ಮಸ್ತ್​ ಮನರಂಜನೆ ನೀಡಲಿದ್ದಾರೆ ಮಹೇಶ್​ ಬಾಬು-ಕೀರ್ತಿ ಸುರೇಶ್​; ಈ ಫೋಟೋದಲ್ಲಿದೆ ಝಲಕ್​

Ma Ma Mahesha Song: ‘ಸರ್ಕಾರು ವಾರಿ ಪಾಟ’ ಸಿನಿಮಾದ ‘ಮಾ ಮಾ ಮಹೇಶ​..’ ಹಾಡು ಒಂದು ಡ್ಯಾನ್ಸ್​ ನಂಬರ್​ ಆಗಿರಲಿದೆ. ಇದು ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನೀಡಲಿದೆ ಎಂದು ನಿರೀಕ್ಷಿಸಲಾಗುತ್ತಿದೆ.

ಮಸ್ತ್​ ಮನರಂಜನೆ ನೀಡಲಿದ್ದಾರೆ ಮಹೇಶ್​ ಬಾಬು-ಕೀರ್ತಿ ಸುರೇಶ್​; ಈ ಫೋಟೋದಲ್ಲಿದೆ ಝಲಕ್​
ಮಹೇಶ್ ಬಾಬು, ಕೀರ್ತಿ ಸುರೇಶ್
Follow us
| Updated By: ಮದನ್​ ಕುಮಾರ್​

Updated on:May 06, 2022 | 12:58 PM

​ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಸರ್ಕಾರು ವಾರಿ ಪಾಟ’ (Sarkaru Vaari Paata) ಸಿನಿಮಾ ಕೂಡ ಪ್ರಮುಖವಾಗಿದೆ. ಈ ಚಿತ್ರ ಈಗ ಬಿಡುಗಡೆಗೆ ಸಜ್ಜಾಗಿದೆ. ಪ್ರಚಾರ ಕಾರ್ಯದಲ್ಲಿ ಚಿತ್ರತಂಡ ನಿರತವಾಗಿದೆ. ಮಹೇಶ್​ ಬಾಬು (Mahesh Babu) ನಾಯಕನಾಗಿ ನಟಿಸಿರುವ ‘ಸರ್ಕಾರು ವಾರಿ ಪಾಟ’ ಸಿನಿಮಾ ಹಲವು ಕಾರಣಗಳಿಂದಾಗಿ ನಿರೀಕ್ಷೆ ಹುಟ್ಟುಹಾಕಿದೆ. ಈಗಾಗಲೇ ಬಿಡುಗಡೆ ಆಗಿರುವ ಟ್ರೇಲರ್​ ಕಂಡು ಅಭಿಮಾನಿಗಳು ವಾವ್​ ಎಂದಿದ್ದಾರೆ. ಅದಕ್ಕೂ ಮುನ್ನ ಬಂದಿದ್ದ ‘ಕಲಾವತಿ..’ ಸಾಂಗ್​ ಕೂಡ ಫ್ಯಾನ್ಸ್​ ಮೆಚ್ಚುಗೆಗೆ ಪಾತ್ರವಾಗಿತ್ತು. ಈಗ ಇನ್ನೊಂದು ಹಾಡಿನ ಬಿಡುಗಡೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದಕ್ಕಾಗಿ ದಿನಾಂಕ ಕೂಡ ನಿಗದಿ ಆಗಿದೆ. ಮೇ 7ರಂದು ‘ಸರ್ಕಾರು ವಾರಿ ಪಾಟ’ ಸಿನಿಮಾ ‘ಮಾ ಮಾ ಮಹೇಶ..’ ಸಾಂಗ್ (Ma Ma Mahesha Song)​ ರಿಲೀಸ್​ ಆಗಲಿದೆ. ಈ ಹಾಡಿನ ಮೂಲಕ ಮಹೇಶ್​ ಬಾಬು ಮತ್ತು ನಟಿ ಕೀರ್ತಿ ಸುರೇಶ್​ ಅವರು ಮಸ್ತ್​ ಮನರಂಜನೆ ನೀಡಲಿದ್ದಾರೆ. ಅದರ ಝಲಕ್​ ತೋರಿಸಲು ಒಂದು ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಇದನ್ನು ಕಂಡು ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ‘ಮಾ ಮಾ ಮಹೇಶ್​..’ ಹಾಡಿಗಾಗಿ ಎಲ್ಲರೂ ಕಾಯುತ್ತಿದ್ದಾರೆ.

ತಮನ್​ ಎಸ್​. ಅವರ ಸಂಗೀತ ನಿರ್ದೇಶನದಲ್ಲಿ ‘ಸರ್ಕಾರು ವಾರಿ ಪಾಟ’ ಸಿನಿಮಾದ ಹಾಡುಗಳು ಮೂಡಿಬಂದಿವೆ. ಮಹೇಶ್​ ಬಾಬು ಮತ್ತು ಕೀರ್ತಿ ಸುರೇಶ್​ ಅವರು ಅತ್ಯುತ್ತಮ ಡಾನ್ಸರ್​ಗಳು ಎಂಬುದರಲ್ಲಿ ಅನುಮಾನವೇ ಇಲ್ಲ. ಇಬ್ಬರ ಕಾಂಬಿನೇಷನ್​ ಬಗ್ಗೆ ಜನರಲ್ಲಿ ಹೈಪ್​ ಕ್ರಿಯೇಟ್​ ಆಗಿದೆ. ‘ಮಾ ಮಾ ಮಹೇಶ​..’ ಒಂದು ಡ್ಯಾನ್ಸ್​ ನಂಬರ್​ ಆಗಿರಲಿದ್ದು, ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನೀಡಲಿದೆ ಎಂದು ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ
Image
9ನೇ ವಯಸ್ಸಿಗೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಮಹೇಶ್​ ಬಾಬು ಮಗಳು ಸಿತಾರಾ; ಮಸ್ತ್ ಡ್ಯಾನ್ಸ್​
Image
ಹೃದಯವಂತ ಮಹೇಶ್​ ಬಾಬು; 125 ಮಕ್ಕಳ ಹಾರ್ಟ್​ ಸರ್ಜರಿಗೆ ನೆರವಾಗುತ್ತಿರುವ ಸ್ಟಾರ್​ ನಟ
Image
‘ಕಲಾವತಿ..’ ಹಾಡಿನಿಂದ ಹೆಚ್ಚಿತು ಕೀರ್ತಿ ಸುರೇಶ್​ ಖದರ್​; ‘ಮಹಾನಟಿ’ಗೆ ಭರ್ಜರಿ ಡಿಮ್ಯಾಂಡ್​
Image
ಯಾವ ಚಿತ್ರವೂ ಗೆಲ್ಲುತ್ತಿಲ್ಲ, ಆದ್ರೂ ಈ ನಟಿಗೆ ಸಿಕ್ತಿದೆ ಒಳ್ಳೆಯ ಆಫರ್​; ಇಲ್ಲಿದೆ ಕೀರ್ತಿ ಸುರೇಶ್​ ಸೀಕ್ರೇಟ್​

‘ಸರ್ಕಾರು ವಾರಿ ಪಾಟ’ ಚಿತ್ರಕ್ಕೆ ಪೈರಸಿ ಭಯ:

ತೆಲುಗು ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ‘ಮೈತ್ರಿ ಮೂವೀ ಮೇಕರ್ಸ್​’ ಬ್ಯಾನರ್​ ಮೂಲಕ ‘ಸರ್ಕಾರು ವಾರಿ ಪಾಟ’ ಸಿನಿಮಾ ನಿರ್ಮಾಣ ಆಗಿದೆ. ಈ ಚಿತ್ರಕ್ಕೆ ಪರಶುರಾಮ್​ ನಿರ್ದೇಶನ ಮಾಡಿದ್ದಾರೆ. ಮೇ 2ರಂದು ಟ್ರೇಲರ್​ ಬಿಡುಗಡೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಅದಕ್ಕೂ ಮುನ್ನ ಟ್ರೇಲರ್​ನ ಕೆಲವು ಶಾಟ್ಸ್​ ಲೀಕ್​ ಆದವು. ಅದಕ್ಕೂ ಮುನ್ನ ‘ಕಲಾವತಿ..’ ಸಾಂಗ್ ಕೂಡ ಸೋರಿಕೆ ಆಗಿತ್ತು. ನಿರ್ಮಾಣ ಸಂಸ್ಥೆಯ ಬೇಜವಾಬ್ದಾರಿಯಿಂದಾಗಿಯೇ ಈ ರೀತಿ ದೃಶ್ಯಗಳು ಲೀಕ್​ ಆಗಿವೆ ಎಂದು ಫ್ಯಾನ್ಸ್​ ಆರೋಪಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ನಿರ್ಮಾಪಕರು ಎಚ್ಚರಿಕೆ ವಹಿಸಬೇಕಿದೆ. ಈ ಚಿತ್ರಕ್ಕೆ ದೊಡ್ಡ ಓಪನಿಂಗ್​ ಸಿಗುವ ನಿರೀಕ್ಷೆ ಇದೆ. ಒಂದು ವೇಳೆ ಸಿನಿಮಾ ರಿಲೀಸ್​ ಆದ ಬಳಿಕ ಇದೇ ರೀತಿ ಪೈರಸಿ ಆದರೆ ಗಲ್ಲಾ ಪೆಟ್ಟಿಗೆ ಕಲೆಕ್ಷನ್​ಗೆ ಕಂಟಕ ಎದುರಾಗಲಿದೆ. ಅದಕ್ಕೂ ಮುನ್ನ ನಿರ್ಮಾಪಕರು ಪೈರಸಿ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕು ಎಂದು ಮಹೇಶ್​ ಬಾಬು ಅಭಿಮಾನಿಗಳು ಕಿವಿಮಾತು ಹೇಳುತ್ತಿದ್ದಾರೆ.

ಸದ್ಯ ಯೂಟ್ಯೂಬ್​ನಲ್ಲಿ ಈ ಚಿತ್ರದ ಟ್ರೇಲರ್​ ಮೂರು ಕೋಟಿಗೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಮಹೇಶ್​ ಬಾಬು ಅಭಿಮಾನಿಗಳಿಗೆ ಈ ಸಿನಿಮಾ ಮೇಲೆ ಎಷ್ಟು ನಿರೀಕ್ಷೆ ಇದೆ ಎಂಬುದಕ್ಕೆ ಈ ಸಂಖ್ಯೆಯೇ ಸಾಕ್ಷಿ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:57 pm, Fri, 6 May 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ