Mahesh Babu: ಪತ್ನಿ ನಮ್ರತಾ ಜತೆ ಬಿಲ್​ ಗೇಟ್ಸ್​ ಭೇಟಿ ಮಾಡಿದ ಮಹೇಶ್​ ಬಾಬು; ಫೋಟೋ ವೈರಲ್​

Mahesh Babu | Bill Gates: ಮಹೇಶ್​ ಬಾಬು ಮತ್ತು ಬಿಲ್​ ಗೇಟ್ಸ್​ ಭೇಟಿ ಆಗಿರುವ ಕ್ಷಣದ ಫೋಟೋ ಸಖತ್​ ವೈರಲ್​ ಆಗಿದೆ. ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

Mahesh Babu: ಪತ್ನಿ ನಮ್ರತಾ ಜತೆ ಬಿಲ್​ ಗೇಟ್ಸ್​ ಭೇಟಿ ಮಾಡಿದ ಮಹೇಶ್​ ಬಾಬು; ಫೋಟೋ ವೈರಲ್​
ಮಹೇಶ್​ ಬಾಬು, ಬಿಲ್​ ಗೇಟ್ಸ್​, ನಮ್ರತಾ ಶಿರೋಡ್ಕರ್​
Follow us
TV9 Web
| Updated By: ಮದನ್​ ಕುಮಾರ್​

Updated on:Jun 29, 2022 | 11:59 AM

ಟಾಲಿವುಡ್​ ನಟ ಮಹೇಶ್​ ಬಾಬು (Mahesh Babu) ಅವರು ಕುಟುಂಬಕ್ಕೆ ಹೆಚ್ಚಿನ ಸಮಯ ಮೀಸಲಿಡುತ್ತಾರೆ. ಸಿನಿಮಾ ಕೆಲಸಗಳ ಬಿಡುವಿನಲ್ಲಿ ಅವರು ಮಕ್ಕಳು ಮತ್ತು ಪತ್ನಿ ಜೊತೆ ಕಾಲ ಕಳೆಯುತ್ತಾರೆ. ‘ಸರ್ಕಾರು ವಾರಿ ಪಾಟ’ ಚಿತ್ರದ ಯಶಸ್ಸಿನ ನಂತರ ಅವರು ವಿದೇಶಿ ಪ್ರವಾಸಕ್ಕೆ ತೆರಳಿದ್ದಾರೆ. ಅಚ್ಚರಿ ಎಂದರೆ, ಅಲ್ಲಿನ ಗಣ್ಯ ವ್ಯಕ್ತಿಗಳನ್ನು ಮಹೇಶ್​ ಬಾಬು ಭೇಟಿ ಮಾಡುತ್ತಿದ್ದಾರೆ. ಹೌದು, ಜಗತ್ತಿನ ಖ್ಯಾತ ಉದ್ಯಮಿ ಬಿಲ್​ ಗೇಟ್ಸ್​ (Bill Gates) ಅವರನ್ನು ಮಹೇಶ್​ ಬಾಬು ಭೇಟಿ ಮಾಡಿದ್ದಾರೆ. ಅವರ ಜೊತೆ ಪತ್ನಿ ನಮ್ರತಾ ಶಿರೋಡ್ಕರ್​ (Namrata Shirodkar) ಕೂಡ ಸಾಥ್​ ನೀಡಿದ್ದಾರೆ. ಈ ಸಂದರ್ಭದ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಇದನ್ನು ಕಂಡ ಎಲ್ಲರೂ ವಾವ್​ ಎನ್ನುತ್ತಿದ್ದಾರೆ. ಮಹೇಶ್​ ಬಾಬು ಅಭಿಮಾನಿಗಳ ವಲಯದಲ್ಲಿ ಈ ಫೋಟೋ ಸಖತ್​ ವೈರಲ್​ ಆಗಿದೆ.

ಬುಧವಾರ (ಜೂನ್​ 29) ಬೆಳಗ್ಗೆ ಮಹೇಶ್​ ಬಾಬು ಅವರು ಈ ಸ್ಪೆಷಲ್​ ಫೋಟೋವನ್ನು ಶೇರ್​ ಮಾಡಿಕೊಂಡಿದ್ದಾರೆ. ‘ಮಾನ್ಯ ಬಿಲ್​ ಗೇಟ್ಸ್​ ಅವರನ್ನು ಭೇಟಿ ಆಗುವ ಅವಕಾಶ ಸಿಕ್ಕಿತು. ಈ ಪ್ರಪಂಚ ಕಂಡ ಶ್ರೇಷ್ಠ ವ್ಯಕ್ತಿಗಳಲ್ಲಿ ಇವರೂ ಒಬ್ಬರು. ಆದರೂ ತುಂಬ ವಿನಯವಂತ ವ್ಯಕ್ತಿ. ನಿಜಕ್ಕೂ ಇವರು ಸ್ಫೂರ್ತಿ’ ಎಂದು ಮಹೇಶ್​ ಬಾಬು ಬರೆದುಕೊಂಡಿದ್ದಾರೆ. ಈ ಪೋಸ್ಟ್​ಗೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
‘ಸಮಂತಾ ಆಂಟಿ ನನ್ನ ಬೆಸ್ಟ್​ ಫ್ರೆಂಡ್​’ ಎಂದ ಮಹೇಶ್​ ಬಾಬು ಪುತ್ರಿ ಸಿತಾರಾ; ವಿಡಿಯೋ ವೈರಲ್​
Image
Sarkaru Vaari Paata Twitter review: ‘ಸರ್ಕಾರು ವಾರಿ ಪಾಟ’ ಚಿತ್ರ ನೋಡಿ ಮಹೇಶ್​ ಬಾಬು ಫ್ಯಾನ್ಸ್​ ಏನಂದ್ರು?
Image
ಹಿಂದಿ ಚಿತ್ರರಂಗದ ಎಂಟ್ರಿ ಬಗ್ಗೆ ಮಹೇಶ್​ ಬಾಬುಗೆ ಪದೇಪದೇ ಪ್ರಶ್ನೆ; ಅವರು ಕೊಟ್ಟ ಖಡಕ್ ಉತ್ತರ ಹೇಗಿತ್ತು ನೋಡಿ
Image
‘ಹೆಚ್ಚೆಚ್ಚು ಹೆಮ್ಮೆ ಪಡುವಂತೆ ಮಾಡುತ್ತಿದ್ದೀಯ’; ಮಗಳು ಸಿತಾರಾ ಬಗ್ಗೆ ಮಹೇಶ್​ ಬಾಬು ವಿಶೇಷ ಮಾತು

ಮಹೇಶ್​ ಬಾಬು ಅವರು ಬಿಲ್​ ಗೇಟ್ಸ್​ ಅವರನ್ನು ಭೇಟಿ ಮಾಡಿದ್ದರ ಹಿಂದೆ ಯಾವ ಕಾರಣ ಇದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇದೊಂದು ಸಾಮಾನ್ಯ ಭೇಟಿ ಎಂದಷ್ಟೇ ಸದ್ಯಕ್ಕೆ ಹೇಳಲಾಗುತ್ತಿದೆ. ಮಹೇಶ್​ ಬಾಬು ಪುತ್ರಿ ಸಿತಾರಾ ಕೂಡ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾಳೆ. ವಿದೇಶಿ ಪ್ರವಾಸದ ಅನೇಕ ಫೋಟೋಗಳನ್ನು ಆಕೆ ಕೂಡ ಹಂಚಿಕೊಳ್ಳುತ್ತಿದ್ದಾಳೆ.

ಪ್ರತಿ ಸಿನಿಮಾದ ಬಿಡುಗಡೆಯ ನಂತರವೂ ಮಹೇಶ್​ ಬಾಬು ಅವರು ಕುಟುಂಬದ ಜೊತೆ ಪ್ರವಾಸಕ್ಕೆ ತೆರಳುತ್ತಾರೆ. ಈ ಬಾರಿ ‘ಸರ್ಕಾರು ವಾರಿ ಪಾಟ’ ಸಿನಿಮಾ ಹಿಟ್​ ಆಗಿರುವುದರಿಂದ ಅವರು ಖುಷಿಯಲ್ಲಿದ್ದಾರೆ. ವಿದೇಶದಿಂದ ಮರಳಿದ ಬಳಿಕ ಅವರು ಮುಂದಿನ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ. ನಿರ್ದೇಶಕ ರಾಜಮೌಳಿ ಅವರ ಜೊತೆ ಮಹೇಶ್​ ಬಾಬು ಕೈ ಜೋಡಿಸಲಿದ್ದು, ಆ ಪ್ರಾಜೆಕ್ಟ್​ ಮೇಲೆ ಸಖತ್​ ನಿರೀಕ್ಷೆ ಸೃಷ್ಟಿ ಆಗಿದೆ.

ಇದನ್ನೂ ಓದಿ: ಎರಡೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದ ‘ಸರ್ಕಾರು ವಾರಿ ಪಾಟ’; ಮಹೇಶ್​ ಬಾಬು ಸಿನಿಮಾ ದಾಖಲೆ

ಮಹೇಶ್​ ಬಾಬು ಮಾತಿಗೆ ಬೆಂಬಲ ನೀಡಿದ ಕಂಗನಾ; ಬಾಲಿವುಡ್ ವರ್ಸಸ್​​ ಸೌತ್​ ಚರ್ಚೆ ಇನ್ನಷ್ಟು ಜೋರು

Published On - 11:59 am, Wed, 29 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ