AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indira Devi Passes Away: ಮಹೇಶ್​ ಬಾಬು ತಾಯಿ ಇಂದಿರಾ ದೇವಿ ನಿಧನ; ‘ಪ್ರಿನ್ಸ್​’ ಕುಟುಂಬದಲ್ಲಿ ಶೋಕ

Mahesh Babu Mother Indira Devi: ಬುಧವಾರ (ಸೆ.28) ನಸುಕಿನ 4 ಗಂಟೆಗೆ ಇಂದಿರಾ ದೇವಿ ನಿಧನರಾದರು ಎಂದು ಮಹೇಶ್​ ಬಾಬು ಕುಟುಂಬದವರು ತಿಳಿಸಿದ್ದಾರೆ. ಅವರ ಅಗಲಿಕೆಗೆ ಎಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ.

Indira Devi Passes Away: ಮಹೇಶ್​ ಬಾಬು ತಾಯಿ ಇಂದಿರಾ ದೇವಿ ನಿಧನ; ‘ಪ್ರಿನ್ಸ್​’ ಕುಟುಂಬದಲ್ಲಿ ಶೋಕ
ಮಹೇಶ್ ಬಾಬು, ಇಂದಿರಾ ದೇವಿ
TV9 Web
| Edited By: |

Updated on:Sep 28, 2022 | 9:15 AM

Share

ತೆಲುಗಿನ ಖ್ಯಾತ ನಟ ಮಹೇಶ್​ ಬಾಬು (Mahesh Babu) ಅವರ ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಅವರ ತಾಯಿ ಇಂದಿರಾ ದೇವಿ (Indira Devi) ನಿಧನರಾಗಿದ್ದಾರೆ. ಈ ಸುದ್ದಿ ಕೇಳಿ ಮಹೇಶ್​ ಬಾಬು ಅಭಿಮಾನಿಗಳಿಗೆ ತೀವ್ರ ನೋವಾಗಿದೆ. ಕಳೆದ ಕೆಲವು ದಿನಗಳಿಂದ ಇಂದಿರಾ ದೇವಿ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಹೈದರಾಬಾದ್​ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಇಹಲೋಕ ತ್ಯಜಿಸಿದ್ದಾರೆ. ಬುಧವಾರ (ಸೆ.28) ನಸುಕಿನ 4 ಗಂಟೆಗೆ ಇಂದಿರಾ ದೇವಿ ನಿಧನರಾದರು (Indira Devi Death) ಎಂದು ಮಹೇಶ್​ ಬಾಬು ಕುಟುಂಬದವರು ತಿಳಿಸಿದ್ದಾರೆ.

ಮಹೇಶ್​ ಬಾಬು ಅವರದ್ದು ಸಿನಿಮಾ ಹಿನ್ನೆಲೆಯ ಕುಟುಂಬ. ಮಹೇಶ್​ ಬಾಬು ತಂದೆ ಕೃಷ್ಣ ಅವರು ಟಾಲಿವುಡ್​ನಲ್ಲಿ ಸೂಪರ್ ಸ್ಟಾರ್​ ಆಗಿ ಮಿಂಚಿದ್ದರು. ಅವರ ಪುತ್ರ ರಮೇಶ್​ ಬಾಬು ಅವರು ಈ ವರ್ಷ ಆರಂಭದಲ್ಲಿ ಕೊನೆಯುಸಿರು ಎಳೆದಿದರು. ಈಗ ಕೃಷ್ಣ ಪತ್ನಿ ಇಂದಿರಾ ದೇವಿ ನಿಧನದಿಂದ ಇಡೀ ಕುಟುಂಬದಲ್ಲಿ ಶೋಕ ಆವರಿಸಿದೆ. ಆಪ್ತರು, ಅಭಿಮಾನಿಗಳು, ಸೆಲೆಬ್ರಿಟಿಗಳು ಮಹೇಶ್​ ಬಾಬು ಕುಟುಂಬಕ್ಕೆ ಸಾಂತ್ವನ ಹೇಳುತ್ತಿದ್ದಾರೆ.

ಇದನ್ನೂ ಓದಿ
Image
‘ಸಮಂತಾ ಆಂಟಿ ನನ್ನ ಬೆಸ್ಟ್​ ಫ್ರೆಂಡ್​’ ಎಂದ ಮಹೇಶ್​ ಬಾಬು ಪುತ್ರಿ ಸಿತಾರಾ; ವಿಡಿಯೋ ವೈರಲ್​
Image
Sarkaru Vaari Paata Twitter review: ‘ಸರ್ಕಾರು ವಾರಿ ಪಾಟ’ ಚಿತ್ರ ನೋಡಿ ಮಹೇಶ್​ ಬಾಬು ಫ್ಯಾನ್ಸ್​ ಏನಂದ್ರು?
Image
ಹಿಂದಿ ಚಿತ್ರರಂಗದ ಎಂಟ್ರಿ ಬಗ್ಗೆ ಮಹೇಶ್​ ಬಾಬುಗೆ ಪದೇಪದೇ ಪ್ರಶ್ನೆ; ಅವರು ಕೊಟ್ಟ ಖಡಕ್ ಉತ್ತರ ಹೇಗಿತ್ತು ನೋಡಿ
Image
‘ಹೆಚ್ಚೆಚ್ಚು ಹೆಮ್ಮೆ ಪಡುವಂತೆ ಮಾಡುತ್ತಿದ್ದೀಯ’; ಮಗಳು ಸಿತಾರಾ ಬಗ್ಗೆ ಮಹೇಶ್​ ಬಾಬು ವಿಶೇಷ ಮಾತು

ಇಂದಿರಾ ದೇವಿ ಅವರ ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆಗಾಗಿ ಸಕಲ ಸಿದ್ಧತೆ ನಡೆಯುತ್ತಿದೆ. ಅಭಿಮಾನಿಗಳು ಅಂತಿಮ ನಮನ ಸಲ್ಲಿಸಲು ಅನುಕೂಲ ಆಗಲಿ ಎಂದು ಇಂದಿರಾ ದೇವಿ ಅವರ ಮೃತದೇಹವನ್ನು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಪದ್ಮಾಲಯ ಸ್ಡುಡಿಯೋಸ್​ನಲ್ಲಿ​ ಇರಿಸಲಾಗುವುದು. ನಂತರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಮಹೇಶ್​ ಬಾಬು ಅವರು ಕುಟುಂಬಕ್ಕೆ ಹೆಚ್ಚು ಸಮಯ ಮೀಸಲಿಡುತ್ತಾರೆ. ಕೆಲವೇ ದಿನಗಳ ಹಿಂದೆ ಅವರು ನಿರ್ದೇಶಕ ತ್ರಿವಿಕ್ರಮ್​ ಶ್ರೀನಿವಾಸ್​ ಜೊತೆ ಹೊಸ ಚಿತ್ರದ ಶೂಟಿಂಗ್​ ಆರಂಭಿಸಿದ್ದರು. ಮಹೇಶ್​ ಬಾಬು ಅವರ ಹೊಸ ಲುಕ್​ ಕೂಡ ವೈರಲ್​ ಆಗಿತ್ತು. ಶೂಟಿಂಗ್​ ಸೆಟ್​ನಲ್ಲಿ ಅವರು ಕಾಣಿಸಿಕೊಂಡ ಫೋಟೋ ಗಮನ ಸೆಳೆದಿತ್ತು. ಈಗ ತಾಯಿಯ ನಿಧನದಿಂದ ಅವರಿಗೆ ತೀವ್ರ ನೋವುಂಟಾಗಿದೆ. ಹಾಗಾಗಿ ಒಂದಷ್ಟು ದಿನಗಳ ಕಾಲ ಸಿನಿಮಾ ಚಟುವಟಿಕೆಗಳಿಗೆ ಅವರು ಬ್ರೇಕ್​ ನೀಡಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:46 am, Wed, 28 September 22

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?