AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪನಿಗಾಗಿ ಪಾಪರಾಜಿ ಕೆಲಸ ಮಾಡಿದ ಮಹೇಶ್ ಬಾಬು ಮಗ ಗೌತಮ್

ಪ್ರತಿ ಸಿನಿಮಾ ತೆರೆಗೆ ಬಂದ ಬಳಿಕ ಮಹೇಶ್ ಬಾಬು ಅವರು ಕುಟುಂಬದ ಜತೆ ವಿದೇಶಕ್ಕೆ ತೆರಳುವುದು ವಾಡಿಕೆ. ಈ ಮೊದಲಿನಿಂದಲೂ ಅವರು ಇದನ್ನು ಮಾಡಿಕೊಂಡು ಬರುತ್ತಿದ್ದಾರೆ. ಈ ಬಾರಿ ಅವರ ಟ್ರಿಪ್​ ಸ್ವಲ್ಪ ಜೋರಾಗಿಯೇ ಇದೆ.

ಅಪ್ಪನಿಗಾಗಿ ಪಾಪರಾಜಿ ಕೆಲಸ ಮಾಡಿದ ಮಹೇಶ್ ಬಾಬು ಮಗ ಗೌತಮ್
ಮಹೇಶ್ ಬಾಬು ಕುಟುಂಬ
TV9 Web
| Edited By: |

Updated on: Aug 02, 2022 | 8:05 PM

Share

ಮಹೇಶ್ ಬಾಬು (Mahesh Babu) ಅವರು ಒಂದರಮೇಲೆ ಒಂದರಂತೆ ಟ್ರಿಪ್​ ಮಾಡುತ್ತಿದ್ದಾರೆ. ‘ಸರ್ಕಾರು ವಾರಿ ಪಾಟ’ ಸಿನಿಮಾ ತೆರೆಕಂಡ ಬಳಿಕ ಜರ್ಮನಿಗೆ ತೆರಳಿದ್ದ ಮಹೇಶ್ ಬಾಬು ಆ್ಯಂಡ್ ಫ್ಯಾಮಿಲಿ ನಂತರ ನ್ಯೂಯಾರ್ಕ್​​ಗೆ ಪ್ರಯಾಣ ಬೆಳೆಸಿತ್ತು. ಈಗ ಮಹೇಶ್ ಬಾಬು ಫ್ಯಾಮಿಲಿ ಸ್ವಿಜರ್​​ಲ್ಯಾಂಡ್​​ನಲ್ಲಿ ಇದ್ದಾರೆ. ಪತ್ನಿ ನಮ್ರತಾ, ಮಗಳು ಸಿತಾರಾ (Sitara Ghattamaneni ) ಹಾಗೂ ಮಗ ಗೌತಮ್ ಜತೆ ಅವರು ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ನಮ್ರತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ನಾನಾ ರೀತಿಯಲ್ಲಿ ಕಮೆಂಟ್​ಗಳು ಬರುತ್ತಿವೆ. ಮಹೇಶ್ ಬಾಬು ಅವರ ಲುಕ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.

ಪ್ರತಿ ಸಿನಿಮಾ ತೆರೆಗೆ ಬಂದ ಬಳಿಕ ಮಹೇಶ್ ಬಾಬು ಅವರು ಕುಟುಂಬದ ಜತೆ ವಿದೇಶಕ್ಕೆ ತೆರಳುವುದು ವಾಡಿಕೆ. ಈ ಮೊದಲಿನಿಂದಲೂ ಅವರು ಇದನ್ನು ಮಾಡಿಕೊಂಡು ಬರುತ್ತಿದ್ದಾರೆ. ಈ ಬಾರಿ ಅವರ ಟ್ರಿಪ್​ ಸ್ವಲ್ಪ ಜೋರಾಗಿಯೇ ಇದೆ. ಹೊಸ ಸಿನಿಮಾ ಕೆಲಸಕ್ಕೂ ಮುನ್ನ ಅವರು ಮೂರನೇ ದೇಶ ಸುತ್ತುತ್ತಿದ್ದಾರೆ.

ಮಹೇಶ್ ಬಾಬು ಹಾಗೂ ಸಿತಾರಾ ರಸ್ತೆಯೊಂದರಲ್ಲಿ ನಿಂತಿದ್ದಾರೆ. ಈ ಫೋಟೋವನ್ನು ಮಹೇಶ್ ಬಾಬು ಅವರ ಮಗ ಗೌತಮ್​ ಕ್ಲಿಕ್ಕಿಸಿದ್ದಾರೆ. ಈ ಫೋಟೋವನ್ನು ಹಂಚಿಕೊಂಡಿರುವ ನಮ್ರತಾ ಅವರು, ‘ನಮ್ಮ ಕುಟುಂಬದ ಪಾಪರಾಜಿ’ ಎಂದು ಬರೆದುಕೊಂಡಿದ್ದಾರೆ. ಸೆಲೆಬ್ರಿಟಿಗಳು ಸಾರ್ವಜನಿಕ ಪ್ರದೇಶಗಳಲ್ಲಿ ಎದುರಾದರೆ ಅವರ ಫೋಟೋ ಕ್ಲಿಕ್ಕಿಸೋಕೆ ಒಂದಷ್ಟು ಮಂದಿ ಸಾಲುಗಟ್ಟಿ ನಿಲ್ಲುತ್ತಾರೆ. ಅವರನ್ನು ಪಾಪರಾಜಿಗಳು ಎಂದು ಕರೆಯಲಾಗುತ್ತದೆ. ಈ ರೀತಿಯಲ್ಲಿ ಕ್ಲಿಕ್ ಮಾಡಿದ ಫೋಟೋಗಳನ್ನು ಪಾಪರಾಜಿಗಳು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಅದೇ ರೀತಿ ಕೆಲಸವನ್ನು ಗೌತಮ್ ಕೂಡ ಮಾಡಿದ್ದಾರೆ. ಈ ಕಾರಣಕ್ಕೆ ಗೌತಮ್​ಗೆ ಪಾಪರಾಜಿ ಎಂಬ ಟ್ಯಾಗ್ ನೀಡಿದ್ದಾರೆ ನಮ್ರತಾ.

ಇದನ್ನೂ ಓದಿ
Image
ಸ್ವಿಜರ್​ಲ್ಯಾಂಡ್​ನಲ್ಲಿ ಕುಟುಂಬದ ಜತೆ ಸಮಯ ಕಳೆದ ಸಿತಾರಾ, ನಮ್ರತಾ; ಮಹೇಶ್ ಬಾಬು ಎಲ್ಲಿ ಎಂದ ಫ್ಯಾನ್ಸ್
Image
‘ಸಮಂತಾ ಆಂಟಿ ನನ್ನ ಬೆಸ್ಟ್​ ಫ್ರೆಂಡ್​’ ಎಂದ ಮಹೇಶ್​ ಬಾಬು ಪುತ್ರಿ ಸಿತಾರಾ; ವಿಡಿಯೋ ವೈರಲ್​
Image
ಹಿಂದಿ ಚಿತ್ರರಂಗದ ಎಂಟ್ರಿ ಬಗ್ಗೆ ಮಹೇಶ್​ ಬಾಬುಗೆ ಪದೇಪದೇ ಪ್ರಶ್ನೆ; ಅವರು ಕೊಟ್ಟ ಖಡಕ್ ಉತ್ತರ ಹೇಗಿತ್ತು ನೋಡಿ
Image
‘ಹೆಚ್ಚೆಚ್ಚು ಹೆಮ್ಮೆ ಪಡುವಂತೆ ಮಾಡುತ್ತಿದ್ದೀಯ’; ಮಗಳು ಸಿತಾರಾ ಬಗ್ಗೆ ಮಹೇಶ್​ ಬಾಬು ವಿಶೇಷ ಮಾತು

ಇದನ್ನೂ ಓದಿ: ಸ್ವಿಜರ್​ಲ್ಯಾಂಡ್​ನಲ್ಲಿ ಕುಟುಂಬದ ಜತೆ ಸಮಯ ಕಳೆದ ಸಿತಾರಾ, ನಮ್ರತಾ; ಮಹೇಶ್ ಬಾಬು ಎಲ್ಲಿ ಎಂದ ಫ್ಯಾನ್ಸ್

ಮಹೇಶ್​ ಬಾಬು ‘ಸರ್ಕಾರು ವಾರಿ ಪಾಟ’ ಚಿತ್ರದ ಗೆಲುವಿನ ಬಳಿಕ ತ್ರಿವಿಕ್ರಂ ಶ್ರೀನಿವಾಸ್ ಜತೆ ಕೈ ಜೋಡಿಸಿದ್ದಾರೆ. ಈ ಚಿತ್ರ ಈಗಾಗಲೇ ಸೆಟ್ಟೇರಿದೆ. ಇತ್ತೀಚೆಗೆ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗಿತ್ತು. ಈ ಸಿನಿಮಾ ತೆರೆಕಂಡ ಬಳಿಕ ಎಸ್​.ಎಸ್​. ರಾಜಮೌಳಿ ಜತೆ ಮಹೇಶ್ ಬಾಬು ಕೈ ಜೋಡಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಈಗಾಗಲೇ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿವೆ.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್