AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahesh Babu: ಮಹೇಶ್ ಬಾಬುಗೆ ಇಡಿ ನೋಟಿಸ್; ಖ್ಯಾತ ನಟನಿಗೆ ಸಂಕಷ್ಟ

Mahesh Babu ED Notice: ಟಾಲಿವುಡ್ ನಟ ಮಹೇಶ್ ಬಾಬು ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ಜಾರಿ ಮಾಡಿದೆ. ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 28 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. 3.4 ಕೋಟಿ ರೂಪಾಯಿಗಳ ಪ್ರಚಾರದ ಹಣ ಪಡೆದ ಆರೋಪ ಮೇಲೆ ತನಿಖೆ ನಡೆಯುತ್ತಿದೆ.

Mahesh Babu: ಮಹೇಶ್ ಬಾಬುಗೆ ಇಡಿ ನೋಟಿಸ್; ಖ್ಯಾತ ನಟನಿಗೆ ಸಂಕಷ್ಟ
ಮಹೇಶ್ ಬಾಬು
Follow us
ರಾಜೇಶ್ ದುಗ್ಗುಮನೆ
|

Updated on:Apr 22, 2025 | 8:45 AM

ಟಾಲಿವುಡ್​ನ ಸ್ಟಾರ್ ನಟ ಮಹೇಶ್ ಬಾಬುಗೆ (Mahesh Babu) ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ಕೊಟ್ಟಿದೆ. ಇದರಿಂದ ಸ್ಟಾರ್ ಹೀರೋಗೆ ತೊಂದರೆ ಎದುರಾಗಿದೆ. ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಪ್ರಕರಣದಲ್ಲಿ ಇದೇ 28ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ತಿಳಿಸಲಾಗಿದೆ. ಈ ಸಂಸ್ಥೆಯ ಪ್ರಚಾರಕ್ಕಾಗಿ ಮಹೇಶ್ ಬಾಬು ಅವರು 5.9ಕೋಟಿ ರೂ.ಗಳನ್ನು ತೆಗೆದುಕೊಂಡಿದ್ದರು ಎನ್ನಲಾಗಿದೆ.

ಏಪ್ರಿಲ್ 16ರಂದು ಇಡಿ ಅಧಿಕಾರಿಗಳು ಹೈದರಾಬಾದ್‌ನಲ್ಲಿ ಶೋಧ ನಡೆಸಿದ್ದರು. ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಕಚೇರಿಗಳು ಹಾಗೂ ಈ ಕಂಪನಿಗಳ ಮುಖ್ಯಸ್ಥರ ಮನೆಗಳ ಮೇಲೆ ದಾಳಿ ನಡೆಸಿತ್ತು. ಅದಾದ ನಂತರ ಈ ಬೆಳವಣಿಗೆ ನಡೆದಿದೆ. ಏಪ್ರಿಲ್ 28ರ ಬೆಳಿಗ್ಗೆ 10:30ಕ್ಕೆ ಮಹೇಶ್ ಬಾಬು ಹೈದರಾಬಾದ್​ನಲ್ಲಿ ವಿಚಾರಣೆಗೆ ಹಾರಜಿ ಹಾಕಬೇಕಿದೆ. ಮಹೇಶ್ ಬಾಬು ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಸಾಯಿಸೂರ್ಯ ಡೆವಲಪರ್ಸ್ ಜಾಹೀರಾತಿನಲ್ಲಿ ನಟಿಸಿದ್ದರು. ಮಹೇಶ್ ಬಾಬು ಪ್ರಸ್ತುತ ರಾಜಮೌಳಿ ಅವರ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈ ಚಿತ್ರದ ಚಿತ್ರೀಕರಣ ವೇಗವಾಗಿ ನಡೆಯುತ್ತಿದೆ. ಇದರ ಮಧ್ಯೆ ಅವರಿಗೆ ತೊಂದರೆ ಎದುರಾಗಿದೆ.

ಸುರಾನ್ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್​ನಲ್ಲಿ ಸಾಕಷ್ಟು ಅಕ್ರಮಗಳು ನಡೆದಿರೋದು ಬೆಳಕಿಗೆ ಬಂದಿದೆ. ರಿಯಲ್ ಎಸ್ಟೇಟ್ ಡೀಲಿಂಗ್​ ವೇಳೆ ಈ ಅಕ್ರಮ ಎಸೆಗಲಾಗಿದೆ. ಇದರಲ್ಲಿ ಮಹೇಶ್ ಬಾಬು ಅವರ ಶಾಮೀಲಾಗಿದ್ದಾರಾ ಎಂಬ ಬಗ್ಗೆ ತನಿಖೆ ನಡೆಯಲಿದೆ. ಮಹೇಶ್ ಬಾಬು ಅವರು ಇದರ ಪ್ರಚಾರ ಮಾಡಿದ್ದರಿಂದ ಅನೇಕರು ಇದರಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿರುವ ಸಾಧ್ಯತೆ ಇರುತ್ತದೆ. ಸದ್ಯ ಮಹೇಶ್ ಬಾಬು ಅವರ ಶಾಮೀಲು ನೇರವಾಗಿ ಇಲ್ಲದೆ ಇದ್ದರು, ಅವರು ಪಡೆದ ಜಾಹೀರಾತಿನ ಹಣದ ಬಗ್ಗೆ ತನಿಖೆ ನಡೆಯಲಿದೆ.

ಇದನ್ನೂ ಓದಿ
Image
ಶ್ರೀದೇವಿನ ಕನ್ನಡಕ್ಕೆ ತರಲು ಹೋಗಿದ್ದ ರವಿಚಂದ್ರನ್; ಆಮೇಲೆ ಆಗಿದ್ದೇನು?
Image
ಚಾಕು ಇರಿತ ಪ್ರಕರಣ ನಡೆದ 3 ತಿಂಗಳಿಗೆ ಹೊಸ ಮನೆ ಖರೀದಿಸಿದ ಸೈಫ್ ಅಲಿ ಖಾನ್
Image
‘ನಾನು ಮಾತ್ರ ಅಲ್ಲಾರೀ’; ಸ್ಟಾರ್ ಕಲಾವಿದರ ಡ್ರಗ್ಸ್ ಪುರಾಣ ಬಿಚ್ಚಿಟ್ಟ ಶೈನ್
Image
ಈಗ ಪತ್ನಿಯೇ ಸರ್ವಸ್ವ; ವಿಜಯಲಕ್ಷ್ಮೀ ಜೊತೆ ಭರನಾಟ್ಯ ನೋಡಲು ಬಂದ ದರ್ಶನ್

ಇದನ್ನೂ ಓದಿ:ಜಾಹೀರಾತು ನಟನೆಗೆ ಮಹೇಶ್ ಬಾಬು ಪುತ್ರಿ ಪಡೆಯುವ ಸಂಭಾವನೆ ಎಷ್ಟು ಕೋಟಿ? 

ಮಹೇಶ್ ಬಾಬು ವಿವಾದಗಳಿಂದ ದೂರ

ಮಹೇಶ್ ಬಾಬು ಅವರು ಪಕ್ಕಾ ಫ್ಯಾಮಿಲಿಮ್ಯಾನ್. ಅವರು ವಿವಾದಗಳಿಂದ ಸದಾ ದೂರವೇ ಇರಲು ಬಯಸುತ್ತಾರೆ. ಈ ಕಾರಣಕ್ಕೆ ಸಿನಿಮಾ ಸೆಟ್ ಬಿಟ್ಟರೆ ಅವರು ಮತ್ತೆಲ್ಲೂ ಕಾಣಿಸಿಕೊಳ್ಳುವುದಿಲ್ಲ. ಸಾರ್ವಜನಿಕವಾಗಿ ಅವರು ಪಾರ್ಟಿ ಮಾಡೋದಿಲ್ಲ. ಈಗ ಬ್ರ್ಯಾಂಡ್​ಗಳ ಪ್ರಚಾರದಿಂದ ಅವರಿಗೆ ಸಮಸ್ಯೆ ಆಗಿದೆ. ಇದರಲ್ಲಿ ಅವರು ನೇರವಾಗಿ ಭಾಗಿ ಆಗದೇ ಇದ್ದರೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:30 am, Tue, 22 April 25

ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ
ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ
Daily Devotional: ಹನುಮಂತನಿಗೆ ಯಾವ ರೀತಿಯ ಹಾರ ಹಾಕಿದರೆ ಏನು ಫಲ?
Daily Devotional: ಹನುಮಂತನಿಗೆ ಯಾವ ರೀತಿಯ ಹಾರ ಹಾಕಿದರೆ ಏನು ಫಲ?
ಮೀನ ರಾಶಿಯವರಿಗೆ ಸ್ಥಾನ ಪಲ್ಲಟ, ಅವಿವಾಹಿತರಿಗೆ ವಿವಾಹ ಯೋಗ ಸಾಧ್ಯತೆ
ಮೀನ ರಾಶಿಯವರಿಗೆ ಸ್ಥಾನ ಪಲ್ಲಟ, ಅವಿವಾಹಿತರಿಗೆ ವಿವಾಹ ಯೋಗ ಸಾಧ್ಯತೆ
ತುಮಕೂರು ರೈಲು ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ
ತುಮಕೂರು ರೈಲು ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ
ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಮಾಡಿದ ಉಪ್ಪಿ ಮತ್ತು ಕುಟುಂಬ
ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಮಾಡಿದ ಉಪ್ಪಿ ಮತ್ತು ಕುಟುಂಬ