
ಟಾಲಿವುಡ್ನ ಸ್ಟಾರ್ ನಟ ಮಹೇಶ್ ಬಾಬುಗೆ (Mahesh Babu) ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ಕೊಟ್ಟಿದೆ. ಇದರಿಂದ ಸ್ಟಾರ್ ಹೀರೋಗೆ ತೊಂದರೆ ಎದುರಾಗಿದೆ. ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಪ್ರಕರಣದಲ್ಲಿ ಇದೇ 28ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ. ಈ ಸಂಸ್ಥೆಯ ಪ್ರಚಾರಕ್ಕಾಗಿ ಮಹೇಶ್ ಬಾಬು ಅವರು 5.9ಕೋಟಿ ರೂ.ಗಳನ್ನು ತೆಗೆದುಕೊಂಡಿದ್ದರು ಎನ್ನಲಾಗಿದೆ.
ಏಪ್ರಿಲ್ 16ರಂದು ಇಡಿ ಅಧಿಕಾರಿಗಳು ಹೈದರಾಬಾದ್‌ನಲ್ಲಿ ಶೋಧ ನಡೆಸಿದ್ದರು. ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಕಚೇರಿಗಳು ಹಾಗೂ ಈ ಕಂಪನಿಗಳ ಮುಖ್ಯಸ್ಥರ ಮನೆಗಳ ಮೇಲೆ ದಾಳಿ ನಡೆಸಿತ್ತು. ಅದಾದ ನಂತರ ಈ ಬೆಳವಣಿಗೆ ನಡೆದಿದೆ. ಏಪ್ರಿಲ್ 28ರ ಬೆಳಿಗ್ಗೆ 10:30ಕ್ಕೆ ಮಹೇಶ್ ಬಾಬು ಹೈದರಾಬಾದ್‌ನಲ್ಲಿ ವಿಚಾರಣೆಗೆ ಹಾರಜಿ ಹಾಕಬೇಕಿದೆ. ಮಹೇಶ್ ಬಾಬು ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಸಾಯಿಸೂರ್ಯ ಡೆವಲಪರ್ಸ್ ಜಾಹೀರಾತಿನಲ್ಲಿ ನಟಿಸಿದ್ದರು. ಮಹೇಶ್ ಬಾಬು ಪ್ರಸ್ತುತ ರಾಜಮೌಳಿ ಅವರ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈ ಚಿತ್ರದ ಚಿತ್ರೀಕರಣ ವೇಗವಾಗಿ ನಡೆಯುತ್ತಿದೆ. ಇದರ ಮಧ್ಯೆ ಅವರಿಗೆ ತೊಂದರೆ ಎದುರಾಗಿದೆ.
ಸುರಾನ್ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ನಲ್ಲಿ ಸಾಕಷ್ಟು ಅಕ್ರಮಗಳು ನಡೆದಿರೋದು ಬೆಳಕಿಗೆ ಬಂದಿದೆ. ರಿಯಲ್ ಎಸ್ಟೇಟ್ ಡೀಲಿಂಗ್ ವೇಳೆ ಈ ಅಕ್ರಮ ಎಸೆಗಲಾಗಿದೆ. ಇದರಲ್ಲಿ ಮಹೇಶ್ ಬಾಬು ಅವರ ಶಾಮೀಲಾಗಿದ್ದಾರಾ ಎಂಬ ಬಗ್ಗೆ ತನಿಖೆ ನಡೆಯಲಿದೆ. ಮಹೇಶ್ ಬಾಬು ಅವರು ಇದರ ಪ್ರಚಾರ ಮಾಡಿದ್ದರಿಂದ ಅನೇಕರು ಇದರಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿರುವ ಸಾಧ್ಯತೆ ಇರುತ್ತದೆ. ಸದ್ಯ ಮಹೇಶ್ ಬಾಬು ಅವರ ಶಾಮೀಲು ನೇರವಾಗಿ ಇಲ್ಲದೆ ಇದ್ದರು, ಅವರು ಪಡೆದ ಜಾಹೀರಾತಿನ ಹಣದ ಬಗ್ಗೆ ತನಿಖೆ ನಡೆಯಲಿದೆ.
ಇದನ್ನೂ ಓದಿ:ಜಾಹೀರಾತು ನಟನೆಗೆ ಮಹೇಶ್ ಬಾಬು ಪುತ್ರಿ ಪಡೆಯುವ ಸಂಭಾವನೆ ಎಷ್ಟು ಕೋಟಿ?
ಮಹೇಶ್ ಬಾಬು ಅವರು ಪಕ್ಕಾ ಫ್ಯಾಮಿಲಿಮ್ಯಾನ್. ಅವರು ವಿವಾದಗಳಿಂದ ಸದಾ ದೂರವೇ ಇರಲು ಬಯಸುತ್ತಾರೆ. ಈ ಕಾರಣಕ್ಕೆ ಸಿನಿಮಾ ಸೆಟ್ ಬಿಟ್ಟರೆ ಅವರು ಮತ್ತೆಲ್ಲೂ ಕಾಣಿಸಿಕೊಳ್ಳುವುದಿಲ್ಲ. ಸಾರ್ವಜನಿಕವಾಗಿ ಅವರು ಪಾರ್ಟಿ ಮಾಡೋದಿಲ್ಲ. ಈಗ ಬ್ರ್ಯಾಂಡ್ಗಳ ಪ್ರಚಾರದಿಂದ ಅವರಿಗೆ ಸಮಸ್ಯೆ ಆಗಿದೆ. ಇದರಲ್ಲಿ ಅವರು ನೇರವಾಗಿ ಭಾಗಿ ಆಗದೇ ಇದ್ದರೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 8:30 am, Tue, 22 April 25