‘ಪುಷ್ಪ’ ಚಿತ್ರವನ್ನು ಹಾಡಿ ಹೊಗಳಿದ ಮಹೇಶ್​ ಬಾಬು; ಈ ಪರಿ ಪ್ರಶಂಸೆಗೆ ಅಲ್ಲು ಅರ್ಜುನ್​ ಪ್ರತಿಕ್ರಿಯೆ ಏನು?

ಮಹೇಶ್​ ಬಾಬು ಅವರಿಗೆ ‘ಪುಷ್ಪ’ ಸಿನಿಮಾ ಸಖತ್​ ಇಷ್ಟ ಆಗಿದೆ. ಈ ಸಿನಿಮಾದಲ್ಲಿನ ಹಲವು ಅಂಶಗಳನ್ನು ಅವರು ಮೆಚ್ಚಿಕೊಂಡಿದ್ದಾರೆ.

‘ಪುಷ್ಪ’ ಚಿತ್ರವನ್ನು ಹಾಡಿ ಹೊಗಳಿದ ಮಹೇಶ್​ ಬಾಬು; ಈ ಪರಿ ಪ್ರಶಂಸೆಗೆ ಅಲ್ಲು ಅರ್ಜುನ್​ ಪ್ರತಿಕ್ರಿಯೆ ಏನು?
ಮಹೇಶ್​ ಬಾಬು, ಅಲ್ಲು ಅರ್ಜುನ್
Follow us
TV9 Web
| Updated By: ಮದನ್​ ಕುಮಾರ್​

Updated on:Jan 07, 2022 | 1:17 PM

ಕಡು ಬರಗಾಲದಲ್ಲೂ ಬಂಗಾರದ ಬೆಳೆ ತೆಗೆದ ಸಿನಿಮಾ ಎಂದರೆ ಅದು ‘ಪುಷ್ಪ’. ಕೊರೊನಾ 3ನೇ ಹಾವಳಿ ಶುರು ಆಗುವುದಕ್ಕಿಂತ ಮುನ್ನವೇ ಈ ಸಿನಿಮಾ ಗೆದ್ದು ಬೀಗಿದೆ. ವಿಶ್ವಾದ್ಯಂತ 300 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿರುವುದು ಈ ಚಿತ್ರದ ಹೆಗ್ಗಳಿಕೆ. ಅಲ್ಲು ಅರ್ಜುನ್​ (Allu Arjun) ನಟನೆಯ ಈ ಸಿನಿಮಾವನ್ನು ಪ್ರೇಕ್ಷಕರು ಮಾತ್ರವಲ್ಲದೇ ಸೂಪರ್​ ಸ್ಟಾರ್​ ಕಲಾವಿದರು ಕೂಡ ಮೆಚ್ಚಿಕೊಂಡಿದ್ದಾರೆ. ನಟ ಮಹೇಶ್​ ಬಾಬು (Mahesh Babu) ಅವರು ಇತ್ತೀಚೆಗೆ ‘ಪುಷ್ಪ’ ಚಿತ್ರ ವೀಕ್ಷಿಸಿದ್ದಾರೆ. ಬಳಿಕ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ. ಇಂಥ ಸ್ಟಾರ್​ ಕಲಾವಿದರಿಂದ ಮೆಚ್ಚುಗೆ ಸಿಕ್ಕಿರುವುದಕ್ಕೆ ‘ಪುಷ್ಪ’ (Pushpa Movie) ತಂಡದವರು ಫುಲ್​ ಖುಷ್​ ಆಗಿದ್ದಾರೆ. ಈ ಚಿತ್ರಕ್ಕೆ ಸುಕುಮಾರ್ (Sukumar)​ ನಿರ್ದೇಶನ ಮಾಡಿದ್ದು, ರಶ್ಮಿಕಾ ಮಂದಣ್ಣ (Rashmika Mandanna) ನಾಯಕಿಯಾಗಿ ನಟಿಸಿದ್ದಾರೆ.

ಮಹೇಶ್​ ಬಾಬು ಅವರಿಗೆ ‘ಪುಷ್ಪ’ ಸಿನಿಮಾ ಸಖತ್​ ಇಷ್ಟ ಆಗಿದೆ. ಈ ಸಿನಿಮಾದಲ್ಲಿನ ಹಲವು ಅಂಶಗಳನ್ನು ಅವರು ಮೆಚ್ಚಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್​​ ಮಾಡಿರುವ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ‘ಅಲ್ಲು ಅರ್ಜುನ್​ ನಟನೆಯ ಪುಷ್ಪ ಚಿತ್ರ ಅಚ್ಚರಿ ಮೂಡಿಸುತ್ತದೆ, ಒರಿಜಿನಲ್​ ಮತ್ತು ಸೆನ್ಸೇಷನಲ್​ ಆಗಿದೆ. ನಟನೆ ಅದ್ಭುತವಾಗಿದೆ. ಸುಕುಮಾರ್​ ನಿರ್ದೇಶನದ ಸಿನಿಮಾಗಳು ಪ್ರಾಮಾಣಿಕವಾಗಿ ಮತ್ತು ರಾ ಆಗಿರುತ್ತವೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಬೇರೆ ಎಲ್ಲ ಸಿನಿಮಾಗಳಿಗಿಂತ ಇದು ಭಿನ್ನವಾಗಿದೆ’ ಎಂದು ಮಹೇಶ್​ ಬಾಬು ಟ್ವೀಟ್​ ಮಾಡಿದ್ದಾರೆ.

ಮಹೇಶ್​ ಬಾಬು ನೀಡಿದ ಮೆಚ್ಚುಗೆಗೆ ಪ್ರತಿಯಾಗಿ ಅಲ್ಲು ಅರ್ಜುನ್​ ಧನ್ಯವಾದ ತಿಳಿಸಿದ್ದಾರೆ. ‘ಮಹೇಶ್​ ಬಾಬು ಅವರೇ ನಿಮಗೆ ತುಂಬ ಧನ್ಯವಾಗಳು. ನಟನೆ ಮತ್ತು ಎಲ್ಲರ ಕೆಲಸವನ್ನು ನೀವು ಇಷ್ಟಪಟ್ಟಿದ್ದೀರಿ. ಹೃತ್ಪೂರ್ವಕವಾದ ಈ ಹೊಗಳಿಕೆಯನ್ನು ಕೇಳಿ ಧನ್ಯನಾದೆ’ ಎಂದು ಅಲ್ಲು ಅರ್ಜುನ್​ ಟ್ವೀಟ್ ಮಾಡಿದ್ದಾರೆ.

ಮಹೇಶ್​ ಬಾಬುಗೆ ಕೊರೊನಾ ಪಾಸಿಟಿವ್​:

ನಟ ಮಹೇಶ್​ ಬಾಬು ಅವರಿಗೆ ಕೊವಿಡ್ ಪಾಸಿಟಿವ್​ ಆಗಿದೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಂಡ ಹೊರತಾಗಿಯೂ ಕೊವಿಡ್​ ಪಾಸಿಟಿವ್​ ಆಗಿದೆ ಎಂದು ಅವರು ಬೇಸರ ಹೊರ ಹಾಕಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರುವ ಅವರು, ‘ನನ್ನ ಎಲ್ಲಾ ಅಭಿಮಾನಿಗಳಿಗೆ ಮತ್ತು ಹಿತೈಷಿಗಳಿಗೆ ಈ ಪತ್ರ. ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ ಸಹ, ನನಗೆ ಕೊವಿಡ್​ 19 ಅಂಟಿದೆ. ನಾನು ಮನೆಯಲ್ಲಿ ಕ್ವಾರಂಟೈನ್​ ಆಗಿದ್ದೇನೆ. ವೈದ್ಯರ ಸೂಚನೆ ಹಾಗೂ ಮಾರ್ಗದರ್ಶನವನ್ನು ಅನುಸರಿಸುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:

‘ಬೇರೆಯವರ ಚಿತ್ರದಲ್ಲಿ ನಾನು 2ನೇ ಹೀರೋ​ ಆಗಲ್ಲ’; ಖಡಕ್​ ಉತ್ತರ ಕೊಟ್ಟ ಅಲ್ಲು ಅರ್ಜುನ್​

85 ಲಕ್ಷ ರೂ. ಕಾರಿನ ಬಗ್ಗೆ ಮಾತಾಡಿ ಕಣ್ಣೀರು ಹಾಕಿದ ಅಲ್ಲು ಅರ್ಜುನ್​; ವೇದಿಕೆಯಲ್ಲಿ ನಡೆದಿದ್ದೇನು?

Published On - 1:15 pm, Fri, 7 January 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ