ್ ಮತ್ತು ಸುರಾನ ಗ್ರೂಪ್‌ನ ಪ್ರಚಾರದಲ್ಲಿ ಭಾಗಿ ಆಗಿದ್ದರು. ಇದಕ್ಕಾಗಿ ಅವರು 5.90 ಕೋಟಿ ರೂ. ಸಂಭಾವನೆ ಪಡೆದದಿದ್ದರು. ಅಕ್ರಮ ಹಣ ವರ್ಗಾವಣೆಯಲ್ಲಿ ತೊಡಗಿರುವ ಈ ಕಂಪನಿಗಳಲ್ಲಿ ಹೂಡಿಕೆ ಮಾಡುವಂತೆ ಜನರನ್ನು ಪ್ರಭಾವಿಸಿದ್ದಾರೆ ಎಂಬ ಆರೋಪ ಅವರ ಮೇಲೆ ಇದೆ. ಸೋಮವಾರ (ಏಪ್ರಿಲ್ 28) ವಿಚಾರಣೆಗೆ ಹಾಜರಾಗಬೇಕೆಂದು ಇಡಿ (ಜಾರಿ ನಿರ್ದೇಶನಾಲಯ) ನೋಟಿಸ್‌ನಲ್ಲಿ ತಿಳಿಸಿದೆ. ಆದಾಗ್ಯೂ, ಜಾರಿ ನಿರ್ದೇಶನಾಲಯ ಹೊರಡಿಸಿದ ನೋಟಿಸ್‌ಗಳ ಪ್ರಕಾರ, ಮಹೇಶ್ ಬಾಬು ಸೋಮವಾರ ಬೆಳಿಗ್ಗೆ 10:30 ಕ್ಕೆ ಬಶೀರ್‌ಬಾಗ್‌ನಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ, ಶೂಟಿಂಗ್ ವೇಳಾಪಟ್ಟಿಯಿಂದಾಗಿ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಅವರು ಭಾನುವಾರ ಇಡಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಸೋಮವಾರ ಪೂರ್ವ ನಿಗದಿತ ಚಿತ್ರೀಕರಣವಿರುವುದರಿಂದ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಮಹೇಶ್ ಬಾಬು ಇಡಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಮಹೇಶ್ ಬಾಬು ಅವರು ಪ್ರಸ್ತುತ ಸಿನಿಮಾ ಚಿತ್ರೀಕರಣದಲ್ಲಿ ನಿರತರಾಗಿರುವುದರಿಂದ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ತನಿಖೆಗೆ ಬೇರೆ ದಿನಾಂಕ ನಿಗದಿಪಡಿಸುವಂತೆ ಮಹೇಶ್ ಬಾಬು ಇಡಿ ಅಧಿಕಾರಿಗಳನ್ನು ಕೋರಿದ್ದಾರೆ ಎಂದು ತೋರುತ್ತದೆ.
ಮಹೇಶ್ ಬಾಬು ಅವರು ಸದ್ಯ ರಾಜಮೌಳಿ ನಿರ್ದೇಶನದ ಚಿತ್ರದಲ್ಲಿ ಬ್ಯುಸಿ ಇದ್ದಾರೆ. ವಿವಿಧ ಹಂತಗಳಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಈ ಸಿನಿಮಾ ಶೂಟ್ಗೆ ಮೊದಲೇ ಎಲ್ಲವೂ ನಿರ್ಧರಿತವಾಗಿರುತ್ತದೆ. ಅಲ್ಲದೆ, ಹಲವು ಕಲಾವಿದರ ಕಾಲ್ಶೀಟ್ ಕೂಡ ಪಡೆಯಲಾಗುತ್ತದೆ. ಈ ಕಾರಣದಿಂದಲೇ ಮಹೇಶ್ ಬಾಬು ಅವರು ಈ ರೀತಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಮಹೇಶ್ ಬಾಬುಗೆ ಇಡಿ ನೋಟಿಸ್; ಖ್ಯಾತ ನಟನಿಗೆ ಸಂಕಷ್ಟ
ಕಂಪನಿಗಳಾದ ಸಾಯಿ ಸೂರ್ಯ ಡೆವಲಪರ್ಸ್ ಮತ್ತು ಸುರಾನ ಗ್ರೂಪ್‌ನ ಪ್ರಚಾರದಲ್ಲಿ ಮಹೇಶ್ ಬಾಬು ಭಾಗಿ ಆಗಿದ್ದರು. ಅವರ ಕುಟುಂಬ ಕೂಡ ಭಾಗಿ ಆಗಿತ್ತು. ಇದಕ್ಕಾಗಿ ಅವರು ಕೋಟಿ ಕೋಟಿ ಹಣ ಪಡೆದಿದ್ದರು. ಆದರೆ, ಫ್ರಾಡ್ ಕಂಪನಿ ಪ್ರಚಾರದಲ್ಲಿ ಅವರು ಭಾಗಿ ಆಗಿದ್ದೇಕೆ ಎಂಬುದು ಇಡಿ ಪ್ರಶ್ನೆ. ಇದಕ್ಕಾಗಿ ಉತ್ತರಿಸಲು ಅವರು ರೆಡಿ ಆಗಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.