ವಿಫಲವಾಯ್ತಾ ರಾಜಮೌಳಿ ಪ್ರಯತ್ನ? ಮಹೇಶ್ ಬಾಬು ಲುಕ್ ಬಹಿರಂಗ
ನಟ ಮಹೇಶ್ ಬಾಬು ಹಾಗೂ ನಿರ್ದೇಶಕ ಎಸ್ಎಸ್ ರಾಜಮೌಳಿ ಅವರು ತಮ್ಮ ತಂಡದ ಜತೆ ದುಬೈಗೆ ಹೋಗಿದ್ದರು. ಅಲ್ಲಿ ‘SSMB 29’ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸ ಪೂರ್ಣಗೊಳಿಸಲಾಗಿದೆ. ಪಾತ್ರಕ್ಕಾಗಿ ಮಹೇಶ್ ಬಾಬು ವಿಶೇಷ ತರಬೇತಿ ಪಡೆದುಕೊಂಡಿದ್ದಾರೆ. ಅಲ್ಲಿಂದ ಅವರು ಹಿಂದಿರುಗಿ ಹೈದರಾಬಾದ್ಗೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಅವರ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಮಹೇಶ್ ಬಾಬು ಗೆಟಪ್ ಗಮನ ಸೆಳೆಯುತ್ತಿದೆ.
ಎಸ್ಎಸ್ ರಾಜಮೌಳಿ (Rajamouli) ಮತ್ತು ಮಹೇಶ್ ಬಾಬು ಅವರು ಜೊತೆಯಾಗಿ ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಈ ಸಿನಿಮಾದ ಬಗ್ಗೆ ಹೊಸ ಅಪ್ಡೇಟ್ ತಿಳಿಯಲು ಫ್ಯಾನ್ಸ್ ಕಾದಿದ್ದಾರೆ. ಇದು ಮಹೇಶ್ ಬಾಬು ನಟನೆಯ 29ನೇ ಸಿನಿಮಾ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ನಿಗದಿ ಆಗಿಲ್ಲ. ಸದ್ಯಕ್ಕೆ ‘SSMB 29’ ಎಂದು ಕರೆಯಲಾಗುತ್ತಿದೆ. ಈ ಸಿನಿಮಾದಲ್ಲಿ ಮಹೇಶ್ ಬಾಬು (Mahesh Babu) ಅವರಿಗೆ ಡಿಫರೆಂಟ್ ಲುಕ್ ಇರಲಿದೆ. ಆ ಲುಕ್ ಬಹಿರಂಗ ಆಗಬಾರದು ಎಂಬುದು ರಾಜಮೌಳಿ ಅವರ ಉದ್ದೇಶ ಆಗಿತ್ತು. ಅದಕ್ಕಾಗಿ ಅವರು ಸಾಕಷ್ಟು ಪ್ರಯತ್ನ ಮಾಡಿದ್ದರು. ಆದರೆ ಈಗಾಗಲೇ ಮಹೇಶ್ ಬಾಬು ಅವರು ಹೊಸ ಗೆಟಪ್ ಬಹಿರಂಗ ಆಗಿದೆ. ಹೊಸ ವಿಡಿಯೋ ವೈರಲ್ ಆಗಿದೆ.
ಮಹೇಶ್ ಬಾಬು ಮತ್ತು ರಾಜಮೌಳಿ ಅವರು ತಮ್ಮ ತಂಡದ ಜೊತೆ ದುಬೈಗೆ ತೆರಳಿದ್ದರು. ಅಲ್ಲಿ ‘SSMB29’ ಸಿನಿಮಾದ ಪ್ರೀ-ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಲಾಗಿದೆ. ಮಹೇಶ್ ಬಾಬು ಅವರು ವಿಶೇಷ ತರಬೇತಿ ಕೂಡ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಅಲ್ಲಿಂದ ಅವರೀಗ ವಾಪಸ್ ಹೈದರಾಬಾದ್ಗೆ ಬಂದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಮಹೇಶ್ ಬಾಬು ಅವರ ವಿಡಿಯೋ ಸಖತ್ ವೈರಲ್ ಆಗಿದ್ದು, ಅದರಲ್ಲಿನ ಅವರ ಗೆಟಪ್ ಗಮನ ಸೆಳೆಯುತ್ತಿದೆ.
Superstar @urstrulyMahesh 😎 dir @ssrajamouli papped together arrived in Hyderabad from Dubai!!#SSMB29 #MaheshBabu pic.twitter.com/t4WQzAOXdR
— Burri Palem MBFC™ (@BurriPalemMbfc) April 19, 2024
‘SSMB29’ ಸಿನಿಮಾದದಲ್ಲಿ ಮಹೇಶ್ ಅವರಿಗೆ ಉದ್ದ ಕೂದಲಿನ ಗೆಟಪ್ ಇರಲಿದೆ ಎಂಬುದು ಮೇಲ್ನೋಟಕ್ಕೆ ಖಚಿತವಾಗಿದೆ. ಯಾಕೆಂದರೆ, ವಿದೇಶದಿಂದ ಬಂದ ಮಹೇಶ್ ಬಾಬು ಅವರು ಇದೇ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಪಾತ್ರಕ್ಕಾಗಿ ಅವರು ಕೂದಲು ಬೆಳೆಸಿದ್ದಾರೆ. ಒಟ್ಟಿನಲ್ಲಿ ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಇರುವ ನಿರೀಕ್ಷೆ ಡಬಲ್ ಆಗಿದೆ.
ಇದನ್ನೂ ಓದಿ: ರಾಜಮೌಳಿ ಸೂಪರ್ ಡ್ಯಾನ್ಸರ್ ಎಂಬುದು ನಿಮಗೆ ಗೊತ್ತಾ? ಪತ್ನಿ ಜೊತೆಗಿನ ಡ್ಯಾನ್ಸ್ ವಿಡಿಯೋ ವೈರಲ್
ರಾಜಮೌಳಿ ಅವರ ಸಿನಿಮಾಗಳಲ್ಲಿ ಹೀರೋಗಳಿಗೆ ಡಿಫರೆಂಟ್ ಗೆಟಪ್ ಇರುತ್ತದೆ. ‘ಮಗಧೀರ’, ‘ಬಾಹುಬಲಿ’, ‘ಆರ್ಆರ್ಆರ್’ ಮುಂತಾದ ಸಿನಿಮಾಗಳೇ ಅದಕ್ಕೆ ಸಾಕ್ಷಿ. ಈಗ ಮಹೇಶ್ ಬಾಬು ಕೂಡ ಹೊಸ ಗೆಟಪ್ನಲ್ಲಿ ಅಭಿಮಾನಿಗಳ ಎದುರು ಬರಲಿದ್ದಾರೆ. ಈ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ನಿರ್ಮಾಣ ಮಾಡಲು ಪ್ಲ್ಯಾನ್ ನಡೆದಿದೆ. ‘ಆರ್ಆರ್ಆರ್’ ಬಳಿಕ ರಾಜಮೌಳಿ ಅವರಿಗೆ ವಿಶ್ವಾದ್ಯಂತ ಜನಪ್ರಿಯತೆ ಸಿಕ್ಕಿದೆ. ಹಾಗಾಗಿ ಅವರು ನಿರ್ದೇಶನ ಮಾಡಲಿರುವ ಮುಂದಿನ ಸಿನಿಮಾ ಮೇಲೆ ಹೈಪ್ ಜಾಸ್ತಿ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.