ರಾಜಮೌಳಿ ಸಿನಿಮಾಗಾಗಿ ಸಿಕ್ಸ್​ ಪ್ಯಾಕ್​​ ಮಾಡ್ತಾರೆ ಮಹೇಶ್​ ಬಾಬು; ಇದಕ್ಕೆ ಹಾಲಿವುಡ್​ ನಂಟು

ಸಾಮಾನ್ಯವಾಗಿ ಮಹೇಶ್​ ಬಾಬು ಅವರು ಯಾವುದೇ ಸಿನಿಮಾ ಸಲುವಾಗಿ ಸಿಕ್ಸ್​ ಪ್ಯಾಕ್​ ಮಾಡುವ ಸಾಹಸಕ್ಕೆ ಕೈ ಹಾಕುವವರಲ್ಲ. ಆದರೆ ಈ ಬಾರಿ ಅವರು ರಾಜಮೌಳಿ ನಿರ್ದೇಶನದ ಸಿನಿಮಾಗಾಗಿ ಸಾಕಷ್ಟು ತಯಾರಿ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಹಾಗಾಗಿ ಹೆಚ್ಚು ಆಸಕ್ತಿ ವಹಿಸಿ ಅವರು ವರ್ಕೌಟ್​ ಮಾಡುತ್ತಿದ್ದಾರೆ.

ರಾಜಮೌಳಿ ಸಿನಿಮಾಗಾಗಿ ಸಿಕ್ಸ್​ ಪ್ಯಾಕ್​​ ಮಾಡ್ತಾರೆ ಮಹೇಶ್​ ಬಾಬು; ಇದಕ್ಕೆ ಹಾಲಿವುಡ್​ ನಂಟು
ಮಹೇಶ್​ ಬಾಬು
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on:Oct 13, 2023 | 6:32 AM

ನಿರ್ದೇಶಕ ಎಸ್​ಎಸ್​ ರಾಜಮೌಳಿ (SS Rajamouli) ಅವರು ಯಾವುದೇ ಹೀರೋ ಜೊತೆ ಸಿನಿಮಾ ಮಾಡಿದರೂ ಆ ಹೀರೋಗಳಿಗೆ ಒಂದಷ್ಟು ಷರತ್ತುಗಳನ್ನು ಹಾಕುತ್ತಾರೆ. ತಮ್ಮ ಸಿನಿಮಾದ ಕಥಾನಾಯಕ ಫಿಟ್​ ಆಗಿ ಕಾಣಬೇಕು ಎಂಬುದು ರಾಜಮೌಳಿ ಅವರ ಉದ್ದೇಶ. ಅದಕ್ಕಾಗಿ ಪ್ರಭಾಸ್​, ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​ ಮುಂತಾದ ನಟರು ದೇಹವನ್ನು ಹುರಿಗೊಳಿಸಿಕೊಂಡು ಶೂಟಿಂಗ್​ನಲ್ಲಿ ಭಾಗಿ ಆಗಿದ್ದರು. ಈಗ ಮಹೇಶ್​ ಬಾಬು (Mahesh Babu) ಜೊತೆ ರಾಜಮೌಳಿ ಸಿನಿಮಾ ಮಾಡಲು ಸಕಲ ತಯಾರಿ ಮಾಡಿಕೊಂಡಿದ್ದಾರೆ. ಆ ಸಿನಿಮಾಗಾಗಿ ಮಹೇಶ್​ ಬಾಬು ಅವರು ಸಿಕ್ಸ್​ ಪ್ಯಾಕ್​ (Six Pack) ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಅದಕ್ಕೆ ಈ ಫೋಟೋ ಸಾಕ್ಷಿ ಒದಗಿಸುತ್ತಿದೆ.

ಸಾಮಾನ್ಯವಾಗಿ ಮಹೇಶ್​ ಬಾಬು ಅವರು ಯಾವುದೇ ಸಿನಿಮಾ ಸಲುವಾಗಿ ಸಿಕ್ಸ್​ ಪ್ಯಾಕ್​ ಮಾಡುವ ಸಾಹಸಕ್ಕೆ ಕೈ ಹಾಕುವವರಲ್ಲ. ಆದರೆ ಈ ಬಾರಿ ಅವರು ರಾಜಮೌಳಿ ನಿರ್ದೇಶನದ ಸಿನಿಮಾಗಾಗಿ ಸಾಕಷ್ಟು ತಯಾರಿ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಹಾಗಾಗಿ ಬಹಳ ಆಸಕ್ತಿ ವಹಿಸಿ ಅವರು ವರ್ಕೌಟ್​ ಮಾಡುತ್ತಿದ್ದಾರೆ. ಸ್ವತಃ ಅವರೇ ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ಹಂಚಿಕೊಂಡಿದ್ದಾರೆ. ಕಟ್ಟುಮಸ್ತಾದ ಅವರ ಬೈಸೆಪ್ಸ್​ ನೋಡಿ ಅಭಿಮಾನಿಗಳು ವಾವ್​ ಎನ್ನುತ್ತಿದ್ದಾರೆ.

ಹೊಸ ಸಿನಿಮಾಗಾಗಿ ಮಹೇಶ್​ ಬಾಬು ಅವರು ಸಿಕ್ಸ್​ ಪ್ಯಾಕ್​ ಮಾಡಬೇಕಿದೆ. ಅದಕ್ಕಾಗಿ ಅವರು ಹಾಲಿವುಡ್​ನ ಫಿಟ್ನೆಸ್​ ತರಬೇತಿದಾರರನ್ನು ಭಾರತಕ್ಕೆ ಕರೆಸಿಕೊಂಡಿದ್ದಾರೆ. ಆ ಪರಿಣಿತರ ಮಾರ್ಗದರ್ಶನದಲ್ಲಿ ಮಹೇಶ್​ ಬಾಬು ವರ್ಕೌಟ್​ ಮಾಡುತ್ತಿದ್ದಾರೆ. ಈ ಫೋಟೋದ ಜೊತೆ ಅವರು ಹೆಚ್ಚೇನೂ ಮಾಹಿತಿ ಹಂಚಿಕೊಂಡಿಲ್ಲ. ಆದರೂ ಕೂಡ ಇದು ರಾಜಮೌಳಿ ನಿರ್ದೇಶನದ ಚಿತ್ರಕ್ಕಾಗಿ ನಡೆಯುತ್ತಿರುವ ತಯಾರಿ ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ. ನೆಟ್ಟಿಗರು ಕಮೆಂಟ್​ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ: ಮಹೇಶ್​ ಬಾಬು ಪುತ್ರ ಗೌತಮ್​ ಆಗಾಗ ಆಸ್ಪತ್ರೆಗೆ ಹೋಗೋದು ಏಕೆ? ಫೋಟೋ ಸಮೇತ ವಿವರಿಸಿದ ನಮ್ರತಾ

ಸದ್ಯಕ್ಕೆ ಮಹೇಶ್​ ಬಾಬು ಅವರು ‘ಗುಂಟೂರು ಖಾರಂ’ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಕಾರಣಾಂತರಗಳಿಂದ ಈ ಚಿತ್ರದ ಕೆಲಸಗಳು ವಿಳಂಬ ಆಗಿವೆ. ಆದಷ್ಟು ಬೇಗ ಈ ಚಿತ್ರದ ಕೆಲಸವನ್ನು ಮುಗಿಸಿ, ರಾಜಮೌಳಿ ಜೊತೆಗಿನ ಸಿನಿಮಾದ ಚಿತ್ರೀಕರಣ ಆರಂಭಿಸಲಿ ಎಂದು ಫ್ಯಾನ್ಸ್​ ಬಯಸುತ್ತಿದ್ದಾರೆ. ‘ಆರ್​ಆರ್​ಆರ್​’ ಚಿತ್ರಕ್ಕೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಕ್ಕಿತು. ಆ ಬಳಿಕ ರಾಜಮೌಳಿ ಅವರು ಈ ಸಿನಿಮಾವನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಜೋರಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:39 pm, Thu, 12 October 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ